Naxal Surrender: ‘ಶರಣಾಗುವಾಗ ಬಂದೂಕು ಹಿಡಿದುಕೊಂಡು ಬರುತ್ತಾರಾ?’: ಡಿ.ಕೆ.ಶಿವಕುಮಾರ್
ಸಿ.ಟಿ. ರವಿಗೆ ಸಾಮಾನ್ಯ ಪ್ರಜ್ಞೆ ಇಲ್ಲವೇ: ಡಿಸಿಎಂ ಪ್ರಶ್ನೆ
Team Udayavani, Jan 12, 2025, 7:13 AM IST
ಶೃಂಗೇರಿ: ಮುಖ್ಯಮಂತ್ರಿಗಳ ಬಳಿಗೆ ಬಂದು ಶರಣಾಗುವಾಗ ಯಾರಾದರೂ ಬಂದೂಕು ಹಿಡಿದುಕೊಂಡು ಬರುತ್ತಾರಾ? ಸಿ.ಟಿ. ರವಿ ಅವರಿಗೆ ಅಷ್ಟೂ ಸಾಮಾನ್ಯ ಪ್ರಜ್ಞೆ ಇಲ್ಲವೇ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದರು.
ಸುದ್ದಿಗಾರರ ಜತೆ ಮಾತನಾಡಿ, ವೀರಪ್ಪನ್ ವಶದಲ್ಲಿದ್ದ ಡಾ| ರಾಜ್ಕುಮಾರ್ ಅವರನ್ನು ಕರೆತಂದಾಗ ಬಂದೂಕು ಸಮೇತ ಕರೆತರಲಾಗಿತ್ತೇ? ಈ ವಿಚಾರವನ್ನು ನಿಭಾಯಿಸಲು ಪೊಲೀಸ್ ಇಲಾಖೆ ಇದೆ. ಅವರು ಕೆಲವು ವಿಚಾರಗಳನ್ನು ಗೌಪ್ಯವಾಗಿಟ್ಟುಕೊಂಡು ಕರ್ತವ್ಯ ನಿಭಾಯಿಸುತ್ತಿದ್ದಾರೆ. ಅವರ ಕರ್ತವ್ಯದಲ್ಲಿ ನಾವು ಹಸ್ತಕ್ಷೇಪ ಮಾಡುವಂತಿಲ್ಲ ಎಂದರು. ರಾಜ್ಯವನ್ನು ನಕ್ಸಲ್ ಮುಕ್ತ ಮಾಡಿರುವುದಕ್ಕೆ ಸಂತೋಷಪಡಬೇಕು. ಆದರೆ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ರವಿ ಡ್ರಾಮಾ ಮಾಸ್ಟರ್, ಸುಳ್ಳು ಕತೆ ಹೆಣೆಯುವಲ್ಲಿ ನಿಸ್ಸೀಮ: ಡಿಕೆಶಿ ಕಿಡಿ
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸೀಮ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ರವಿ ರಾಷ್ಟ್ರೀಯ ನಾಯಕ, ಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ಎಂದು ಭಾವಿಸಿದ್ದೆ. ಅವರ ಮಾತು-ವಿಚಾರ ನೋಡಿದ ನಂತರ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ ಎಂದರು.
ಈ ಪ್ರಕರಣದಲ್ಲಿ ಅವರು ಬೇರೆ ಯಾರ ಮಾತೂ ಕೇಳಬೇಕಿಲ್ಲ. ಅವರ ಆತ್ಮಸಾಕ್ಷಿಯ ಮಾತನ್ನು ಕೇಳಲಿ. ಆ ರೀತಿ ಮಾತನಾಡಬಾರದಿತ್ತು ಎಂದು ಅವರ ಪಕ್ಷದ ನೂರು ನಾಯಕರು ನನ್ನ ಬಳಿ ಹೇಳಿದ್ದಾರೆ. ಅಚಾತುರ್ಯವಾಗಿ ಆ ರೀತಿ ಮಾತಾಡಿದ್ದೇನೆ, ಕ್ಷಮೆ ಕೇಳುತ್ತೇನೆ ಎಂದಿದ್ದರೆ ಪ್ರಕರಣ ಮುಗಿಯುತ್ತಿತ್ತು. ಅದನ್ನು ಬಿಟ್ಟು ಸುಳ್ಳಿಗೆ ಸುಳ್ಳು ಸೇರಿಸಿಕೊಂಡು ಹೋದರೆ ಪ್ರಯೋಜನವಿಲ್ಲ. ಅವರ ಆರೋಪ ಸುಳ್ಳು. ಅವರದ್ದೇ ಅನೇಕ ತನಿಖಾ ತಂಡಗಳಿವೆಯಲ್ಲ, ತನಿಖೆ ಮಾಡಿಸಲಿ ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
MUDA: ಮಗಳ-ಅಳಿಯಗೆ ಮುಡಾ ಸೈಟ್: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು
CLP Meeting: ನಾಳೆ ಶಾಸಕಾಂಗ ಪಕ್ಷದ ಸಭೆ: ಗರಿಗೆದರಿದ ಕುತೂಹಲ
Devotee: ಟೆಂಪಲ್ ರನ್ ಎನ್ನುವುದಾದರೆ ದೇಗುಲಗಳನ್ನು ಮುಚ್ಚಿಬಿಡಿ: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.