Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Team Udayavani, Jan 9, 2025, 4:10 PM IST
ಧಾರವಾಡ: ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ನೀಡಿದ್ದಾರೆನ್ನಲಾದ ಹೇಳಿಕೆ ವಿರೋಧಿಸಿ ಗುರುವಾರ (ಜ.09) ಹುಬ್ಬಳ್ಳಿ, ಧಾರವಾಡ ಅವಳಿನಗರ ಬಂದ್ಗೆ ದಲಿತಪರ ಸಂಘಟನೆಗಳು ನಡೆಸುತ್ತಿರುವ ಬಂದ್ ವೇಳೆ ಕೆಲವರು ಜನಸಾಮಾನ್ಯರ ಮೇಲೆ ಹಲ್ಲೆ ನಡೆಸಿದ್ದಾರೆ.
ಬೆಳಿಗ್ಗೆ 6 ಗಂಟೆಯಿಂದಲೇ ದಲಿತಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಮುಖಂಡರು ಬಂದ್ ಮತ್ತು ಪ್ರತಿಭಟನೆಗೆ ಇಳಿದಿದ್ದಾರೆ. ಆದರೆ ಕೆಲವು ಕಡೆಗಳಲ್ಲಿ ಹೋಟೆಲ್ಗಳಿಗೆ ನುಗ್ಗಿದ ಪ್ರತಿಭಟನಾಕಾರರು ಅವುಗಳನ್ನು ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸಿದ ದೃಶ್ಯಗಳು ಕಂಡುಬಂದವು.
ಶ್ರೀನಗರ ವೃತ್ತದಲ್ಲಿ ರಸ್ತೆ ಮೇಲೆ ಇಡ್ಲಿ, ಸಾಂಬಾರ ಮಾರಾಟ ಮಾಡುತ್ತಿದ್ದ ವ್ಯಕ್ತಿಗೆ ಸ್ಥಳದಿಂದ ಹೋಗುವಂತೆ ಪ್ರತಿಭಟನಾಕಾರರು ಎಚ್ಚರಿಕೆ ನೀಡುವುದನ್ನು ಬಿಟ್ಟು ಆತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಯಾವುದೇ ಒತ್ತಾಯ ಪೂರ್ವಕ ಬಂದ್ ಮಾಡಬಾರದು ಎಂದು ಆದೇಶವಿದ್ದರೂ ಈ ರೀತಿ ನಡೆದುಕೊಂಡಿರುವುದು ಸಾರ್ವಜನಿಕರ ಕಣ್ಣು ಕೆಂಪಾಗಿಸಿದೆ.
ಅದೇ ರೀತಿ ಸರ್.ಸಿದ್ದಪ್ಪ ಕಂಬಳಿ ಕಾನೂನು ಕಾಲೇಜು ಕಾರ್ಯಾರಂಭ ಮಾಡಿದ್ದನ್ನು ಗಮನಿಸಿದ ಪ್ರತಿಭಟನಾಕಾರರು ಆ ಕಾಲೇಜಿಗೆ ನುಗ್ಗಿ ವಿದ್ಯಾರ್ಥಿಗಳನ್ನು ಹೊರ ಕಳುಹಿಸಿದ್ದಾರೆ. ಅಲ್ಲದೇ ಉಪನ್ಯಾಸಕರೊಂದಿಗೆ ವಾಗ್ವಾದ ನಡೆಸಿ ಉಪನ್ಯಾಸಕರನ್ನೂ ತಳ್ಳಾಡಿ ಕಾಲೇಜು ಬಂದ್ ಮಾಡಿಸಿದ ಪ್ರಸಂಗ ಕೂಡ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
ಕಾಂಗ್ರೆಸ್ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
MUST WATCH
ಹೊಸ ಸೇರ್ಪಡೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.