Maha Kumbh; ಜಾಗ ಕೇಳಿದರೆ ಹುಷಾರ್: ವಕ್ಫ್ ಬೋರ್ಡ್ಗೆ ಎಚ್ಚರಿಕೆ ನೀಡಿದ ಯೋಗಿ
Team Udayavani, Jan 11, 2025, 6:27 AM IST
ಲಕ್ನೋ: ‘ಜಾಗ ನಮ್ಮದು ಎಂದು ಹೇಳಿಕೊಳ್ಳುವ ಉದ್ದೇಶದಿಂದ ಕುಂಭಮೇಳಕ್ಕೆ ಆಗಮಿಸಿದರೆ ಹುಷಾರ್’ ಎಂದು ವಕ್ಫ್ ಬೋರ್ಡ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
ವಕ್ಫ್ ಬೋರ್ಡ್ಗೆ ಸೇರಿದ ಜಾಗದಲ್ಲಿ ಕುಂಭಮೇಳ ಆಯೋಜಿಸಲಾಗುತ್ತಿದೆ ಎಂದು ಮುಸ್ಲಿಂ ಧರ್ಮಗುರುವೊಬ್ಬರು ಹೇಳಿದ 2 ದಿನದ ಬಳಿಕ ಯೋಗಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿವಾಹಿನಿಯೊಂದರ ಜತೆ ಶುಕ್ರವಾರ ಮಾತನಾಡಿದ ಅವರು, “ಭಾರತದ ಸಂಸ್ಕೃತಿಯನ್ನು ಗೌರವಿಸುವವರು ಪ್ರಯಾಗ್ರಾಜ್ಗೆ ಭೇಟಿ ನೀಡುವುದನ್ನು ಸ್ವಾಗತಿಸುತ್ತೇವೆ. ಆದರೆ ಕೆಟ್ಟ ಆಲೋಚನೆಗಳೊಂದಿಗೆ ಬರುವವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಹೇಳಿದರು.
ಕುಂಭಮೇಳ ಭಾರತದ ಸಾವಿರಾರು ವರ್ಷಗಳ ಪರಂಪರೆಯ ಪ್ರತೀಕವಾಗಿದೆ. ಇದನ್ನು ಹಾಳು ಮಾಡಲು ಅನೇಕರು ಯತ್ನಿಸುತ್ತಿದ್ದಾರೆ. ವಕ್ಫ್ ಬೋರ್ಡ್ ಲ್ಯಾಂಡ್ ಮಾಫಿಯಾವಾಗಿ ಬದಲಾಗಿದೆ. ವಕ್ಫ್ ಹೆಸರು ಕೇಳುತ್ತಿದ್ದಂತೆ, ಯಾರ ಹೆಸರಿನಲ್ಲಿ ನಿಜವಾಗಿಯೂ ಭೂಮಿ ನೋಂದಣಿಯಾಗಿದೆ ಎಂದು ತನಿಖೆ ಮಾಡುತ್ತೇನೆ ಎಂದು ಅವರು ಹೇಳಿದರು.
‘ಕುಂಭವಾಣಿ’ ಎಫ್ಎಂ
ಮಹಾಕುಂಭಮೇಳ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಪ್ರಸಾರ ಮಾಡುವ ಸಲುವಾಗಿ ಪ್ರಸಾರ ಭಾರತಿ “ಕುಂಭವಾಣಿ” ಎಂಬ ಎಫ್ಎಂ ರೇಡಿಯೋ ಚಾನೆಲ್ ಅನ್ನು ಶುಕ್ರವಾರ ಆರಂಭಿಸಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅದನ್ನು ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು “ಕುಂಭವಾಣಿಯು ಪ್ರತಿ ಹಳ್ಳಿಗಳಿಗೂ ತಲುಪಿ ಜನರಿಗೆ ಮಾಹಿತಿ ನೀಡಲಿದೆ. ಮೇಳದಲ್ಲಿ ಭಾಗಿಯಾಗಲು ಸಾಧ್ಯವಾಗದವರಿಗೆ ಮಾಹಿತಿ ನೀಡುವ ಮೂಲಕ ಜನಪ್ರಿಯತೆ ಗಳಿಸಲಿದೆ’ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಒಟಿಟಿ ಆಧರಿತವಾಗಿರುವ ಈ ಚಾನೆಲ್ ಜ.10ರಿಂದ ಜ.26ರವರೆಗೆ ಲಭ್ಯವಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
MUST WATCH
ಹೊಸ ಸೇರ್ಪಡೆ
Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು
chikkamagaluru: ಹೆಬ್ಬಾಳ್ಕರ್ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ
Bengaluru: ಜಗಳ ಬಿಡಿಸಲು ಬಂದ ಮಾವನ ಕೊಂದ ಅಳಿಯ!
Bengaluru: ಬಿಯರ್ ಬಾಟಲಿ ಕಸಿದಿದ್ದಕ್ಕೆ ಸ್ನೇಹಿತನ ಹತ್ಯೆ; 7 ಜನ ಸೆರೆ
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.