Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Team Udayavani, Jan 10, 2025, 11:56 AM IST
ಶಿವಮೊಗ್ಗ: ರಸ್ತೆ ಬದಿಯಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋಗಿರುವ ಘಟನೆ ನಗರದ ಶ್ರೀರಾಮಪುರದಲ್ಲಿ ನಡೆದಿದೆ.
ಗುರುವಾರ (ಜ.10) ರಾತ್ರಿ ಹೆರಿಗೆಯಾಗಿರುವ ಸಾಧ್ಯತೆಯಿದ್ದು, ಹೆರಿಗೆಯಾದ ಬಳಿಕ ತಾಯಿ ಮಗುವನ್ನು ಕೈ ಚೀಲದಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಬಿಟ್ಟು ಹೋಗಿದ್ದಾರೆ.
ನಗರದ ಶ್ರೀರಾಮಪುರದ 2ನೇ ಕ್ರಾಸ್ ನಲ್ಲಿ ಬೋರೆವೆಲ್ ಬಳಿ ಚೀಲದಲ್ಲಿ ಗಂಡು ಶಿಶುವನ್ನು ಬಿಟ್ಟು ಹೋಗಿದ್ದು, ಶುಕ್ರವಾರ ಬೆಳಿಗ್ಗೆ ಸ್ಥಳೀಯರು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಆರೋಗ್ಯ ಇಲಾಖೆಯವರು ಬರುವ ಮೊದಲೇ ಸ್ಥಳೀಯರು ಮಗುವನ್ನು ರಕ್ಷಿಸಿ ಸ್ನಾನ ಮಾಡಿಸಿ, ಆರೈಕೆ ಮಾಡಿದ್ದಾರೆ. ಸದ್ಯ ಮಗುವನ್ನು ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಶಿಶು ಅಭಿವೃದ್ದಿ ಯೋಜನಾಧಿಕಾರಿ ಗಂಗಾಭಾಯಿ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ.
ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
MUST WATCH
ಹೊಸ ಸೇರ್ಪಡೆ
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.