Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…
Team Udayavani, Jan 12, 2025, 9:49 AM IST
ಚಿಕ್ಕಮಗಳೂರು: ಮನೆಯ ಹೊರಗೆ ಮಲಗಿದ್ದ ವ್ಯಕ್ತಿಯನ್ನು ಕಾಡಾನೆಯೊಂದು ಸೊಂಡಿಲಿನಿಂದ ಎತ್ತಿ ಬಿಸಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹುಕ್ಕುಂದ ಗ್ರಾಮದಲ್ಲಿ ಭಾನುವಾರ(ಜ.12) ಮುಂಜಾನೆ ಸಂಭವಿಸಿದೆ.
ಘಟನೆಯಿಂದ ನಾರಾಯಣಗೌಡ ಅವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಆಲ್ದೂರು ಸುತ್ತಮುತ್ತ ಒಂಟಿ ಸಲಗಗಳ ಹಾವಳಿ ಮಿತಿಮೀರಿದ್ದು ಅದರಂತೆ ಭಾನುವಾರ ಮುಂಜಾನೆ ನಾರಾಯಣಗೌಡ ಅವರು ಮನೆಯ ಹೊರಭಾಗದಲ್ಲಿ ಮಲಗಿದ್ದ ವೇಳೆ ಮುಂಜಾನೆ ಸುಮಾರು ಐದು ಗಂಟೆಯ ವೇಳೆಗೆ ಕಾಡಾನೆ ದಾಳಿ ನಡೆಸಿದ್ದು ಈ ಸಂದರ್ಭ ಮಲಗಿದ್ದ ನಾರಾಯಣ ಗೌಡ ಅವರನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ್ದು ಈ ವೇಳೆ ನಾರಾಯಣ ಗೌಡ ಹುಲ್ಲಿನ ರಾಶಿಯ ಮೇಲೆ ಬಿದ್ದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದ್ದು ತಲೆ ಹಾಗೂ ಕಾಲಿಗೆ ಗಂಭೀರ ಗಾಯಗೊಡಿದ್ದಾರೆ. ವಿಷಯ ಗೊತ್ತಗುತ್ತಿದ್ದಂತೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಆನೆ ದಾಳಿಯಿಂದ ಗ್ರಾಮದ ಜನ ಬೆಚ್ಚಿ ಬಿದ್ದಿದ್ದು ಕೂಡಲೇ ಆನೆಯನ್ನು ಗ್ರಾಮದಿಂದ ಸ್ಥಳಾಂತರಿಸುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಇದೇ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
MUDA: ಮಗಳ-ಅಳಿಯಗೆ ಮುಡಾ ಸೈಟ್: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು
CLP Meeting: ನಾಳೆ ಶಾಸಕಾಂಗ ಪಕ್ಷದ ಸಭೆ: ಗರಿಗೆದರಿದ ಕುತೂಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.