Katapady: ಕಾರ್ಮಿಕ ಕುಸಿದು ಬಿದ್ದು ಸಾವು
Team Udayavani, Jan 9, 2025, 8:45 PM IST
ಕಾಪು: ಕಂಟೈನರ್ನಿಂದ ಪ್ಲಾಸ್ಟಿಕ್ ಡಬ್ಬಗಳನ್ನು ಇಳಿಸುತ್ತಿದ್ದ ಕಾರ್ಮಿಕ ಕುಸಿದು ಬಿದ್ದು ಮೃತಪಟ್ಟ ಘಟನೆ ಜ. 8ರಂದು ಕಟಪಾಡಿಯಲ್ಲಿ ಸಂಭವಿಸಿದೆ.
ಬಾಗಲಕೋಟೆ ಮೂಲದ, ಪ್ರಸ್ತುತ ಉಡುಪಿ ಬೀಡಿನಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಈಶ್ವರ್ (42) ಮೃತಪಟ್ಟವರು.
ಇವರು ವಿಷ್ಣುವರ್ಧನ್ ಎಂಬವರ ಜತೆಗೆ ಕಟಪಾಡಿಯ ಇಮ್ರಾನ್ ಖಾನ್ ಅವರ ಕಂಟೈನರ್ ಲಾರಿಯಿಂದ ಪ್ಲಾಸ್ಟಿಕ್ ಡಬ್ಬಗಳನ್ನು ಇಳಿಸಿ ಗೋಡೌನ್ನಲ್ಲಿ ಸಂಗ್ರಹಿಸಿಡುವ ಕೆಲಸ ಮಾಡುತ್ತಿದ್ದರು. ಬುಧವಾರ ಕೆಲಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದ ಇವರನ್ನು ಸ್ಥಳೀಯರು ಮತ್ತು ಜತೆಗಿದ್ದ ಕಾರ್ಮಿಕರು ಕೂಡಲೇ ಉಡುಪಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಪರಿಶೀಲಿಸಿದ ವೈದ್ಯರು ಈಶ್ವರ್ ಹೃದಯಾಘಾತದಿಂದಾಗಿ ಮೃತಪಟ್ಟಿರುವುದಾಗಿ ತಿಳಿಸಿದ್ದರು.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.