Hubli: ಅಮಿತ್ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ
Team Udayavani, Jan 11, 2025, 2:48 PM IST
ಹುಬ್ಬಳ್ಳಿ: ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಪಮಾನಕರವಾದ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಣಕು ಶವ ಸಂಸ್ಕಾರದ ಅಸ್ಥಿಯನ್ನು ಇಲ್ಲಿನ ನಾಲಾವೊಂದರಲ್ಲಿ ವಿಸರ್ಜನೆ ಮಾಡಿ ಪ್ರತಿಭಟಿಸಲಾಯಿತು.
ಗುರುವಾರ ಹುಬ್ಬಳ್ಳಿ ಬಂದ್ ವೇಳೆ ಶಾ ಅವರ ಅಣಕು ಶವ ಸಂಸ್ಕಾರ ಮಾಡಲಾಗಿತ್ತು. ಶನಿವಾರ (ಜ.11) ಅಸ್ಥಿಯನ್ನು ವಿಸರ್ಜನೆ ಮಾಡಲಾಯಿತು.
ಡಾ.ಬಿ.ಆರ್ ಅಂಬೇಡ್ಕರ್ ಸ್ವಾಭಿಮಾನಿ, ಅಭಿಮಾನಿ ಅನುಯಾಯಿಗಳ ಬಳಗದಿಂದ ಅಸ್ಥಿ ವಿಸರ್ಜನೆ ಮಾಡಲಾಗಿದೆ.
ಕಿತ್ತೂರು ರಾಣಿ ಚನ್ನಮ್ಮವೃತ್ತದಿಂದ ಮೆರವಣಿಗೆ ಮೂಲಕ ಹಳೇ ಹುಬ್ಬಳ್ಳಿಯ ಮುಖ್ಯ ರಸ್ತೆಯ ಮಟನ್ ಮಾರುಕಟ್ಟೆ ಬಳಿಯ ನಾಲೆಯಲ್ಲಿ ಅಸ್ಥಿ ವಿಸರ್ಜಿಸಲಾಯಿತು.
ಬಳಗದ ಗುರುನಾಥ ಉಳ್ಳಿಕಾಶಿ, ಮಾರುತಿ ದೊಡ್ಡಮನಿ ಇನ್ನಿತರ ದಲಿತ ಮುಖಂಡರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.