Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

ಲಕ್ಷಾಂತರ ಭಕ್ತರಿಂದ ರಾಮ ದರ್ಶನ.. ಇಡೀ ನಗರಿ ಅಲಂಕಾರ

Team Udayavani, Jan 11, 2025, 7:44 PM IST

1-ayodhya

ಅಯೋಧ್ಯೆ: ರಾಮ ಜನ್ಮಭೂಮಿಯಲ್ಲಿ ಬಾಲರಾಮನ ಮೂರ್ತಿ ಪ್ರತಿಷ್ಠಾಪನೆಯಾಗಿ ಶನಿವಾರ(ಜ11) 1 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮ ಮಂದಿರದಲ್ಲಿ ವಿಶೇಷ ಕಳೆಗಟ್ಟಿದೆ. ಬಾಲ ರಾಮನ ಮೂರ್ತಿಗೆ ಅಭಿಷೇಕ ಮಾಡುವ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಲಕ್ಷಾಂತರ ಭಕ್ತರು ಆಗಮಿಸಿ ರಾಮ ದರ್ಶನ ಪಡೆದರು.

ಇಂದು ಬೆಳಗ್ಗೆ ಬಾಲ ರಾಮನ ಮೂರ್ತಿಗೆ ವಿಶೇಷ ಅಭಿಷೇಕ ನಡೆಸಲಾಯಿತು. ಮೂರ್ತಿಗೆ ಪಂಡಿತರಿಂದ ವಿಶೇಷ ಪೂಜೆ, ಚಿನ್ನ, ಬೆಳ್ಳಿ ಹೊಂದಿರುವ ಪೀತಾಂಬರದಿಂದ ಅಲಂಕಾರ ಮಾಡಲಾಯಿತು. ಯಾಗ ಮಂಟಪಗಳಲ್ಲಿ ವಿಶೇಷ ಪೂಜೆ, ಹೋಮ, ಹವನನಗಳನ್ನು ನಡೆಸಲಾಯಿತು.

ಅಯೋಧ್ಯೆಯಲ್ಲಿ ಇನ್ನು 3 ದಿನಗಳ ಕಾಲ ಸೋಮವಾರದವರೆಗೆ ಭರ್ಜರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇಡೀ ನಗರವನ್ನು ಹೂವಿನಿಂದ ಅಲಂಕರಿಸಲಾಗಿದೆ. 3 ದಿನವೂ ಮಧ್ಯಾಹ್ನ 2 ಗಂಟೆಗೆ ರಾಮಕಥಾ ಪಠಣೆ ನಡೆಸಲಾಗುತ್ತಿದ್ದು, ಪ್ರತಿನಿತ್ಯವೂ ಸಾಂಸ್ಕೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ದೇವಸ್ಥಾನಕ್ಕೆ ಭೇಟಿ ನೀಡುವ ಎಲ್ಲರಿಗೂ ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಬಾಲರಾಮನ ದರ್ಶನಕ್ಕೆ ಬರುವ ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ಬಿಗಿ ಭದ್ರತೆ ಮತ್ತು ಸಕಲ ವ್ಯವಸ್ಥೆಗಳನ್ನೂ ಮಾಡಲಾಗಿದೆ.

110 ಮಂದಿ ವಿಶೇಷ ಆಹ್ವಾನಿತರು
ರಾಮಮಂದಿರದ ಮೊದಲ ವಾರ್ಷಿಕೋತ್ಸವಕ್ಕೆ 110 ಮಂದಿಯನ್ನು ವಿಶೇಷವಾಗಿ ಆಹ್ವಾನಿಸಲಾಗಿದೆ. ರಾಮಮಂದಿರ ಉದ್ಘಾಟನೆಯನ್ನು ತಪ್ಪಿಸಿಕೊಂಡವರಿಗೆ ಆಹ್ವಾನಿಸಲಾಗಿತ್ತು. ಈ ಬಾರಿ ಸಾರ್ವಜನಿಕರಿಗೂ ಅವಕಾಶ ಒದಗಿಸಲಾಗಿದೆ. ಅಂಗದ್‌ ತಿಲಾ ಬಳಿ 5,000 ಮಂದಿ ಕೂರಬಹುದಾದಷ್ಟು ದೊಡ್ಡ ಪೆಂಡಾಲ್‌ ನಿರ್ಮಾಣ ಮಾಡಲಾಗಿದೆ. ಇದಲ್ಲದೇ ಯಾಗ ಮಂಟಪಗಳಲ್ಲಿ ನಿರಂತವಾಗಿ ನಡೆಯುವ ಹೋಮ, ಹವನಗಳನ್ನು ನೋಡಲು ಸಹ ಅವಕಾಶ ಒದಗಿಸಲಾಗಿತ್ತು.

ಪ್ರತಿನಿತ್ಯ ರಾಮಕಥೆ
ವಿಶೇಷ ಕಾರ್ಯಕ್ರಮ ನಡೆಯುವ 3 ದಿನವೂ ರಾಮಕಥಾ ಪಠಣೆ ನಡೆಯಲಿದೆ. ಇದಾದ ಬಳಿಕ ರಾಮಚರಿತ ಮಾನಸ ಸೇರಿದಂತೆ ರಾಮಾಯಣದ ಇತರ ಕಥೆಗಳನ್ನು ಒಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾಮಕಥಾ ಪಠಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು 3 ದಿನಗಳ ಕಾಲವೂ ನಿರಂತರವಾಗಿ ನಡೆಯಹುತ್ತದೆ. ಅಲ್ಲದೇ ಪ್ರತಿ ನಿತ್ಯ ದೇಗುಲಕ್ಕೆ ಆಗಮಿಸುವವರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.

ಪಂಚಾಂಗದಂತೆ ಇಂದು ಕಾರ್ಯಕ್ರಮ
ಕಳೆದ ವರ್ಷ ಜ.22ರಂದು ರಾಮಮಂದಿರವನ್ನು ಉದ್ಘಾಟನೆ ಮಾಡಲಾಗಿತ್ತು. ಆದರೆ ಹಿಂದೂ ಪಂಚಾಂಗದ ಪ್ರಕಾರ ಪುಷ್ಯ ಮಾಸದ ಶುಕ್ಲ ದ್ವಾದಶಿಯ ದಿನ ಬಾಲ ರಾಮನನ್ನು ಪ್ರತಿಷ್ಠಾಪಿಸಲಾಗಿತ್ತು. ಈ ವರ್ಷ ಜ.11ರಂದು ಈ ತಿಥಿ ಬಂದಿರುವ ಕಾರಣ ಜ.22ರ ಬದಲಿಗೆ ಜ.11ರಂದು ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತಿದೆ.

ಟಾಪ್ ನ್ಯೂಸ್

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Kapil-Mishra

Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ

Indi-Alliaince

Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?

1-reee

T20; ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಶಮಿಗೆ ಅವಕಾಶ

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapil-Mishra

Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ

Indi-Alliaince

Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?

kejriwal 3

Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!

rape

Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

puttige-7-

Udupi; ಗೀತಾರ್ಥ ಚಿಂತನೆ 153: ವೈಯಕ್ತಿಕ ಅಭಿಪ್ರಾಯ ಬೇರೆ, ಕರ್ತವ್ಯ ಬೇರೆ

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Chandan Shetty: ಕಾಟನ್‌ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು

Chandan Shetty: ಕಾಟನ್‌ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು

Kapil-Mishra

Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.