Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
ಮದ್ರಸಾಗಳಲ್ಲಿ ಕನ್ನಡ ಕಲಿಕಾ ಯೋಜನೆಗೂ ಹಿನ್ನಡೆ, ಬರುವ ಬಜೆಟ್‌ನಲ್ಲಿ 30 ಕೋಟಿ ರೂ. ಮೀಸಲಿಡಲು ಕೋರಿಕೆ
Team Udayavani, Jan 9, 2025, 7:50 AM IST
ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಮದ್ರಸಾಗಳಲ್ಲಿ ಕನ್ನಡ ಕಲಿಕಾ ಯೋಜನೆ ಸೇರಿದಂತೆ ಕನ್ನಡ ಭಾಷೆ ಬೆಳವಣಿಗೆ ನಿಟ್ಟಿನಲ್ಲಿ ಹಲವು ಹೊಸ ಯೋಜನೆಗಳನ್ನು ರೂಪಿಸಿದೆ. ಆದರೆ, ಸಕಾಲದಲ್ಲಿ ಆ ಯೋಜನೆಗಳ ಅನುಷ್ಠಾನ ಮಾಡುವುದಕ್ಕೆ ಹಣವಿಲ್ಲದೆ ಕೈ ಕಟ್ಟಿಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಬಜೆಟ್‌ನಲ್ಲಿ 30 ಕೋಟಿ ರೂ.ಅನುದಾನ ನೀಡುವಂತೆ ಸರಕಾರಕ್ಕೆ ಕೋರಿಕೆ ಸಲ್ಲಿಸಿದೆ.
ಸರಕಾರ ಈಗಾಗಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ 2 ಕೋಟಿ ರೂ. ಅನುದಾನ ನೀಡಿದೆ. ಆದರೆ, ಈ ಹಣ ಗಡಿನಾಡ ಕನ್ನಡ ಮಕ್ಕಳ ಫೆಲೋಶಿಪ್ ನೀಡಲು, ನೌಕರರ ಸಂಬಳ, ಸಾರಿಗೆ ವೆಚ್ಚಕ್ಕೆ ಮಾತ್ರ ಸಾಕಾಗುತ್ತದೆ. ಹೊಸ ಯೋಜನೆಗಳಿಗೆ ಹಣವಿಲ್ಲದಂತಾಗಿದೆ. ಹೀಗಾಗಿ ಪ್ರಾಧಿಕಾರದ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಆದರೆ, ಹಣ ಬಿಡುಗಡೆಗೆ ಭರಸೆ ಇನ್ನೂ ಸಿಕಿಲ್ಲ.
ಕನ್ನಡ ಕಲಿಕೆಗೆ 2 ಕೋಟಿ ರೂ.ಬೇಕು
ನಾಡಿನಾದ್ಯಂತ ಮದ್ರಸಾಗಳಲ್ಲಿ ಕನ್ನಡ ಕಲಿಕಾ ತರಗತಿ ನಡೆಸುವುದು ಪ್ರಾಧಿಕಾರದ ದೊಡ್ಡ ಯೋಜನೆ ಯಾಗಿದೆ. ಇದನ್ನು ಕರ್ನಾಟಕ ದಾದ್ಯಂತ ಜಾರಿ ಮಾಡುವುದಾದರೆ 400-500 ಶಿಕ್ಷಕರು ಬೇಕಾಗಲಿದ್ದು, ಸುಮಾರು 2 ಕೋಟಿ ರೂ. ವೆಚ್ಚವಾಗಲಿದೆ. ಇದನ್ನು ಈ ಹೊಸವರ್ಷ ದಿಂದಲೇ ಆರಂಭಿಸಬೇಕಿತ್ತು. ಅಷ್ಟು ಹಣ ಈಗ ಪ್ರಾಧಿಕಾರದಲ್ಲಿಲ್ಲ. ಕಲಬುರಗಿ ಸೇರಿ ಇತರೆಡೆ ನಡೆಸಬೇಕೆಂಬ ಒತ್ತಾಯಗಳು ಕೇಳಿಬರುತ್ತಿವೆ ಎಂದು ಹಿರಿಯ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಬಜೆಟ್‌ನಲ್ಲಿ ಅನುದಾನ ಲಭ್ಯವಾದರೆ ಅನುಷ್ಠಾನ ಮಾಡುವ ಆಲೋಚನೆಯಲ್ಲಿ ಪ್ರಾಧಿಕಾರವಿದೆ ಎಂದಿದ್ದಾರೆ.
