BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

ಬಸನಗೌಡ ಪಾಟೀಲ್‌ ಯತ್ನಾಳ್‌ ಬಣದ ವಿರುದ್ಧದ ಮಾತಿಗೂ ತಡೆ, ಪಕ್ಷ ಸಂಘಟನೆಯೇ ಎಲ್ಲರ ಗುರಿಯಾಗಲಿ: ಮಾಜಿ ಸಿಎಂ ಬಿಎಸ್‌ವೈ ಕರೆ

Team Udayavani, Jan 11, 2025, 7:46 AM IST

BJP-SPL-Meet

ಬೆಂಗಳೂರು: ಬಿಜೆಪಿಯಲ್ಲಿ ತಾರಕಕ್ಕೇರಿರುವ ಭಿನ್ನಮತ ಶಮನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅಖಾಡಕ್ಕಿಳಿದಿದ್ದು, ಭಿನ್ನಮತ ಬದಿಗಿರಿಸಿ ಒಗ್ಗಟ್ಟಿನ ಸೂತ್ರದೊಂದಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಲು ಸಜ್ಜಾಗೋಣ ಎಂಬ ಸಂದೇಶ ನೀಡಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಮಾಜಿ ಶಾಸಕರು, ವಿಧಾನಪರಿಷತ್‌ ಸದಸ್ಯರು, ಸಂಸದರ ಸಭೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ್ದು, ಕಾರ್ಯಕರ್ತರ ಚುನಾವಣೆಯಾಗಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆಗಳಲ್ಲಿ ಹೆಚ್ಚು ಸ್ಥಾನ ಗಳಿಸುವ ಮೂಲಕ ಪಕ್ಷದ ನೆಲೆ ಭದ್ರಗೊಳಿಸಿಕೊಳ್ಳಲು ಪಣ ತೊಡಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಹಿರಿಯ ಮುಖಂಡ ಕೃಷ್ಣಭಟ್‌ ಅವರು ಪಕ್ಷ ಸಂಘಟನೆಯ ಮಾರ್ಗದರ್ಶನ ಮಾಡಿದರು.

ಯತ್ನಾಳ್‌ ಬಣದ ವಿರುದ್ಧದ ಮಾತಿಗೆ ಬಿಎಸ್‌ವೈ ತಡೆ
ಸಭೆಯಲ್ಲಿ ಯತ್ನಾಳ್‌ ಬಣದ ವಿರುದ್ಧ ಮಾತುಗಳು ಕೇಳಿಬಂದವಾದರೂ ಅದಕ್ಕೆಲ್ಲ ವಿರಾಮ ಹಾಕಿದ ಯಡಿಯೂರಪ್ಪ, ಪದೇ ಪದೆ ಈ ವಿಷಯದ ಬಗ್ಗೆ ಹೆಚ್ಚು ಚರ್ಚೆ ಮಾಡುವುದು ಬೇಡ. ಎಲ್ಲವನ್ನೂ ವರಿಷ್ಠರು ಗಮನಿಸುತ್ತಿದ್ದಾರೆ. ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್‌ ಸರಕಾರದ ವಿರುದ್ಧ ಹೋರಾಡುವುದು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಗ್ಗಟ್ಟು ಪ್ರದರ್ಶಿಸುವ ಮೂಲಕ ವಿಧಾನಸಭೆ ಚುನಾವಣೆಯಲ್ಲೂ ಹೆಚ್ಚು ಸ್ಥಾನ ಗಳಿಸುವ ಅವಶ್ಯ ಹೆಜ್ಜೆ ಇಡುವುದು ನಮ್ಮ ಗುರಿಯಾಗಬೇಕು ಎಂದರು.

