Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್ ಮಾರ್ಮಿಕ ಮಾತು
Team Udayavani, Jan 11, 2025, 12:27 PM IST
ಚಿಕ್ಕಮಗಳೂರು: “ನನಗೆ ಯಾರ ಬೆಂಬಲವೂ ಬೇಡ, ನನಗಾಗಿ ಯಾರೂ ಕೂಗುವುದು ಬೇಡ. ಯಾವ ನಾಯಕರು, ಶಾಸಕರು, ಬೆಂಬಲಿಗರು ಕೂಗುವುದು ಬೇಡ” ಇದು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿದ ಕಾರ್ಯಕರ್ತರ ಎದುರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ ಮಾತು.
ಮುಖ್ಯಮಂತ್ರಿ ಬದಲಾವಣೆ ಮಾತು, ನಾಯಕರ ಡಿನ್ನರ್ ಮೀಟಿಂಗ್ ನ ನಡುವೆ ಶೃಂಗೇರಿಯಲ್ಲಿ ಡಿಕೆ ಶಿವಕುಮಾರ್ ಅವರ ಈ ಮಾತು ಮಹತ್ವ ಪಡೆದಿದೆ.
ಶೃಂಗೇರಿಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತಾಡಿದ ಅವರು ಟೆಂಪಲ್ ರನ್ ಪ್ರಶ್ನೆಗೆ ಉತ್ತರಿಸಿದರು.
“ನಾನು ದಿನಾ ಪೂಜೆ ಮಾಡುತ್ತೇನೆ, ನಾನು ಧರ್ಮದ ಮೇಲೆ ನಂಬಿಕೆ ಇಟ್ಟವನು. ಸಮಾಜ, ಜನ, ರಾಜ್ಯ, ಪಕ್ಷ, ಕುಟುಂಬಕ್ಕಾಗಿ ಪೂಜೆ ಮಾಡುತ್ತೇನೆ. ಟೆಂಪಲ್ ರನ್, ಹಾಗಾದರೆ ದೇವಸ್ಥಾನ ಯಾಕೆ, ಬೀಗ ಹಾಕ್ಬಿಡಿ. ದೇವನೊಬ್ಬ ನಾಮ ಹಲವು ಎನ್ನುವ ತತ್ವದ ಮೇಲೆ ನಂಬಿಕೆ ಇಟ್ಟವನು ನಾನು. ಅವರವರ ನಂಬಿಕೆ ಅವರವರ ಆಚಾರ-ವಿಚಾರ ಅವರಿಗೆ ಬಿಟ್ಟದ್ದು” ಎಂದರು.
ರಾಜಕಾರಣದಲ್ಲಿ ಯಾವ ತಿರುವು ಅವಶ್ಯಕತೆ ಇಲ್ಲ. ತಿರುವಿನ ಬಗ್ಗೆ ಎಲ್ಲರ ಮಾತು ಗೌಣ. ಪಕ್ಷ, ಹೈಕಮಾಂಡ್ ಹೇಳಿದ್ದೇ ಅಂತಿಮ. ನನಗೆ ಯಾರ ಒತ್ತಾಯ, ಬೆಂಬಲ ಏನೂ ಬೇಡ. ನನಗಾಗಿ ಕಾರ್ಯಕರ್ತರು, ಶಾಸಕರು, ಬೆಂಬಲಿಗರು, ಕೂಗುವುದು ಬೇಡ. ಮಾಡುವ ಕೆಲಸ ಮಾಡೋಣ, ಫಲಾಫಲ ದೇವರಿಗೆ ಬಿಡೋಣ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
Podcast: ಗಾಂಧೀಜಿ ಎಂದೂ ಟೋಪಿ ಧರಿಸುತ್ತಿರಲಿಲ್ಲ, ಆದರೆ ದೇಶದಲ್ಲಿ “ಗಾಂಧಿ ಟೋಪಿ’ ಜನಜನಿತ!
ಅಂದು ಪ್ರತಾಪ್ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?
New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.