Bengaluru: 4 ಕೋಟಿ ಪ್ರಯಾಣಿಕರು: ಏರ್ ಪೋರ್ಟ್ ದಾಖಲೆ
2024ರಲ್ಲಿ ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 4.07 ಕೋಟಿ ಪ್ರಯಾಣಿಕರ ಪ್ರಯಾಣ
Team Udayavani, Jan 11, 2025, 12:59 PM IST
ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಎಐಎಲ್)ದಲ್ಲಿ 2024ರಲ್ಲಿ ಪ್ರಯಾಣಿಕರ ಸಂಖ್ಯೆ ಹಾಗೂ ಸರಕು ಸಾಗಣೆಯಲ್ಲಿ ದಾಖಲೆಯ ಬೆಳವಣಿಗೆ ಕಂಡಿದ್ದು, ಬರೋಬ್ಬರಿ 4.07 ಕೋಟಿ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ.
ದಾಖಲೆ ಸಂಖ್ಯೆಯಷ್ಟು ಪ್ರಯಾಣಿಕರು ಪ್ರಯಾಣ ಬೆಳೆಸುವ ಮೂಲಕ ಜಾಗತಿಕವಾಗಿ ಅತಿದೊಡ್ಡ ವಿಮಾನ ನಿಲ್ದಾಣಗಳಲ್ಲಿ ಒಂದು ಎಂಬ ಸ್ಥಾನವನ್ನು ಬೆಂಗಳೂರು ವಿಮಾನ ನಿಲ್ದಾಣವು ಇನ್ನಷ್ಟು ಬಲಪಡಿಸಿಕೊಂಡಿದ್ದು, ದೈನಂದಿನ ವಿಮಾನಯಾನ ಸಂಚಾರ ನಿರ್ವಹಣೆಯಲ್ಲಿ (ಎಟಿಎಂ) ಗಮನಾರ್ಹ ಏರಿಕೆ ಕಂಡಿದೆ. ಹೊಸ ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರ್ಗಗಳಿಗೂ ವಿಮಾನ ಹಾರಾಟವನ್ನು ಪ್ರಾರಂಭಿಸಲಾಗಿದೆ.
ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ವಾರ್ಷಿಕ ಸರಕು ಸಾಗಣೆಯು 4,96,227 ಮೆಟ್ರಿಕ್ ಟನ್ ತಲುಪುವ ಮೂಲಕ ಗರಿಷ್ಠ ದಾಖಲೆ ನಿರ್ಮಾಣವಾಗಿದೆ. ಈ ಬೃಹತ್ ಬೆಳವಣಿಗೆಗೆ ಬೆಂಗಳೂರಿನಿಂದ ವಾಯು ಮಾರ್ಗದ ಮೂಲಕ ಪ್ರಯಾಣಿಸುವವರಿಗೆ ಹಾಗೂ ವ್ಯಾಪಾರ ವಹಿವಾಟು ನಡೆಸುವವರೇ ಮೂಲ ಕಾರಣ.
ಸಂಪರ್ಕ ಮತ್ತು ಹೊಸ ಮಾರ್ಗಗಳ ಪರಿಚಯ: 2024ರ ಡಿ.31ರ ಪ್ರಕಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ 75 ದೇಶೀಯ ಮತ್ತು 30 ಅಂತಾರಾಷ್ಟ್ರೀಯ ಸ್ಥಳಗಳಿಗೆ ವಿಮಾನ ಸೇವೆಯನ್ನು ಒದಗಿಸಲಾಗುತ್ತಿದೆ. ಈ ಮೂಲಕ ಪ್ರಯಾಣಿಕರ ಮತ್ತು ಸರಕುಗಳ ಸಾಗಣೆಗೆ ದಕ್ಷಿಣ ಮತ್ತು ಮಧ್ಯ ಭಾರತಕ್ಕೆ ಹೆಬ್ಟಾಗಿಲಾಗಿ ವಿಮಾನ ನಿಲ್ದಾಣವು ತನ್ನ ಸ್ಥಾನವನ್ನು ಮತ್ತಷ್ಟು ಬಲಗೊಳಿಸಿಕೊಂಡಿದೆ.
2024 ರ ಅಂತ್ಯದ ವೇಳೆಗೆ, ಇಂಡಿಗೋ ಬೆಂಗಳೂರಿನಿಂದ 46 ಸಾಪ್ತಾಹಿಕ ನಿರ್ಗಮನ ವಿಮಾನಗಳನ್ನು ಸೇರ್ಪಡೆಗೊಳಿಸಿದೆ. ಇದು ಭಾರತದಿಂದ ನಿರ್ಗಮಿಸುವ ಒಟ್ಟು 240 ಹೆಚ್ಚುವರಿ ಸಾಪ್ತಾಹಿಕ ನಿರ್ಗಮನ ವಿಮಾನಗಳ ಮೂರನೇ ಒಂದು ಭಾಗವಾಗಿದೆ. ಈ ಮೂಲಕ, 2024 ರಲ್ಲಿ ಇಂಡಿಗೋ ಭಾರತದಲ್ಲಿ ಅತಿ ಹೆಚ್ಚು ವಿಮಾನಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೇರ್ಪಡೆಗೊಳಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಯಾಣಿಕರ ಸಂಖ್ಯೆ ಹೆಚ್ಚಳ: 2023ರಲ್ಲಿ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆ 3.7 ಕೋಟಿ ಇತ್ತು. 2024ರಲ್ಲಿ 4.07 ಕೋಟಿ ಪ್ರಯಾಣಿಕರು ವಿಮಾನ ನಿಲ್ದಾಣದ ಮೂಲಕ ಪ್ರಯಾಣ ಬೆಳೆಸಿದ್ದಾರೆ. 2024ರ ಅ.20ರಂದು ಒಂದೇ ದಿನದಲ್ಲಿ 1,26,532 ಪ್ರಯಾಣಿಕರು ಪ್ರಯಾಣಿಸುವ ಮೂಲಕ ದಾಖಲೆ ನಿರ್ಮಾಣ ವಾಗಿದೆ. ಅಲ್ಲದೆ 2024ರ ಅ.17ರಂದು ವಿಮಾ ನಯಾನ ಸಂಚಾರ ನಿರ್ವಹಣೆಯಲ್ಲಿ 782 ಎಟಿಎಂ ಮೂಲಕ ಗರಿಷ್ಠ ದಾಖಲೆ ನಿರ್ಮಾಣ ವಾಗಿದೆ ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂದು ಪ್ರತಾಪ್ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?
New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ
Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ
VijayHazareTrophy: ಪಡಿಕ್ಕಲ್ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.