Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Team Udayavani, Jan 9, 2025, 2:39 PM IST

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

ಮುಂಬಯಿ: ರಜಾ ದಿನಗಳಲ್ಲಿ ಬಹು ನಿರೀಕ್ಷಿತ ಸಿನಿಮಾಗಳು ತೆರೆಗೆ ಬರುವುದು ಇತ್ತೀಚೆಗಿನ ವರ್ಷದಲ್ಲಿ ಸಾಮಾನ್ಯವಾಗಿದೆ. ಪ್ಯಾನ್‌ ಇಂಡಿಯಾದಂತಹ ಚಿತ್ರಗಳು ದೊಡ್ಡ ಹಬ್ಬ ಅಥವಾ ವಿಶೇಷ ದಿನದಂದು ಆಗುತ್ತವೆ.

2025ರಲ್ಲಿ ದೊಡ್ಡ ಬಾಕ್ಸಾಫೀಸ್‌ ದಂಗಲ್‌ ಉಂಟಾಗುವ ಸಾಧ್ಯತೆಯಿದೆ. ಒಂದೇ ವಾರದಲ್ಲಿ ಮೂರು ದೊಡ್ಡ ಚಿತ್ರಗಳು ಥಿಯೇಟರ್‌ಗೆ ಎಂಟ್ರಿ ಕೊಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಈಗಾಗಲೇ ಸಖತ್‌ ಹೈಪ್‌ ಕ್ರಿಯೇಟ್‌ ಮಾಡಿರುವ ʼವಾರ್‌ -2ʼ (War -2) ಬಾಲಿವುಡ್‌ನಲ್ಲಿ ರಿಲೀಸ್‌ ಆಗಲಿರುವ ವರ್ಷದ ಬಹುನಿರೀಕ್ಷಿತ ಹಾಗೂ ಬಿಗ್‌ ಬಜೆಟ್‌ ಸಿನಿಮಾಗಳಲ್ಲೊಂದು. ಹೃತಿಕ್‌ ರೋಷನ್‌ (Hrithik Roshan), ಜೂ.ಎನ್‌ ಟಿಆರ್‌ (Jr NTR) ಹಾಗೂ ಕಿಯಾರ ಅಡ್ವಾಣಿ (Kiara Advani) ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮಲ್ಟಿಸ್ಟಾರ್ಸ್‌ ʼವಾರ್‌ -2ʼ ಏಪ್ರಿಲ್‌ ತಿಂಗಳಿನಲ್ಲಿ ಶೂಟ್‌ ಮುಗಿಸಿ, ಆಗಸ್ಟ್‌ 15ರ ಸಂದರ್ಭದಲ್ಲಿ ರಿಲೀಸ್‌ ಆಗುವ ಪ್ಲ್ಯಾನ್‌ ಹಾಕಿಕೊಂಡಿದೆ ಎನ್ನಲಾಗಿದೆ.

ಈ ಚಿತ್ರದ ಜತೆ ಬಾಲಿವುಡ್‌ನ ಮತ್ತೊಂದು ಬಹುನಿರೀಕ್ಷಿತ  ʼಲಾಹೋರ್: 1947ʼ (Lahore: 1947) ಸಿನಿಮಾ ಕೂಡ ಆಗಸ್ಟ್‌ 15ರ ವೀಕೆಂಡ್‌ನಲ್ಲೇ ತೆರೆಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ. ಭಾರತದ ಸ್ವಾತಂತ್ಯದ ಸುತ್ತ ಸಾಗುವ ಈ ಸಿನಿಮಾ ಆಗಸ್ಟ್‌ 15ರಂದೇ ರಿಲೀಸ್‌ ಆಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಬಹು ಸಮಯದ ಬಳಿಕ ಆಮೀರ್‌ ಖಾನ್‌ (Aamir Khan) ಈ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಂಬ್ಯಾಕ್‌ ಮಾಡಲಿದ್ದಾರೆ. ಅತಿಥಿ ಪಾತ್ರದಲ್ಲಿ ಅವರು ನಟಿಸಲಿದ್ದಾರೆ. ಪ್ರಧಾನ ಪಾತ್ರದಲ್ಲಿ ಸನ್ನಿ ಡಿಯೋಲ್‌ (Sunny Deol), ಪ್ರೀತಿ ಜಿಂಟಾ (Preity Zinta) ಕಾಣಿಸಿಕೊಳ್ಳಲಿದ್ದಾರೆ.

ಈ ಎರಡು ಚಿತ್ರಗಳಿಗೆ ಟಕ್ಕರ್‌ ನೀಡಲು ಕಾಲಿವುಡ್‌ನಿಂದ ಸೂಪರ್‌ ಸ್ಟಾರ್‌ ರಜಿನಿಕಾಂತ್‌ (Rajinikanth) ಅವರ ʼಕೂಲಿʼ (Coolie) ಚಿತ್ರ ರಿಲೀಸ್‌ ಆಗಲಿದೆ.

ಲೋಕೇಶ್‌ ಕನಕರಾಜ್‌ (Lokesh Kanagaraj) ನಿರ್ದೇಶನದ ʼಕೂಲಿʼ ಈಗಾಗಲೇ ಶೇ.70 ರಷ್ಟು ಚಿತ್ರೀಕರಣ ಮುಗಿಸಿದೆ. ಜನವರಿ ಮಧ್ಯದಲ್ಲಿ ಮುಂದಿನ ಹಂತದ ಚಿತ್ರೀಕರಣ ಶುರುವಾಗಲಿದೆ ಎನ್ನಲಾಗಿದೆ.

‘ಕೂಲಿʼಯಲ್ಲಿ ಮಲ್ಟಿಸ್ಟಾರ್ಸ್‌ ಗಳಿರಲಿದ್ದಾರೆ. ಬಾಲಿವುಡ್‌ ನಟ ಆಮೀರ್‌ ಖಾನ್‌, ಕನ್ನಡದ ಉಪೇಂದ್ರ, ಟಾಲಿವುಡ್‌ನ ನಾಗಾರ್ಜುನ್‌, ಶ್ರುತಿ ಹಾಸನ್‌, ಮಾಲಿವುಡ್ ನ ಶೌಬಿನ್‌ ಸೇರಿದಂತೆ ದೊಡ್ಡ ಪಾತ್ರವರ್ಗವೇ ಇರಲಿದೆ.

ʼಕೂಲಿʼ ಆಗಸ್ಟ್ 15ರ ಸಂದರ್ಭದಲ್ಲೇ ರಿಲೀಸ್‌ ಆಗಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.  ಒಂದು ವೇಳೆ ಅಂದುಕೊಂಡಂತೆ ಈ ಮೂರು ಚಿತ್ರಗಳು ಒಂದೇ ವಾರದಲ್ಲಿ ರಿಲೀಸ್‌ ಆದರೆ ಬಾಕ್ಸಾಫೀಸ್‌ನಲ್ಲಿ ದಂಗಲ್‌ ಆಗುವುದರ ಜತೆಗೆ ಪ್ರೇಕ್ಷಕರಿಗೆ ಸಖತ್‌ ಮನರಂಜನೆ ಸಿಗುವುದು ಪಕ್ಕಾ.

ಟಾಪ್ ನ್ಯೂಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.