Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
Team Udayavani, Jan 10, 2025, 12:00 PM IST
ನವದೆಹಲಿ: ಉತ್ತರ ಭಾರತದಲ್ಲಿ ತೀವ್ರ ಚಳಿ ವಾತಾವರಣ ಮುಂದುವರಿದಿರುವ ನಡುವೆಯೇ ಶುಕ್ರವಾರ (ಜನವರಿ 10) ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟವಾದ ಮಂಜು ಮುಸುಕಿದ ವಾತಾವರಣದಿಂದಾಗಿ ಎದುರಿನ ರಸ್ತೆಯೇ ಕಾಣಿಸದಂತಾಗಿ ವಾಹನ ಸವಾರರು ಪರದಾಡುವಂತಾಗಿದೆ. ಅಲ್ಲದೇ ಝೀರೋ ವಿಸಿಬಿಲಿಟಿಯಿಂದಾಗಿ 270ಕ್ಕೂ ಅಧಿಕ ವಿಮಾನಗಳು ನಿಲ್ದಾಣಕ್ಕೆ ವಿಳಂಬವಾಗಿ ಆಗಮಿಸಿರುವುದಾಗಿ ವರದಿ ತಿಳಿಸಿದೆ.
ದಟ್ಟ ಮಂಜು ಕವಿದ ವಾತಾವರಣದಿಂದ ವಿಮಾನ, ರೈಲು ಸಂಚಾರ ಹಾಗೂ ವಾಹನ ಸವಾರರ ಮೇಲೆ ಪರಿಣಾಮ ಬೀರಿರುವುದಾಗಿ ವರದಿ ವಿವರಿಸಿದೆ. ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ದಾಖಲೆ ಪ್ರಮಾಣ ಝೀರೋ ವಿಸಿಬಿಲಿಟಿ ದಾಖಲಾಗಿತ್ತು.
ದಟ್ಟ ಮಂಜು ಕವಿದ ವಾತಾವರಣದ ಜತೆಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಿದ್ದ 200ಕ್ಕೂ ಅಧಿಕ ವಿಮಾನಗಳು ವಿಳಂಬವಾಗಿದ್ದು, 5 ವಿಮಾನ ಸಂಚಾರ ರದ್ದುಪಡಿಸಲಾಗಿದೆ ಎಂದು ವರದಿ ತಿಳಿಸಿದೆ.
ಈ ವಾತಾವರಣದಿಂದಾಗಿ ವಿಮಾನ ನಿಲ್ದಾನ, ರಸ್ತೆ ಹಾಗೂ ರೈಲು ಸಂಚಾರದ ಮಾರ್ಗದ ಮೇಲೆ ಪರಿಣಾಮ ಬೀರಲಿದ್ದು, ಇದರಿಂದ ಸಂಚಾರ ವಿಳಂಬವಾಗಲಿದೆ. ಟ್ರಾಫಿಕ್ ಜಾಮ್ ಸಮಸ್ಯೆ ಕೂಡಾ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.