ರಾಜಕೀಯ ಪಕ್ಷವೆಂದರೆ ಸಣ್ಣಪುಟ್ಟ ಭಿನ್ನಾಭಿಪ್ರಾಯ, ಗೊಂದಲ ಸಹಜ. ಅವನ್ನು ವರಿಷ್ಠರು ಗಮನಿಸುತ್ತಿದ್ದಾರೆ. ನಾವೆಲ್ಲರೂ ಒಗ್ಗೂಡಿ, ಪಕ್ಷ ಬಲಪಡಿಸಬೇಕೆಂಬ ಸಂದೇಶವನ್ನು ಯಡಿಯೂರಪ್ಪನವರು, ಹಿರಿಯರು ನೀಡಿದ್ದಾರೆ. ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಎರಡೂ ಕೈ ಸೇರಿ ಚಪ್ಪಾಳೆ ಆಗುತ್ತದೆ. ಒಂದೇ ಕೈಯಲ್ಲಿ ಚಪ್ಪಾಳೆ ಹೊಡೆಯಲು ಸಾಧ್ಯವಿಲ್ಲ. ಭಿನ್ನಮತವನ್ನೆಲ್ಲ ಇಲ್ಲಿಗೇ ನಿಲ್ಲಿಸುವುದು ಒಳ್ಳೆಯದು.
– ಆರ್‌. ಅಶೋಕ್‌, ವಿಧಾನಸಭೆ ವಿಪಕ್ಷದ ನಾಯಕ

ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರವಾಸ: ಬಿಎಸ್‌ವೈ ಸಜ್ಜು
– ಮುಂದಿನ ವಾರವೇ ಪ್ರವಾಸದ ದಿನಾಂಕ ನಿಗದಿ – ದಿನಕ್ಕೆ 2 ಜಿಲ್ಲೆಗೆ ಭೇಟಿ: ಮಾಜಿ ಸಿಎಂ ಮಾಹಿತಿ
ಬೆಂಗಳೂರು: ಪಕ್ಷ ಸಂಘಟನೆಯ ಸಲುವಾಗಿ ರಾಜ್ಯ ಪ್ರವಾಸ ಕೈಗೊಳ್ಳಲು ಮುಂದಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುಂದಿನ ವಾರದ ಅನಂತರ ಪ್ರವಾಸದ ದಿನಾಂಕ ನಿಗದಿಪಡಿಸುವುದಾಗಿ ಹೇಳಿದ್ದಾರೆ.

ಪರಾಜಿತ ಅಭ್ಯರ್ಥಿಗಳ ಜತೆಗೆ ಕನಿಷ್ಠ ಮೂರು ತಿಂಗಳಿಗೊಮ್ಮೆಯಾದರೂ ಸಭೆ ನಡೆಸಬೇಕು ಎಂಬ ಬೇಡಿಕೆಗೆ ಸ್ಪಂದಿಸಿದ ಬಿಎಸ್‌ವೈ, ರಾಜ್ಯ ಪ್ರವಾಸದ ನಿರ್ಧಾರ ಘೋಷಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಮಾಜಿ ಶಾಸಕರು, ವಿಧಾನಪರಿಷತ್‌ ಸದಸ್ಯರು, ಸಂಸದರ ಸಭೆಯ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಹಳ ಒಳ್ಳೆಯ ಸಭೆ ಆಗಿದೆ.

ಮುಂದಿನ ವಾರದಿಂದ ನಾನು ರಾಜ್ಯದ ಪ್ರತೀ ಜಿಲ್ಲೆಗೆ ಹೋಗಿ ಸಾರ್ವಜನಿಕ ಸಭೆ ಮಾಡುತ್ತೇನೆ. ಗ್ರಾ.ಪಂ. ಚುನಾವಣೆ ಸಂಬಂಧಿಸಿ ಕಾರ್ಯಕರ್ತರ ಸಭೆ ಮಾಡುತ್ತೇವೆ. ಪ್ರತೀ ಬೂತ್‌ ಮಟ್ಟದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇವೆ. ಮುಂದಿನ ವಾರ ದಿನಕ್ಕೆ ಎರಡು ಜಿಲ್ಲೆಗಳಂತೆ ಪ್ರವಾಸ ಮಾಡುತ್ತೇನೆ. ಕೆಲವೇ ದಿನಗಳಲ್ಲಿ ಪ್ರವಾಸದ ದಿನಾಂಕ ಘೋಷಣೆ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

16-bng

Bengaluru: 4 ಕೋಟಿ ಪ್ರಯಾಣಿಕರು: ಏರ್‌ ಪೋರ್ಟ್ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.