ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್
ರಾಜ್ಯದಲ್ಲಿ ಜನಪ್ರತಿನಿಧಿಗಳಿಗೆ ಭದ್ರತೆ ಇಲ್ಲದಂತಾಗಿದೆ: ಬಿಜೆಪಿ ಶಾಸಕ
Team Udayavani, Jan 12, 2025, 12:43 AM IST
ವಿಜಯಪುರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ ನಾನು, ಸಿ.ಟಿ.ರವಿ, ಪ್ರತಾಪ್ ಸಿಂಹ, ಚಕ್ರವರ್ತಿ ಸೂಲಿಬೆಲೆ, ಪ್ರಮೋದ್ ಮುತಾಲಿಕ್ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಬೆಳಗಾವಿಯ ಘಟನೆಯಲ್ಲಿ ಸಿ.ಟಿ.ರವಿ ಅವರನ್ನು ಮುಗಿಸಲು ಪ್ರಯತ್ನ ನಡೆದಿತ್ತು. ರಾಜ್ಯದಲ್ಲಿ ಜನಪ್ರತಿನಿಧಿಗಳಿಗೆ ಭದ್ರತೆ ಇಲ್ಲದಂತಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಸುವರ್ಣ ಸೌಧದಲ್ಲಿ ಗೂಂಡಾಗಳು ಹೊಕ್ಕು ಸಿ.ಟಿ.ರವಿ ಮೇಲೆ ದಾಳಿಗೆ ಯತ್ನ ಮಾಡುತ್ತಾರೆ. ಅಲ್ಲದೇ, ಬಳಿಕ ಅವರನ್ನು ಪೊಲೀಸರು ಇಡೀ ರಾತ್ರಿ ಸುತ್ತಾಡಿಸುತ್ತಾರೆ. ಈ ಘಟನೆ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸತೀಶ್ ಜಾರಕಿಹೊಳಿ ಅವರಿಗೂ ಗೊತ್ತಿರಲಿಲ್ಲ. ಇದುವರೆಗೂ ಯಾವ ಆರೋಪಿಗಳನ್ನು ಬಂಧಿಸಿದ್ದಾರೆ? ಈ ಘಟನೆ ಸಂದರ್ಭದಲ್ಲಿ ಸುವ್ಯವಸ್ಥೆ ಕಾಪಾಡಬೇಕಿದ್ದ ಪೊಲೀಸರನ್ನಾದರೂ ಅಮಾನತು ಮಾಡಿದ್ದಾರಾ ಎಂದು ಪ್ರಶ್ನಿಸಿದರು.
ನಕ್ಸಲರ ಶಸ್ತ್ರಾಸ್ತ್ರಗಳ ಒಪ್ಪಿಸಬೇಕಿತ್ತು:
ನಕ್ಸಲರನ್ನು ಮುಖ್ಯವಾಹಿನಿಗೆ ತರಲು ನಮ್ಮ ಅಭ್ಯಂತರವಿಲ್ಲ. ಆದರೆ, ನಕ್ಸಲರು ಶರಣಾಗತಿ ವೇಳೆ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಬೇಕಿತ್ತು. ಪಾಕಿಸ್ತಾನ ಯುದ್ಧದಲ್ಲಿ ಸೋತು ಭಾರತದ ಮುಂದೆ ಶರಣಾಗಬೇಕಾದರೂ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿತ್ತು. ಆದರೆ, ರಾಜ್ಯದಲ್ಲಿ ಇತ್ತೀಚೆಗೆ ನಕ್ಸಲರು ಶರಣಾಗತಿಯಾಗಬೇಕಾದರೆ ಶಸ್ತ್ರಾಸ್ತ್ರಗಳನ್ನು ಯಾಕೆ ಸಮರ್ಪಣೆ ಮಾಡಿಲ್ಲ? ನಕ್ಸಲ್ ಚಟುವಟಿಕೆಯಿಂದ ಪೊಲೀಸರು, ಜನಸಾಮಾನ್ಯರು ಕೊಲೆಯಾಗಿದ್ದಾರೆ. ಇದಕ್ಕೆ ಪರಿಹಾರವೇನು? ಎಂದು ಯತ್ನಾಳ್ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T.Ravi ಪ್ರಕರಣ ಸಿಐಡಿಗೆ ನೀಡಿದ್ದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಆಕ್ಷೇಪ
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್ ಆಗಲಿ: ವಿ.ಸೋಮಣ್ಣ
MUST WATCH
ಹೊಸ ಸೇರ್ಪಡೆ
C.T.Ravi ಪ್ರಕರಣ ಸಿಐಡಿಗೆ ನೀಡಿದ್ದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಆಕ್ಷೇಪ
Donald Trump ಸೋಲಿಸುತ್ತಿದ್ದೆ, ಪಕ್ಷಕ್ಕಾಗಿ ಹಿಂದೆ ಸರಿದೆ: ಅಧ್ಯಕ್ಷ ಜೋ ಬೈಡೆನ್
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.