Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
Team Udayavani, Jan 11, 2025, 8:46 AM IST
ಕಟಪಾಡಿ: ದ್ವಿ ಚಕ್ರ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಜ.10ರ ಶುಕ್ರವಾರ ತಡರಾತ್ರಿ ಉದ್ಯಾವರ ಬಲೈ ಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಅಪಘಾತದ ಸಂದರ್ಭ ಲಾರಿಯ ಅಡಿಭಾಗದಲ್ಲಿ ಬೈಕ್ ಸಿಲುಕಿಕೊಂಡಿದ್ದು ಈ ವೇಳೆ ಬೈಕಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಲಾರಿ ಬೆಂಕಿಗಾಹುತಿಯಾಗಿದೆ.
ಉಡುಪಿಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ, ಬೈಕ್ ಸವಾರ ಪಣಿಯೂರು ನಿವಾಸಿ, ಆನಂದ ಆಚಾರ್ಯ ಅವರ ಪುತ್ರ ಅವಿನಾಶ್ ಆಚಾರ್ಯ (18) ಗಂಭೀರ ಗಾಯಗೊಂಡ ಯುವಕ.
ಆತನನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೇರಳ ಮೂಲದ ಲಾರಿ ಇದಾಗಿದ್ದು, ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದ ತೀವ್ರತೆಗೆ ಲಾರಿ ಹಾಗೂ ದ್ವಿಚಕ್ರ ವಾಹನ ಸುಟ್ಟು ಕರಕಲಾಗಿದೆ.
ಉಡುಪಿ ಅಗ್ನಿಶಾಮಕದಳ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.