Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
ವೈದ್ಯೆಗೆ 2.5 ಕೋಟಿ ರೂ., 2.3 ಕೆಜಿ ಚಿನ್ನಾಭರಣ ವಂಚಿಸಿರುವ ಪ್ರಕರಣ
Team Udayavani, Jan 10, 2025, 12:39 PM IST
ಬೆಂಗಳೂರು: ಮಾಜಿ ಸಂಸದ ಡಿ. ಕೆ. ಸುರೇಶ್ ಅವರ ಸಹೋದರಿ ಎಂದು ಹೇಳಿಕೊಂಡು ಚಿನ್ನಾಭ ರಣ ಮತ್ತು ಹಣ ಪಡೆದು ವಂಚಿಸಿದ ಆರೋಪಕ್ಕೆ ಸಂಬಂಧಿಸಿದ 3ನೇ ಪ್ರಕರಣದಲ್ಲಿ ಐಶ್ವರ್ಯಾ ವಿರುದ್ಧ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ.
ರಾಜರಾಜೇಶ್ವರಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ಎಫ್ ಐಆರ್ ಮತ್ತು ವಿಚಾರಣಾ ಪ್ರಕ್ರಿಯೆ ರದ್ದು ಪಡಿಸಬೇಕು ಎಂದು ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ.ಎನ್. ಹರೀಶ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ಎಸ್. ಆರ್.ಕೃಷ್ಣ ಕುಮಾರ್ ಅವರ ಏಕಸದಸ್ಯ ನ್ಯಾಯಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಸಂದೇಶ್ ಜೆ. ಚೌಟ ಅವರು ವಾದಿಸಿದರು. ವಾದ ಆಲಿಸಿದ ನ್ಯಾಯಪೀಠವು, ಅರ್ಜಿದಾರರ ವಿರುದ್ಧ ಮುಂದಿನ ವಿಚಾರಣೆವರೆಗೂ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಆದೇಶಿಸಿತು. ಪ್ರಕರಣಕ್ಕೆ ಸಂಬಂಧಿ ಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಸ್ತ್ರೀರೋಗ ತಜ್ಞೆ ಡಾ.ಮಂಜುಳಾ ಎ. ಪಾಟೀಲ ಅವರು ತಮಗೆ ಐಶ್ವರ್ಯಾ ಗೌಡ 2.5 ಕೋಟಿ ರೂ ಮತ್ತು 2.3 ಕೆಜಿ ಚಿನ್ನ ವಂಚಿಸಿದ್ದಾರೆ ಎಂದು ಸಲ್ಲಿಸಿರುವ ದೂರಿನ ಅನ್ವಯ ಆರ್.ಆರ್. ನಗರ ಠಾಣೆ ಪೊಲೀ ಸರು ದೂರು ದಾಖಲಿಸಿದ್ದರು. ಈ ಕುರಿತಂತೆ 4ನೇ ಹೆಚ್ಚುವರಿ ಚೀಫ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ನ್ಯಾಯಿಕ ವಿಚಾರಣೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.