Trasi: ಸಾಂಪ್ರದಾಯಿಕ ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ, ಗೋಪಾಲ ಪೂಜಾರಿ ಭಾಗಿ
Team Udayavani, Jan 10, 2025, 2:55 PM IST
ಕುಂದಾಪುರ: ಸಾಂಪ್ರದಾಯಿಕ ಮೀನುಗಾರರಿಂದ ತ್ರಾಸಿಯಲ್ಲಿ ಜ.10ರ ಶುಕ್ರವಾರ ಬೃಹತ್ ಪ್ರತಿಭಟನೆ ನಡೆದಿದೆ.
ಲೈಟ್ ಫಿಶಿಂಗ್ ಮೀನುಗಾರಿಕೆ, ಅವೈಜ್ಞಾನಿಕ ಮೀನುಗಾರಿಕೆ ನಿಷೇಧಕ್ಕೆ ಆಗ್ರಹಿಸಿ ಬೈಂದೂರು ವಲಯ, ಗಂಗೊಳ್ಳಿ ವಲಯದ ನೇತೃತ್ವದಲ್ಲಿ ತ್ರಾಸಿಯ ಕಡಲ ತೀರದಲ್ಲಿ ಪ್ರತಿಭಟನೆ ನಡೆದಿದ್ದು, ಸಾವಿರಾರು ನಾಡದೋಣಿಗಳಿಗೆ ತ್ರಾಸಿಯ ಕಡಲ ತೀರದಲ್ಲಿ ಲಂಗರು ಹಾಕಲಾಗಿತ್ತು.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ನಾಡದೋಣಿ ಮೀನುಗಾರರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಹೆದ್ದಾರಿ ತಡೆ ಹಿನ್ನೆಲೆ ; ಬಿಗಿ ಪೊಲೀಸ್ ಬಂದೋಬಸ್ತ್
ಹೆದ್ದಾರಿ ತಡೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಾಡದೋಣಿ ಮೀನುಗಾರರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಮುನ್ನೆಚ್ಚರಿಕೆ ಹಿನ್ನೆಲೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕ ಗೋಪಾಲ ಪೂಜಾರಿ ಹಾಗೂ ಇತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಡಂಪಿಂಗ್ ಯಾರ್ಡ್ ಆದ ಮಣ್ಣಪಳ್ಳ!
Udupi: ಒಂದೇ ವೃತ್ತ; ಪೊಲೀಸ್ ಚೌಕಿ 5!; ಕಲ್ಸಂಕ ಜಂಕ್ಷನ್ನಲ್ಲಿ ಮುಗಿಯದ ಸಂಚಾರ ಸಮಸ್ಯೆ
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.