Bengaluru: ಕೆರೆ ಒತ್ತುವರಿ ಮಾಡಿದ್ದ ಮೂವರಿಗೆ 1ವರ್ಷ ಜೈಲು
ಹೆಬ್ಬಗೋಡಿ ಕೆರೆಯಲ್ಲಿ ಮನೆ ನಿರ್ಮಾಣ ಆರೋಪ
Team Udayavani, Jan 11, 2025, 11:56 AM IST
ಬೆಂಗಳೂರು: ಹೆಬ್ಬಗೋಡಿಯಲ್ಲಿ ಸರ್ಕಾರಿ ಕೆರೆಯ ಜಮೀನು ಒತ್ತುವರಿ ಮಾಡಿ ಶೌಚಾಲಯ ಮತ್ತು ಮನೆಗಳನ್ನು ನಿರ್ಮಿಸಿದ್ದ ಮೂವರಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ 1 ವರ್ಷ ಕಾರಾಗೃಹ ಶಿಕ್ಷೆ ವಿ ಧಿಸಿ ಆದೇಶಿಸಿದ ಹೊರಡಿಸಿದೆ ಎಂದು ಬಿಎಂಟಿಎಫ್ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಜತೆಗೆ ಈ ಪ್ರಕರಣದ ಜಾಡು ಬೆನ್ನುಹತ್ತಿದ್ದ ಅಧಿಕಾರಿಗಳ ಕಾರ್ಯವನ್ನು ಪ್ರಶಂಸಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆ ಹೆಬ್ಬಗೋಡಿ ಗ್ರಾಮದ ಸರ್ವೆ ನಂ.159 ರ 32 ಎಕರೆ 13 ಗುಂಟೆ ಸರ್ಕಾರಿ ಕೆರೆ ಜಮೀನನ್ನು ಏಳು ಮಂದಿ ಒತ್ತುವರಿ ಮಾಡಿಕೊಂಡು ಶೌಚಾಲಯ ಮತ್ತು ವಾಸದ ಮನೆಗಳನ್ನು ನಿರ್ಮಾಣ ಮಾಡಿದ್ದರು. ಇವರುಗಳ ವಿರುದ್ಧ 2012 ರ ಫೆ.22ರಂದು ಬಿಎಂಟಿಎಫ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ತನಿಖೆ ಕೈಗೊಂಡು ಸಾಕ್ಷಾ ಧಾರಗಳನ್ನು ಮತ್ತು ದಾಖಲಾತಿಗಳನ್ನು ಸಂಗ್ರಹಿಸಿ ಆರೋಪಿಗಳ ವಿರುದ್ಧ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲ ಯದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು. ಕೋರ್ಟ್ ವಿಚಾರಣೆ ವೇಳೆ ಆರೋಪಿ ಗಳು ಸರ್ಕಾರಿ ಕೆರೆಯ ಸ್ವತ್ತನ್ನು ಅಕ್ರಮ ವಾಗಿ ಒತ್ತುವರಿ ಮಾಡಿ ಶೌಚಾಲಯ ಮತ್ತು ಮನೆಗಳನ್ನು ನಿರ್ಮಾಣ ಮಾಡಿರುವುದು ದೃಢಪಟ್ಟಿದೆ ಎಂದು ಹಿರಿಯ ಅಧಿಕಾರಿಗಳು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಕರಣದಲ್ಲಿ ತನಿಖಾ ಕಾರಿಯಾಗಿದ್ದ ಬಿಎಂಟಿಎಫ್ ಪೊಲೀಸ್ ಇನ್ಸ್ಪೆಕ್ಟರ್ ಟಿ.ಡಿ ರಾಜು ಅವರು ತನಿಖೆ ಕೈಗೊಂಡು ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು ಎಂದಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.