ಇಂದು ಜೆಡಿಎಸ್ ಸಭೆ: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಒತ್ತು
ರಾಜ್ಯಾಧ್ಯಕ್ಷರ ಆಯ್ಕೆಯ ಚರ್ಚೆ ಸದ್ಯಕ್ಕಿಲ್ಲ?
Team Udayavani, Jan 12, 2025, 7:00 AM IST
ಬೆಂಗಳೂರು: ತಳಮಟ್ಟದಿಂದ ಪಕ್ಷ ಸಂಘಟನೆಯತ್ತ ಗಮನಹರಿಸಿರುವ ಜೆಡಿಎಸ್ ರವಿವಾರ ಇದರ ಬಗ್ಗೆ ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನದಲ್ಲಿ ಚಿಂತನ-ಮಂಥನ ನಡೆಸಲಿದೆ. ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರ ಈ ಸಭೆಯ ಕಾರ್ಯಸೂಚಿಯಲ್ಲಿ ಇಲ್ಲ ಎನ್ನಲಾಗಿದೆ.
ಸದಸ್ಯತ್ವ ಅಭಿಯಾನವನ್ನು ಇನ್ನಷ್ಟು ಚುರುಕುಗೊಳಿಸುವುದು, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ಪಕ್ಷದ ಸಾಂಸ್ಥಿಕ ಚುನಾವಣೆ ಇತ್ಯಾದಿ ಕಾರ್ಯಸೂಚಿಯೊಂದಿಗೆ ಈ ಸಭೆ ಕರೆಯಲಾಗಿದ್ದು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ. ಉಳಿದಂತೆ ಪಕ್ಷದ ಶಾಸಕರು, ಸಂಸದರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರನ್ನು ಸಭೆಗೆ ಆಹ್ವಾನಿಸಲಾಗಿದೆ.
ರಾಜ್ಯಾಧ್ಯಕ್ಷರು ಸೇರಿದಂತೆ ಎಲ್ಲ ಹಂತದ ಪದಾಧಿಕಾರಿಗಳ ಅವಧಿ ಮುಗಿದಿದೆ. ಎಲ್ಲ ಘಟಕಗಳಿಗೆ ಸಾಂಸ್ಥಿಕ ಚುನಾವಣೆ ನಡೆಸಬೇಕಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸೋಲು ಜೆಡಿಎಸ್‌ಗೆ ಆಘಾತವನ್ನೇ ನೀಡಿತ್ತು. ನಿಖಿಲ್ ಅವರನ್ನು ರಾಜ್ಯಾಧ್ಯಕ್ಷರ ಹೊಣೆ ನೀಡಿ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂಬುದು ಜೆಡಿಎಸ್ ಚಿಂತನೆ ಇತ್ತು. ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ನಿಖಿಲ್ ಹೇಳಿದ್ದರೆ, ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದರು.
ಜಿ.ಪಂ. ಚುನಾವಣೆ ಹೊತ್ತಿಗೆ ರಾಜ್ಯಾಧ್ಯಕ್ಷರ ಆಯ್ಕೆ?
ಎಪ್ರಿಲ್-ಮೇಯಲ್ಲಿ ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಚುನಾವಣ ಆಯೋಗ ಚಿಂತಿಸಿದೆ. ಅದರಂತೆ ಒಂದೆರಡು ತಿಂಗಳಲ್ಲಿ ಸಾಂಸ್ಥಿಕ ಚುನಾವಣೆಗಳನ್ನು ಪೂರ್ಣಗೊಳಿಸಿ, ಜಿ.ಪಂ., ತಾ.ಪಂ. ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಬೇಕು. ಬಳಿಕ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿ ಹೊಸ ಅಧ್ಯಕ್ಷರ ಸಾರಥ್ಯದಲ್ಲಿ ಜಿ.ಪಂ., ತಾ.ಪಂ ಚುನಾವಣೆಗೆ ಹೋಗಬೇಕು ಎಂಬ ಲೆಕ್ಕಾಚಾರವನ್ನು ಇಟ್ಟುಕೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
MUDA: ಮಗಳ-ಅಳಿಯಗೆ ಮುಡಾ ಸೈಟ್: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು
CLP Meeting: ನಾಳೆ ಶಾಸಕಾಂಗ ಪಕ್ಷದ ಸಭೆ: ಗರಿಗೆದರಿದ ಕುತೂಹಲ
Devotee: ಟೆಂಪಲ್ ರನ್ ಎನ್ನುವುದಾದರೆ ದೇಗುಲಗಳನ್ನು ಮುಚ್ಚಿಬಿಡಿ: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.