ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

ನಕ್ಸಲರ ಶರಣಾಗತಿ ಕುರಿತು ಪ್ರಶ್ನಿಸಿದ್ದ ಬಿಜೆಪಿಗರಿಗೆ ಪ್ರತ್ಯುತ್ತರ

Team Udayavani, Jan 9, 2025, 4:49 AM IST

Naxal–Cm

ಬೆಂಗಳೂರು: ರಾಜ್ಯದಲ್ಲಿ 6 ಮಂದಿ ನಕ್ಸಲರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್‌ ಕುಮಾರ್‌, ಕಳೆದ ತಿಂಗಳು ಛತ್ತೀಸ್‌ಗಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಭಾಷ್ಪ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ನಕ್ಸಲರ ಶರಣಾಗತಿ ಕುರಿತು ಪ್ರಶ್ನಿಸಿದ್ದ ಬಿಜೆಪಿಗರಿಗೆ ಪತ್ರಿಕಾ ಹೇಳಿಕೆ ಮೂಲಕ ಪ್ರತ್ಯುತ್ತರ ಕೊಟ್ಟಿರುವ ಸಿಎಂ, ಅಮಿತ್‌ ಶಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್‌ ಕುಮಾರ್‌ ಅವರಿಗೆ ಇದೆಯೇ? ಪ್ರಶ್ನಿಸಿದ್ದಾರೆ. ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್‌ ದಂಪತಿಗೆ ಅಲ್ಲಿನ ಬಿಜೆಪಿ ಸರಕಾರದ ಉಪಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್‌ 41 ಲಕ್ಷ ರೂ.ನೆರವು ನೀಡಿರುವುದು ಶಾಸಕ ಸುನೀಲ್‌ ಕುಮಾರ್‌ಗೆ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಇದೆಯೇ? ಎಂದು ಪ್ರಶ್ನಿಸಿದರು.

ಶರಣಾಗಿರುವ ಈ ನಕ್ಸಲಿಯರು ಅನುಸರಿಸಿದ ಹಿಂಸಾ ಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ, ಇವರಲ್ಲಿ ಯಾರೊಬ್ಬರೂ ಜನರ ತೆರಿಗೆ ಹಣ ನುಂಗಿದ ಭ್ರಷ್ಟರೂ ಅಲ್ಲ. ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ ಎಂದು ಹೇಳಿದ್ದಾರೆ.

ಒಟ್ಟು 18 ನಕ್ಸಲರ ಶರಣಾಗತಿ
ಅನ್ಯಾಯ-ಶೋಷಣೆ ವಿರುದ್ಧ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು. ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರ ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವ ಧಿಯಲ್ಲೇ ನಮ್ಮ ಸರ್ಕಾರ ಪ್ರಾರಂಭಿಸಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಳೆದ ಅವಧಿಯಲ್ಲಿ ಹನ್ನೆರೆಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಶರಣಾಗಿರುವ ಆರು ಮಂದಿ ನಕ್ಸಲರು ಮುಂದಿನ ದಿನಗಳಲ್ಲಿ ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಬದುಕನ್ನು ಕಳೆಯಲಿದ್ದಾರೆ ಎಂಬ ನಂಬಿಕೆ ನನಗಿದೆ. ಈ ಆರು ಮಂದಿ ನಕ್ಸಲಿಯರ ಶರಣಾಗತಿಯ ನಂತರ ಕರ್ನಾಟಕ ನಕ್ಸಲ್‌ ಮುಕ್ತ ರಾಜ್ಯವಾಗಿದೆ ಎಂಬ ವಿಶ್ವಾಸ ನನಗಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಲು ಪ್ರಯತ್ನಿಸಿದ ಪುನರ್ವಸತಿ ಸಮಿತಿ ಸದಸ್ಯರು ಮತ್ತಿತರ ಸಾಮಾಜಿಕ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.