Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಅನರ್ಹ ಕಾರ್ಡ್‌ ಮರಳಿಸಲು ಕಾಲಾವಕಾಶ ನೀಡಿ ಬಳಿಕ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಆದೇಶ

Team Udayavani, Jan 9, 2025, 11:59 PM IST

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಸ್ವತಃ ತಾವೇ ತಾತ್ಕಾಲಿಕ ತಡೆಯೊಡ್ಡಿದ್ದ ಅನರ್ಹ ಬಿಪಿಎಲ್‌ ಕಾರ್ಡ್‌ಗಳಿಗೆ ಕತ್ತರಿ ಹಾಕುವ ಪ್ರಕ್ರಿಯೆಗೆ ಮರುಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ನಿರ್ದೇಶನ ನೀಡಿದರು.

ರಾಜ್ಯದಲ್ಲಿ ಒಟ್ಟಾರೆ 1.53 ಕೋಟಿ ವಿವಿಧ ಪ್ರಕಾರದ ಪಡಿತರಚೀಟಿಗಳಿದ್ದು, 5.30 ಕೋಟಿ ಸದಸ್ಯ ಫ‌ಲಾನುಭವಿಗಳಿ¨ªಾರೆ. ಇದರಲ್ಲಿ ಆದ್ಯತಾ ಪಡಿತರ ಚೀಟಿ (ಬಿಪಿಎಲ್‌ ಕಾರ್ಡ್‌)ದಾರರು ಬಹುಪಾಲು ಅಂದರೆ 1.27 ಕೋಟಿ ಇದ್ದಾರೆ. ಆದರೆ ಕೇಂದ್ರ ಸರಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದೆ ಬಿಪಿಎಲ್‌ ಪಡಿತರಚೀಟಿ ಹೊಂದಿದ್ದಾರೆ. ಅಂತಹವರನ್ನು ಗುರುತಿಸಿ ತೆಗೆದು ಹಾಕಬೇಕು ಎಂದು ಖಡಕ್‌ ಸೂಚನೆ ನೀಡಿದರು.

ಅರ್ಹರದ್ದು ರದ್ದು ಮಾಡದಿರಿ
ಅನರ್ಹ ಬಿಪಿಎಲ್‌ ಪಡಿತರ ಚೀಟಿದಾರರು ತಮ್ಮ ಕಾರ್ಡ್‌ ಗಳನ್ನು ಹಿಂದಿರುಗಿಸಲು ಕಾಲಾವಕಾಶ ನೀಡಬೇಕು. ಬಳಿಕ ಅಂಥವರಿಗೆ ನೋಟಿಸ್‌ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ ಸಿಎಂ, ಈ ಪ್ರಕ್ರಿಯೆಯಲ್ಲಿ ಒಬ್ಬನೇ ಒಬ್ಬ ಅರ್ಹ ಬಿಪಿಎಲ್‌ ಕಾರ್ಡುದಾರರನ್ನು ರದ್ದು ಮಾಡಬಾರದು ಎಂದೂ ಸ್ಪಷ್ಟವಾಗಿ ಹೇಳಿದರು.
ಈಗಾಗಲೇ 4 ಸಾವಿರ ಸರಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ 4,692 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್‌ ಅಂತ್ಯದವರೆಗೆ 3,253 ಕೋಟಿ ರೂ. ವೆಚ್ಚ ಮಾಡಲಾಗಿದೆ. 4.44 ಕೋಟಿ ಫ‌ಲಾನುಭವಿಗಳು ಇದರ ಲಾಭ ಪಡೆಯುತ್ತಿ¨ªಾರೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.

ಪೆಟ್ರೋಲ್‌ ಬಂಕ್‌ ತಪಾಸಣೆ ಹೆಚ್ಚಿಸಿ
ರಾಜ್ಯದಲ್ಲಿ 4,518 ಪೆಟ್ರೋಲ್‌ ಬಂಕ್‌ಗಳಿದ್ದು, ಡಿಸೆಂಬರ್‌ ಅಂತ್ಯದವರೆಗೆ 503 ಪೆಟ್ರೋಲ್‌ ಬಂಕ್‌ಗಳ ತಪಾಸಣೆ ಮಾಡಲಾಗಿದೆ. ತಪಾಸಣೆಯನ್ನು ಹೆಚ್ಚಿಸಿ ಅಳತೆ ಮತ್ತು ಗುಣಮಟ್ಟದಲ್ಲಿ ಮೋಸದಂತಹ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದರು.

ಕನಿಷ್ಠ ಬೆಂಬಲ ಬೆಲೆ ಅಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆಯಾಗದಂತೆ ತ್ವರಿತವಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

6

Mangaluru: ಕರಾವಳಿ ಖಗೋಳ ಉತ್ಸವ; ಉಲ್ಕಾ ತುಣುಕು, ನಕ್ಷತ್ರ ವೀಕ್ಷಣೆ ಅವಕಾಶ

5

Bajpe: ಇನ್ಮುಂದೆ ದೀಪಗಳಿಂದ ಬೆಳಗ‌ಲಿದೆ ವಿಮಾನ ನಿಲ್ದಾಣ ರಸ್ತೆ

ulock

Sandalwood: ಅನ್‌ಲಾಕ್‌ ರಾಘವದಿಂದ ಲಾಕ್‌ ಸಾಂಗ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.