Mine Tragedy: ಇಂದು ಮತ್ತೆ ಮೂರು ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ
Team Udayavani, Jan 11, 2025, 3:20 PM IST
ಗುವಾಹಟಿ: ಕಳೆದ ಸೋಮವಾರ(ಜ.6) ರಂದು ಅಸ್ಸಾಂನ ದೀಮಾ ಹಸಾವೋ ಜಿಲ್ಲೆಯ ಕಲ್ಲಿದ್ದಲು ಗಣಿಗೆ ಏಕಾಏಕಿ ನೀರು ನುಗ್ಗಿ ಉಂಟಾದ ದುರಂತದಲ್ಲಿ ನಾಪತ್ತೆಯಾಗಿರುವ 8 ಮಂದಿಯಲ್ಲಿ ಮೂವರ ಮೃತದೇಹ ಶನಿವಾರ(ಜ.11) ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದರೊಂದಿಗೆ ಆರನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆಯಲ್ಲಿ ನಾಲ್ಕು ಮಂದಿಯ ಮೃತದೇಹ ಪತ್ತೆಯಾದಂತಾಗಿದ್ದು ಉಳಿದ ಐದು ಮಂದಿಯ ಪತ್ತೆಗೆ ಶೋಧಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗಿದೆ.
ಇಂದು(ಶನಿವಾರ) ನಡೆಸಿದ ರಕ್ಷಣಾ ಕಾರ್ಯಾಚರಣೆಯಲ್ಲಿ ಒಟ್ಟು ಮೂರೂ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದ್ದು ಅದರಲ್ಲಿ ಓರ್ವನ ಗುರುತು ಪತ್ತೆಹಚ್ಚಲಾಗಿದ್ದು ಕಲಮತಿ ಗ್ರಾಮದ ಲಿಜೆನ್ (27) ಎಂದು ತಿಳಿದುಬಂದಿದ್ದು ಉಳಿದ ಇಬ್ಬರ ಗುರುತು ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಲಾಗಿದೆ.
ಈ ಕುರಿತು ಸ್ವತಃ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೇ ಟ್ವೀಟ್ ಮಾಡಿದ್ದಾರೆ.
The identity of the recovered body has been confirmed as Ligen Magar, aged approximately 27 years, a resident of 1 No. Umrangshu, Dima Hasao, Assam. https://t.co/jKQ2tuUIKU
— Himanta Biswa Sarma (@himantabiswa) January 11, 2025
ಕಲ್ಲಿದ್ದಲು ಗಣಿಯಲ್ಲಿ ಇನ್ನೂ ಐವರು ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಆದರೆ ಅವರು ಬದುಕುಳಿಯುವ ಸಾಧ್ಯತೆಗಳು ತುಂಬಾ ಕಡಿಮೆ ಇದೆ ಎಂದು ಹೇಳಲಾಗಿದ್ದು. ಇದೇ ವೇಳೆ ಅಕ್ರಮ ಗಣಿಗಾರಿಕೆಯಲ್ಲಿ ಸಿಲುಕಿದ್ದ ಕಾರ್ಮಿಕರ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
#WATCH | Assam | The third body has been recovered by the joint rescue team of the Indian army and NDRF from the inundated rat-hole coal mine at 3 Kilo Umrangso area in Dima Hasao district today. The second body was recovered this morning. pic.twitter.com/hDF9LiW5xF
— ANI (@ANI) January 11, 2025
ಇದರ ನಡುವೆ ಅಸ್ಸಾಂನ ಗಣಿ ದುರಂತದ ಬಗ್ಗೆ ಎಸ್‌ಐಟಿ ತನಿಖೆಗೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದಾಗಿ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಶನಿವಾರ ಹೇಳಿದ್ದಾರೆ.
ಇದನ್ನೂ ಓದಿ: Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ
Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!
Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.