Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಜ್ಜನ ಬದಲು ಮೊಮ್ಮಗನ ಮರಣ ಪತ್ರ ನೀಡಿ ಎಡವಟ್ಟು
Team Udayavani, Jan 9, 2025, 4:27 AM IST
ಬೆಳಗಾವಿ: ತಾಲೂಕಿನ ಸಾವಗಾಂವ ಗ್ರಾಮದ ಜೀವಂತ ವ್ಯಕ್ತಿಯ ಹೆಸರಿನಲ್ಲಿ ಮರಣ ಪತ್ರ ನೀಡುವ ಮೂಲಕ ತಹಶೀಲ್ದಾರ್ ಕಚೇರಿ ಅಧಿಕಾರಿಗಳು ಎಡವಟ್ಟು ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಗಣಪತಿ ಖಾಚು ಕಾಕತಕರ (62) ಬದುಕಿದ್ದರೂ ಮರಣ ಪ್ರಮಾಣ ಪತ್ರ ನೀಡಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ದಾಖಲೆಗಳ ತಿದ್ದುಪಡಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಡಿಸಿಗೆ ಮನವಿ ಸಲ್ಲಿಸಿದ್ದಾರೆ. 1976, ಫೆ. 2ರಂದು ಗಣಪತಿ ಅವರ ಅಜ್ಜ ಮಸನು ಶಟ್ಟು ಕಾಕತಕರ ನಿಧನ ಹೊಂದಿದ್ದರು.
8 ಜನ ಮೊಮ್ಮಕ್ಕಳು ಜಾಗದ ವಾರಸಾ ಮಾಡಿಕೊಳ್ಳಲು ಅಜ್ಜನ ಮರಣ ಪ್ರಮಾಣ ಪತ್ರ ಪಡೆಯಲು ತಹಶೀಲ್ದಾರ್ ಕಚೇರಿಗೆ ಹೋಗಿದ್ದರು. ಮೊಮ್ಮಗ ಗಣಪತಿ ಕಾಕತಕರ ತಮ್ಮ ಆಧಾರ್ ಕಾರ್ಡ್ ನೀಡಿದಾಗ ಅಜ್ಜನ ಮರಣ ಪತ್ರ ನೀಡುವ ಬದಲು ಮೊಮ್ಮಗನ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ್ದರಿಂದ ಆಧಾರ್ ಕಾರ್ಡ್ ಲಾಕ್ ಆಗಿ ವೃದ್ಧಾಪ್ಯ ವೇತನ, ವೋಟಿಂಗ್ ಕಾರ್ಡ್ ರದ್ದಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.