Puttur: ಅಂತಾರಾಜ್ಯ ಮನೆ ಕಳ್ಳನ ಬಂಧನ ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ
Team Udayavani, Jan 12, 2025, 6:55 AM IST
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದ ಆರೋಪಿಯನ್ನು ಪೊಲೀಸರ ವಿಶೇಷ ತಂಡ ಬಂಧಿಸಿದೆ.
ಕಾಸರಗೋಡು ಜಿಲ್ಲೆಯ ಉಪ್ಪಳ ಗುಡ್ಡೆಮನೆ ನಿವಾಸಿ, ಪ್ರಸ್ತುತ ಕಾಸರಗೋಡು ಮಂಜೇಶ್ವರ ಹೊಸಂಗಡಿ ಮೂಡಂಬೈಲು ನವಿಲು ಗಿರಿ ನಿವಾಸಿ ಸೂರಜ್ ಕೆ. (36) ಬಂಧಿತ ಆರೋಪಿ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ಕಳೆದ ಡಿ.20ರಂದು ಮನೆಯವರು ಇಲ್ಲದೇ ಇರುವ ಸಮಯದಲ್ಲಿ ಮನೆಯ ಹಿಂಬಾಗಿಲಿನಿಂದ ಒಳಪ್ರವೇಶಿಸಿ ಗೋದ್ರೇಜ್‌ನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವುಗೈಯಲಾಗಿತ್ತು. ಈ ರೀತಿಯ ಪ್ರಕರಣ ಹಲವೆಡೆ ನಡೆದಿದ್ದು ಹಗಲು ಮನೆ ಕಳ್ಳತನ ನಡೆಸಿ ಯಾವುದೇ ಸುಳಿವು ನೀಡದೇ ಪರಾರಿಯಾಗುತ್ತಿದ್ದ ಆರೋಪಿಯನ್ನು ಅಪರಾಧ ಪತ್ತೆ ತಂಡ ಕಳ್ಳತನಕ್ಕೆ ಉಪಯೋಗಿಸುತ್ತಿದ್ದ ಕಾರು ಸಹಿತ ಬಂಧಿಸಿದ್ದಾರೆ.
ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಪುತ್ತೂರು ಗ್ರಾಮಾಂತರ ಠಾಣಾ ಸರಹದ್ದಿನ ಸರ್ವೆ ಗ್ರಾಮದ ಭಕ್ತಕೋಡಿ, ಈ ಹಿಂದೆ ಅಲಂಗಾರು ಗ್ರಾಮದ ಕಲ್ಲೇರಿ, ಇರಾ ಹಾಗೂ ಕೊಲಾ°ಡು ಗ್ರಾಮದ ಕುಂಟು ಕುಡೇಲು, ಮಂಕುಡೆ, ಕಾಡುಮಠ, ಇಡಿRದು ಗ್ರಾಮದ ಅಳಕೆಮಜಲು ಕಡೆಗಳಲ್ಲಿ ಹಗಲು ಸಮಯ ಕಳವು ಮಾಡಿದ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ.
ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ ಆರೋಪಿಯು ಕಳ್ಳತನ ಮಾಡಿದ್ದ ಒಟ್ಟು ಅಂದಾಜು ಮೌಲ್ಯ 18 ಲಕ್ಷ ರೂ. ಮೌಲ್ಯದ 200ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಮಾರುತಿ ಆಲ್ಟೊ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಜೇಂದ್ರ ಡಿ.ಎಸ್. ಮಾರ್ಗದರ್ಶನದಂತೆ ಪೊಲೀಸರ ತಂಡ ವಿಶೇಷ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಪತ್ತೆ ತಂಡಕ್ಕೆ ಪೊಲೀಸ್ ಅಧೀಕ್ಷಕರು ವಿಶೇಷ ಬಹುಮಾನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಇದೇ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ
Chhattisgarh: ಮೂವರು ನಕ್ಸಲರ ಎನ್‌ಕೌಂಟರ್… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್
Ajekar: ಎಷ್ಟು ದಿನ ಟವರ್ ನೋಡ್ಕೊಂಡಿರ್ಲಿ, ನಮ್ಗೆ ಬೇಗನೆ ಕನೆಕ್ಷನ್ ಕೊಡಿ ಸ್ವಾಮಿ!
Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ
Kundapura: ಕೋಡಿ ಸಮುದ್ರ ತೀರದಲ್ಲಿ ಶೌಚಾಲಯ ಸಿದ್ಧವಾದರೂ ಪ್ರವಾಸಿಗರ ಬಳಕೆಗೆ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.