ಹೊರ ರಾಜ್ಯದ 1200 ಜನರಿಗೆ ಕನ್ನಡ ಕಲಿಕೆ
ಬೆಂಗಳೂರಿನಲ್ಲಿ ನೆಲೆಸಿರುವ ಮಲಯಾಳಿ ಗರು ಸೇರಿ ಬ್ಯಾಂಕ್ ಉದ್ಯೋಗಿಗಳಿಗೆ ಕನ್ನಡ ಕಲಿಕೆ ತರಗತಿ ನಡೆಸಲಾಗಿದೆ. ವಿವಿಧ ಭಾಷೆಗಳ ಸುಮಾರು 1200 ಜನ ಕನ್ನಡ ಕಲಿಯುತ್ತಿದ್ದಾರೆ. ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
ಮಾರ್ಚ್ ಒಳಗೆ 5 ಕೋ. ರೂ. ನೀಡಿ
ಮಾರ್ಚ್ ಬಜೆಟ್ ಮಂಡನೆ ಒಳಗೆ 5 ಕೋಟಿ ರೂ. ನೀಡಿ ಎಂದು ಸರಕಾರಕ್ಕೆ ಪ್ರಾಧಿಕಾರ ಬೇಡಿಕೆಯಿಟ್ಟಿದೆ. ಸಿಎಂ ಸಿದ್ದರಾಮಯ್ಯ ಗಮನಕ್ಕೂ ಹಣಕಾಸಿನ ಪರಿಸ್ಥಿತಿ ತರಲಾಗಿದೆ. ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳನ್ನು ಕೂಡ ಭೇಟಿ ಮಾಡಲಾಗಿದೆ. ಆದರೆ, ಏನು ಮಾಡುತ್ತಾರೋ ಗೊತ್ತಿಲ್ಲ. ಕಾರ್ಯಕ್ರಮ ರೂಪಿಸಲು ನಮಗೆ ತೊಂದರೆ ಇಲ್ಲ. ಹೊಸ ಯೋಜನೆ ರೂಪಿಸಲು ಜನರೂ ಇದ್ದಾರೆ. ಆದರೆ, ಅದರ ಜಾರಿಗೆ ಬೇಕಾದ ಆರ್ಥಿಕತೆ ಇಲ್ಲದೆ ಹೋದರೆ ಏನೂ ಮಾಡಲಾಗದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಗಳು ಹೇಳಿವೆ.
ಮದ್ರಸಾಗಳಲ್ಲಿ ಕನ್ನಡ ಕಲಿಕೆ ಸೇರಿದಂತೆ ಹಲವು ಹೊಸ ಕಾರ್ಯಕ್ರಮ ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಬಜೆಟ್‌ನಲ್ಲಿ 30 ಕೋಟಿ ರೂ. ನೀಡುವಂತೆ ಸರಕಾರಕ್ಕೆ ಮನವಿ ಸಲ್ಲಿಸ ಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಪ್ರಾಧಿಕಾರವನ್ನು ಬೆನ್ನುತಟ್ಟಿ ಪ್ರೋತ್ಸಾಹಿಸುತ್ತಿದ್ದಾರೆ. ಪ್ರಾಧಿಕಾರದ ಬೇಡಿಕೆಗೆಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಾರೆ ಎಂಬ ವಿಶ್ವಾಸ ನನಗೆ ಇದೆ. – ಪುರೋಷೋತ್ತಮ ಬಿಳಿಮಲೆ, ಅಧ್ಯಕ್ಷರು ಕನ್ನಡ ಅಭಿವೃದ್ಧಿ ಪ್ರಾಧಿಕಾರ
- ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.