ಡಿನ್ನರ್ ಪಾರ್ಟಿ ಬಗ್ಗೆ ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ: ಜಿ.ಪರಮೇಶ್ವರ್
ನಾಳೆ ನಡೆಯಲಿರುವ ಸಭೆಯಲ್ಲೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾಗೆ ಮನವರಿಕೆ: ಗೃಹ ಸಚಿವ
Team Udayavani, Jan 12, 2025, 6:50 AM IST
ಬೆಂಗಳೂರು: ನಾವು ಯಾವ ಉದ್ದೇಶಕ್ಕಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಶಾಸಕ, ಸಚಿವರ ಡಿನ್ನರ್ ಸಭೆ ಮಾಡಲು ಹೊರಟಿದ್ದೆವು ಎಂಬುದನ್ನು ದೂರವಾಣಿ ಮೂಲಕ ಹೈಕಮಾಂಡ್ಗೆ ವಿವರಿಸಿದ್ದೇವೆ. ಸೋಮವಾರ (ಜ.13) ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕಾಂಗ್ರೆಸ್ ಸಮಾವೇಶ ಹಿನ್ನೆಲೆಯಲ್ಲಿ ವಿವಿಧ ಸಭೆ ನಡೆಸಲು ಬೆಂಗಳೂರಿಗೆ ಬಂದಾಗಲೂ ಅವರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಾವು ಏರ್ಪಡಿಸಿದ್ದ ಸಭೆಯನ್ನು ಮುಂದೂಡಲು ತಿಳಿಸಿದಾಗ ಮುಂದೂಡಿದ್ದೆವು. ಮತ್ತೆ ಅವರ ಗಮನ ತರಬೇಕಿತ್ತು. ಅದೇ ಸೂಕ್ತ ಎಂದು ನಾವೆಲ್ಲರೂ ಮಾತನಾಡಿಕೊಂಡಿದ್ದೇವೆ. ಅವರ ಗಮನಕ್ಕೆ ತಂದೇ ಸಭೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಮುಂದೆ ಯಾವಾಗ ಮಾಡುತ್ತೇವೆ, ಸಮಯ, ದಿನಾಂಕ ಎಲ್ಲವನ್ನೂ ಹೈಕಮಾಂಡ್ ಜತೆ ಮಾತನಾಡಿದ ಬಳಿಕ ಯೋಚಿಸುತ್ತೇವೆ. ಇನ್ನು ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಬಗ್ಗೆ ನನಗಂತೂ ಮಾಹಿತಿ ಇಲ್ಲ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ. ಅವರು ಹೇಳಿದಂತೆ ಕೇಳುವವರು ನಾವೆಲ್ಲ ಎಂದಷ್ಟೇ ಪರಮೇಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ
Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
MUDA: ಮಗಳ-ಅಳಿಯಗೆ ಮುಡಾ ಸೈಟ್: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು
CLP Meeting: ನಾಳೆ ಶಾಸಕಾಂಗ ಪಕ್ಷದ ಸಭೆ: ಗರಿಗೆದರಿದ ಕುತೂಹಲ
MUST WATCH
ಹೊಸ ಸೇರ್ಪಡೆ
Chhattisgarh: ಮೂವರು ನಕ್ಸಲರ ಎನ್ಕೌಂಟರ್… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್
Ajekar: ಎಷ್ಟು ದಿನ ಟವರ್ ನೋಡ್ಕೊಂಡಿರ್ಲಿ, ನಮ್ಗೆ ಬೇಗನೆ ಕನೆಕ್ಷನ್ ಕೊಡಿ ಸ್ವಾಮಿ!
Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ
Kundapura: ಕೋಡಿ ಸಮುದ್ರ ತೀರದಲ್ಲಿ ಶೌಚಾಲಯ ಸಿದ್ಧವಾದರೂ ಪ್ರವಾಸಿಗರ ಬಳಕೆಗೆ ಇಲ್ಲ!
Mangaluru: ನಾಗುರಿ ಬಳಿ ನೀರು ಪೂರೈಕೆ ಪೈಪ್ಲೈನ್ ಅಳವಡಿಕೆ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.