Fight Alone: ಮಹಾರಾಷ್ಟ್ರದಲ್ಲೂ ಇಂಡಿಯಾ ಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಉದ್ಧವ್ ಶಿವಸೇನೆ ಏಕಾಂಗಿ ಸ್ಪರ್ಧೆ: ಸಂಜಯ್ ರಾವತ್
Team Udayavani, Jan 11, 2025, 9:31 PM IST
ಮುಂಬೈ: ಲೋಕಸಭೆ ಚುನಾವಣೆಗೆ ಮಾತ್ರವೇ “ಇಂಡಿಯಾ’ (ದಿ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್ ಇನ್‌ಕ್ಲೂಸಿವ್ ಅಲೈನ್ಸ್) ಒಕ್ಕೂಟ ಎಂಬ ಕಾಂಗ್ರೆಸ್ ಹೇಳಿಕೆ ಬೆನ್ನಲ್ಲೇ ರಾಷ್ಟ್ರಮಟ್ಟದಲ್ಲಿ ಇಂಡಿಯಾ ಕೂಟದ ಇತರ ಪಕ್ಷಗಳ ನಾಯಕರಿಂದ ಅಪಸ್ವರ ಎದ್ದು ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ. ಈ ನಡುವೆ ಮಹಾರಾಷ್ಟ್ರದಲ್ಲಿನ ಮಹಾ ವಿಕಾಸ ಅಘಾಡಿ ಮೈತ್ರಿ ಕೂಡ ಮುಕ್ತಾಯದ ಹಂತದಲ್ಲಿದೆ.
ಶೀಘ್ರದಲ್ಲಿಯೇ ಅಲ್ಲಿ ನಡೆಯಲಿರುವ ಮುಂಬೈ, ಥಾಣೆ, ನಾಗ್ಪುರ ಮಹಾನಗರ ಪಾಲಿಕೆ ಚುನಾವಣೆ ಹಾಗೂ ಇತರೆ ಮುನ್ಸಿಪಲ್ ಕಾರ್ಪೊರೇಷನ್, ಜಿಲ್ಲಾ ಪರಿಷತ್, ಪಂಚಾಯತ್ ಚುನಾಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಉದ್ಧವ್ ಬಣದ ಶಿವಸೇನೆ ಶನಿವಾರ ಘೋಷಿಸಿಕೊಂಡಿದೆ.
. “ಮೈತ್ರಿಯಲ್ಲಿ ಹೋದರೆ ವೈಯಕ್ತಿಕವಾಗಿ ಪಕ್ಷಗಳ ಕಾರ್ಯಕರ್ತರಿಗೆ ಅವಕಾಶ ಸಿಗುವುದಿಲ್ಲ. ಇದರಿಂದ ಸಂಘಟನಾತ್ಮಕ ಪ್ರಗತಿಗೂ ತೊಡಕಾಗುತ್ತದೆ’ ಎಂದು ಉದ್ಧವ್ ಶಿವಸೇನೆ ಮುಖಂಡ ರಾವತ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಇಂಡಿಯಾ ಕೂಟಕ್ಕೆ ಒಬ್ಬ ಸಂಚಾಲಕನನ್ನು ನೇಮಿಸಲಾಗದ, ಅಸೆಂಬ್ಲಿ ಚುನಾವಣೆ ಬಳಿಕ ಸಭೆ ಕರೆಯಲಾಗದ ಕಾಂಗ್ರೆಸ್ ವಿರುದ್ಧವೂ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಜತೆಗೆ ಮತ್ತೆ ಉದ್ಧವ್ ಮೈತ್ರಿ?
ಬಿಜೆಪಿ ಜತೆಗೆ ಮತ್ತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಉದ್ಧವ್ ಬಣ ಶಿವಸೇನೆ ಆಸಕ್ತಿ ಹೊಂದಿದೆ ಎನ್ನಲಾಗಿದೆ. ಈ ಬಗ್ಗೆ ಸಂಸದ ಸಂಜಯ ರಾವತ್ ಸುಳಿವು ನೀಡಿದ್ದಾರೆ. ರಾಜಕೀಯದಲ್ಲಿ ಏನು ಬೇಕಿದ್ದರೂ ಆಗಲು ಸಾಧ್ಯವಿದೆ. ಇಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಶಾಶ್ವತ ಮಿತ್ರರೂ ಅಲ್ಲ’ ಎಂದು ಹೇಳಿದ್ದಾರೆ. “ಒಂದು ಕಾಲದಲ್ಲಿ ನಿತೀಶ್ ಕುಮಾರ್ ಬಿಜೆಪಿಯ ಕಟು ವಿರೋಧಿಯಾಗಿದ್ದರು. ಈಗ ಅವರೇ ಬಿಜೆಪಿ ಜತೆ ಕೈಜೋಡಿಸಿಲ್ಲವೇ? ಫಡ್ನವೀಸ್ ರಾಜಕೀಯಕ್ಕೆ ಬರುವ ಮೊದಲೇ ಶಿವಸೇನೆ ಮತ್ತು ಬಿಜೆಪಿ ಜತೆಗೆ ಮಿತ್ರತ್ವ ಇತ್ತು ಎಂದು ಹೇಳಿದ್ದಾರೆ.
ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಶಿವಸೇನೆ (ಯುಬಿಟಿ) ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಎನ್‌ಸಿಪಿಯ ಶರದ್ ಪವಾರ್ ಹಾಗೂ ಕಾಂಗ್ರೆಸ್ ನ ಸೋನಿಯಾ ಗಾಂಧಿಯೊಂದಿಗೆ 2019ರಲ್ಲಿ ಮೈತ್ರಿ ಏರ್ಪಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.