Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ
Team Udayavani, Jan 12, 2025, 9:19 AM IST
ಲಾಸ್ ಏಂಜಲೀಸ್: ಒಂದು ವಾರದ ಹಿಂದೆ ಕ್ಯಾಲಿಫೋರ್ನಿಯಾದಲ್ಲಿ ಉಂಟಾಗಿರುವ ಕಾಡ್ಗಿಚ್ಚಿಗೆ 12,000 ಕ್ಕೂ ಅಧಿಕ ಮನೆಗಳು ಸುಟ್ಟು ಕರಕಲಾಗಿದ್ದು ಇದುವರೆಗೆ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿ ಈಗಾಗಲೇ ಲಕ್ಷಾಂತರ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು ಜೊತೆಗೆ ಕಾಡ್ಗಿಚ್ಚಿನಿಂದ ಹಾಲಿವುಡ್ ನಟರು ಕೂಡ ತೊಂದರೆಗೆ ಸಿಲುಕೊಂಡಿದ್ದಾರೆ ಎಂದು ಹೇಳಲಾಗಿದ್ದು. ಹಲವು ನಟ ನಟಿಯರ ಮನೆಗಳು ಕಾಡ್ಗಿಚ್ಚಿಗೆ ಸಿಲುಕಿ ಸುಟ್ಟು ಕರಕಲಾಗಿದೆ ಎಂದು ಹೇಳಲಾಗಿದೆ. ಹಾಲಿವುಡ್ ನಟ ನಟಿಯರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಂಡಿದ್ದಾರೆ ಎಂದು ಹೇಳಲಾಗಿದೆ.
ಅಗ್ನಿಶಾಮಕ ತಂಡ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದರು ಜೋರಾಗಿ ಬೀಸುವ ಗಾಳಿ ಹೆಚ್ಚಿನ ಅನಾಹುತಕ್ಕೆ ಕಾರಣವಾಗಿದೆ ಜೊತೆಗೆ ಕಾರ್ಯಾಚರಣೆಗೂ ಅಡ್ಡಿಯಾಗಿದೆ ಎಂದು ಹೇಳಲಾಗಿದೆ.
BREAKING: A ‘firenado’ was just spotted near the 405 freeway in Los Angeles. pic.twitter.com/vQwM7wuyfr
— News Rated (@NewsRated) January 11, 2025
ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಈಟನ್ ಮತ್ತು ಪಾಲಿಸೇಡ್ಸ್ ಪ್ರದೇಶದಲ್ಲಿ ಹೆಚ್ಚಿನ ಅನಾಹುತ ಸಂಭವಿಸಿದ್ದು ಪಾಲಿಸೇಡ್ಸ್ ನಲ್ಲಿ ಸುಮಾರು 22,600 ಎಕರೆ ಪ್ರದೇಶ ಬೆಂಕಿಗಾಹುತಿಯಾಗಿದ್ದು ಜೊತೆಗೆ ಈಟನ್ ನಲ್ಲಿ 14,000 ಎಕರೆ ಪ್ರದೇಶ ಬೆಂಕಿಗಾಹುತಿಯಾಗಿದೆ ಎಂದು ಹೇಳಲಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಗಂಟೆಗೆ 120 ಕಿಮೀ ವೇಗದಲ್ಲಿ ಗಾಳಿ ಬಿಸಲಿದ್ದು ಇದು ಕಾರ್ಯಾಚರಣೆಗೆ ಅಡ್ಡಿಯಾಗಲಿದೆ ಅಲ್ಲದೆ ಬೆಂಕಿಯಾ ತೀವ್ರತ್ತೆ ಹೆಚ್ಚಾಗಲು ಕಾರಣವಾಗಲಿದೆ ಎಂದು ಹೇಳಲಾಗಿದೆ.
ಘಟನೆಯಲ್ಲಿ ಹದಿಮೂರು ಮಂದಿ ನಾಪತ್ತೆಯಾಗಿದ್ದು ಅವರ ಕಾರ್ಯಾಚರಣೆ ಸವಾಲಿನ ಕೆಲಸವಾಗಿದೆ ಎಂದು ರಕ್ಷಣಾ ಅಧಿಕಾರಿಗಳು ಹೇಳಿದ್ದಾರೆ.
ಈ ನಡುವೆ ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಅವರು ರಾಜ್ಯ ಮತ್ತು ಸ್ಥಳೀಯ ಅಧಿಕಾರಿಗಳೊಂದಿಗೆ ಪರಿಹಾರ ಕಾರ್ಯಾಚರಣೆಗಳ ಸ್ಥಿತಿಯ ಕುರಿತು ಮಾತುಕತೆ ನಡೆಸಿದ್ದಾರೆ.
ಇದನ್ನೂ ಓದಿ: Champions Trophy: ನ್ಯೂಜಿಲ್ಯಾಂಡ್ ತಂಡ ಪ್ರಕಟ; ತಂಡಕ್ಕೆ ಮರಳಿದ ಮೂವರು ಘಟಾನುಘಟಿಗಳು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.