Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
Team Udayavani, Jan 11, 2025, 3:32 PM IST
ದಾಂಡೇಲಿ: ದಾಂಡೇಲಿ ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐ ಕಿರಣ್ ಪಾಟೀಲ್ ಅವರ ನೇತೃತ್ವದಲ್ಲಿ ನಗರದ ವಿವಿಧೆಡೆ ಶನಿವಾರ ಕಾರ್ಯಾಚರಣೆಯನ್ನು ನಡೆಸಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ 25 ದ್ವಿಚಕ್ರ ವಾಹನಗಳಿಗೆ ದಂಡ ವಿಧಿಸಿ, ಎಚ್ಚರಿಕೆ ನೀಡಿದ ಘಟನೆ ಶನಿವಾರ(ಜ.11) ನಡೆದಿದೆ.
ನಗರದ ಆಯಕಟ್ಟಿನ ಸ್ಥಳಗಳಲ್ಲಿ ಬೆಳಗಿನಿಂದಲೆ ವಿವಿಧ ವಾಹನಗಳ ತಪಾಸಣೆಯನ್ನು ನಡೆಸಲಾಗಿತ್ತು. ಈ ತಪಾಸಣೆ ಕಾರ್ಯದಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಒಟ್ಟು 25 ದ್ವಿಚಕ್ರ ವಾಹನಗಳಿಗೆ ಒಟ್ಟು ರೂ.14,000/- ದಂಡ ವಿಧಿಸಲಾಗಿದೆ.
ಸಮರ್ಪಕ ದಾಖಲೆ ಪತ್ರಗಳಿಲ್ಲದೆ ಇರುವುದು, ವಾಹನ ಚಾಲನಾ ಪರವಾನಿಗೆ ಇಲ್ಲದೇ ಇರುವುದು, ಮೂವರನ್ನು ಕೂಡಿಸಿಕೊಂಡು ಬೈಕ್ ಚಲಾಯಿಸುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳ ಉಲ್ಲಂಘನೆಯನ್ನು ಮಾಡಿರುವುದನ್ನು ಗಮನಿಸಿ ಸೂಕ್ತ ದಂಡವನ್ನು ಆಕರಣೆ ಮಾಡಲಾಯ್ತು. ಇದೇ ಸಂದರ್ಭದಲ್ಲಿ ಪಿಎಸ್ಐ ಕಿರಣ್ ಪಾಟೀಲ್ ಅವರು ಸಂಚಾರಿ ನಿಯಮಗಳ ಪಾಲನೆಯ ಕುರಿತಂತೆ ಮನವರಿಕೆ ಮಾಡಿ ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಎಚ್ಚರಿಕೆಯನ್ನು ನೀಡಿದರು. ಕಾರ್ಯಾಚರಣೆಯಲ್ಲಿ ನಗರ ಠಾಣೆಯ ಪೊಲೀಸರು ಭಾಗವಹಿಸಿದ್ದರು.
ಇದನ್ನೂ ಓದಿ: Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್ ಆಗಲಿ: ವಿ.ಸೋಮಣ್ಣ
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.