Support Price: ಬೆಂಬಲ ಬೆಲೆ ಘೋಷಿಸದಿದ್ರೆ ರೈತ ಸಂಪರ್ಕ ಕೇಂದ್ರಕ್ಕೆ ಬೀಗ: ಆರ್.ಅಶೋಕ್
ಭತ್ತ, ತೊಗರಿ ಖರೀದಿಗೆ ಕ್ರಮ ಕೈಗೊಳ್ಳಲು ತಾಕೀತು
Team Udayavani, Jan 12, 2025, 6:56 AM IST
ಬೆಂಗಳೂರು: ಬೆಂಬಲ ಬೆಲೆಯಲ್ಲಿ ಭತ್ತ ಮತ್ತು ತೊಗರಿ ಖರೀದಿಗೆ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟಿಸಲಾಗುವುದು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದರೂ ಅತ್ತ ಗಮನ ಹರಿಸಿಲ್ಲ. ಇನ್ನು 24 ಗಂಟೆಯೊಳಗೆ ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು, ಖರೀದಿ ಆರಂಭಿಸದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿನ್ನರ್ ಸಭೆಗಳು, ಔತಣಕೂಟಗಳು, ರಾಜಕೀಯ ಮೇಲಾಟಗಳಲ್ಲೇ ನಿರತರಾಗಿದ್ದಾರೆ. ಈ ಕೆಲಸಗಳು ಮುಗಿದಿದ್ದರೆ ಸ್ವಲ್ಪ ರೈತರ ಸಮಸ್ಯೆಗಳತ್ತ ಗಮನ ಹರಿಸುವ ದೊಡ್ಡ ಮನಸ್ಸು ಮಾಡಬೇಕು. ಅದಿಲ್ಲವಾದರೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗಾದರೂ, ಅವರು ಕೃಷಿ ಸಚಿವರು ಎಂಬುದನ್ನು ಒಮ್ಮೆ ನೆನಪು ಮಾಡಬೇಕು ಎಂದು ವ್ಯಂಗ್ಯವಾಡಿದರು.
ಮಂಡ್ಯದಲ್ಲಿ ಭತ್ತ ಖರೀದಿ ಕೇಂದ್ರಗಳು ಆರಂಭವಾಗದೆ, ರೈತರು ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ದಲ್ಲಾಳಿಗಳಿಗೆ ಭತ್ತ ಮಾರಾಟ ಮಾಡುವ ಅನಿವಾರ್ಯ ಎದುರಾಗಿದೆ. ಕ್ವಿಂಟಾಲ್ ಭತ್ತಕ್ಕೆ 3,000 ರೂ. ಬೆಂಬಲ ಬೆಲೆ ನಿಗದಿಯಾಗಿದ್ದರೂ ಸರ್ಕಾರ ಭತ್ತ ಖರೀದಿ ಕೇಂದ್ರಗಳನ್ನು ತೆರೆಯದ ಕಾರಣ ದಲ್ಲಾಳಿಗಳಿಗೆ 1,800 ರೂ.ನಿಂದ 2,000 ರೂ.ಗೆ ಮಾರಾಟ ಮಾಡಿ ರೈತರು ನಷ್ಟ ಅನುಭವಿಸುತ್ತಿದ್ದಾರೆ ಕೃಷಿ ಸಚಿವರ ತವರು ಜಿಲ್ಲೆಯಲ್ಲೇ ಈ ಗತಿಯಾದರೆ, ಇನ್ನು ಬೇರೆ ಜಿಲ್ಲೆಗಳ ಪರಿಸ್ಥಿತಿ ಏನಾಗಿರಬೇಡ ? ಎಂದು ಪ್ರಶ್ನಿಸಿದ್ದಾರೆ.
ಕುರ್ಚಿಗಾಗಿ ಕಾದಾಟ: ಆಶೋಕ್
ಈ ಸರ್ಕಾರದಲ್ಲಿ ಒಬ್ಬರು ಕುರ್ಚಿ ಉಳಿಸಿಕೊಳ್ಳಲು ತಂತ್ರ ಹೆಣೆಯುತ್ತಿದ್ದರೆ, ಇನ್ನೊಬ್ಬರು ಕುರ್ಚಿ ಕಿತ್ತುಕೊಳ್ಳಲು ಕತ್ತಿ ಮಸೆಯುತ್ತಿದ್ದಾರೆ. ಇವರಿಬ್ಬರ ನಡುವೆ ಅತಂತ್ರವಾಗಿರುವ ಸಚಿವರು ಅವರವರ ಅಸ್ತಿತ್ವ ಉಳಿಸಿಕೊಳ್ಳಲು ಡಿನ್ನರ್ ಮೀಟಿಂಗ್, ಸೀಕ್ರೆಟ್ ಸಭೆ ಮಾಡಿ ಕಾಲಹರಣ ಮಾಡುತ್ತಿದ್ದಾರೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇವೆಲ್ಲದರ ನಡುವೆ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ಹೋಗಿದೆ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
MUDA: ಮಗಳ-ಅಳಿಯಗೆ ಮುಡಾ ಸೈಟ್: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು
CLP Meeting: ನಾಳೆ ಶಾಸಕಾಂಗ ಪಕ್ಷದ ಸಭೆ: ಗರಿಗೆದರಿದ ಕುತೂಹಲ
Devotee: ಟೆಂಪಲ್ ರನ್ ಎನ್ನುವುದಾದರೆ ದೇಗುಲಗಳನ್ನು ಮುಚ್ಚಿಬಿಡಿ: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.