Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
ಮಾಜಿ ಆಪ್ ನಾಯಕ ಕಪಿಲ್ ಮಿಶ್ರಾಗೂ ಟಿಕೆಟ್ ಘೋಷಣೆ
Team Udayavani, Jan 11, 2025, 10:26 PM IST
ಹೊಸದಿಲ್ಲಿ: ದಿಲ್ಲಿ ವಿಧಾನಸಭೆ ಚುನಾವಣೆಗೆ ಚುನಾವಣ ಆಯೋಗ ಈಗಾಗಲೇ ದಿನಾಂಕ ನಿಗದಿಪಡಿಸಿದೆ. ಶನಿವಾರ ಬಿಜೆಪಿ ತನ್ನ 29 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.
ಮಾಜಿ ಆಪ್ ನಾಯಕ, ಮಾಜಿ ಸಚಿವ ಕಪಿಲ್ ಮಿಶ್ರಾ ಅವರಿಗೆ ಕರಾವಲ್ ನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಜೊತೆಗೆ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಖುರಾನಾ ಅವರ ಪುತ್ರ ಹರೀಶ್ ಖುರಾನಾಗೆ ಮೋತಿ ನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಲಕ್ಷ್ಮೀ ನಗರದ ಹಾಲಿ ಶಾಸಕ ಅಭಯ್ ವರ್ಮಾಗೆ ಮತ್ತೆ ಆ ಕ್ಷೇತ್ರದಿಂದಲೇ ಸ್ಪರ್ಧೆಗೆ ಟಿಕೆಟ್ ನೀಡಲಾಗಿದೆ. 2ನೇ ಪಟ್ಟಿ ಬಿಡುಗಡೆ ಮಾಡುವ ಮೂಲಕ 70 ಕ್ಷೇತ್ರಗಳ ವಿಧಾನಸಭೆಗೆ 58 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದಂತಾಗಿದೆ.
ಬಿಜೆಪಿ ಮೊದಲ ಪಟ್ಟಿಯು ಜನವರಿ 4ರಂದು ಬಿಡುಗಡೆಗೊಂಡಿತ್ತು. ಫೆ.5ರಂದು ಒಂದೇ ಹಂತದಲ್ಲಿ ಎಲ್ಲಾ 70 ಕ್ಷೇತ್ರಗಳಿಗೂ ಚುನಾವಣೆ ನಡೆಯಲಿದ್ದು, ಫೆ.8ರಂದು ಫಲಿತಾಂಶ ಪ್ರಕಟವಾಗಲಿದೆ. ಆಡಳಿತಾರೂಢ ಎಎಪಿ ಡಿಸೆಂಬರ್‌ನಲ್ಲೇ ಎಲ್ಲ 70ಕ್ಷೇತ್ರಕ್ಕೂ ಅಭ್ಯರ್ಥಿಗಳ ಘೋಷಿಸಿದೆ. ಕಾಂಗ್ರೆಸ್ 47 ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ
ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ
ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.