Nagaland; ವಾಹನ ಕಂದಕಕ್ಕೆ ಬಿದ್ದು ಬೆಳಗಾವಿ ಯೋಧ ಹುತಾತ್ಮ
16 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು...
Team Udayavani, Jan 9, 2025, 11:01 PM IST
ಬೆಳಗಾವಿ: ನಾಗಾಲ್ಯಾಂಡ್ ಅಸ್ಸಾಂ ರೈಫಲ್ಸ್ 41ನೇ ಬಟಾಲಿಯನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳಗಾವಿ ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದ ಯೋಧ ಅಪಘಾತದಲ್ಲಿ ಹುತಾತ್ಮರಾಗಿದ್ದಾರೆ.
ನಿಂಗ್ಯಾನಟ್ಟಿ ಗ್ರಾಮದ ಯೋಧ ರವಿ ಯಲ್ಲಪ್ಪ ತಳವಾರ(35) ಅವರು ನಾಗಾಲ್ಯಾಂಡ್‌ನಲ್ಲಿ ರಸ್ತೆ ಮಾರ್ಗವಾಗಿ ಹೊರಟಿದ್ದಾಗ ಪಕ್ಕದ ಕಂದಕಕ್ಕೆ ವಾಹನ ಉರುಳಿದೆ. ಇದರಿಂದ ಕೆಳಗೆ ಜಿಗಿದಾಗ ಇವರ ಮೇಲೆಯೇ ವಾಹನ ಪಲ್ಟಿಯಾಗಿ ಬಿದ್ದಿದ್ದು, ಅಪಾಘಾತದಲ್ಲಿ ರವಿ ಸೇರಿ ಮೂವರು ಹುತಾತ್ಮರಾಗಿದ್ದಾರೆ.
16 ವರ್ಷಗಳಿಂದ ನಾಗಾಲ್ಯಾಂಡ್ ರೈಫಲ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ರವಿಚಂದ್ರ ತಳವಾರ ಹುತಾತ್ಮರಾಗಿದ್ದು, ಇನ್ನೂ ನಾಲ್ಕು ವರ್ಷಗಳಲ್ಲಿ ನಿವೃತ್ತರಾಗಲಿದ್ದರು. ಮೃತರು ಪತ್ನಿ ಶೀತಲ್ ತಳವಾರ, 11 ವರ್ಷದ ಪುತ್ರಿ ಹಾಗೂ 8 ವರ್ಷದ ಪುತ್ರ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ಇನ್ನೊಬ್ಬ ಚಿಕ್ಕ ಸಹೋದರ ಶಿವರಾಜ ತಳವಾರ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನಿಬ್ಬರು ಸಹೋದರರು ಊರಲ್ಲಿಯೇ ಕೆಲಸ ಮಾಡುತ್ತಿದ್ದಾರೆ. ಶುಕ್ರವಾರ ಮಧ್ಯಾಹ್ನ ರವಿ ಅವರ ಮೃ*ತದೇಹ ಬೆಳಗಾವಿಗೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.