Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ
Team Udayavani, Jan 12, 2025, 2:40 PM IST
ಢಾಕಾ: ಮುಂಬರುವ ಚಾಂಪಿಯನ್ಸ್ ಟ್ರೋಫಿಗಾಗಿ ಬಾಂಗ್ಲಾದೇಶ ತಂಡ ಪ್ರಕಟಿಸಲಾಗಿದೆ. ಇಬ್ಬರು ಹಿರಿಯ ಆಟಗಾರರನ್ನು ತಂಡದಿಂದ ಕೈಬಿಡಲಾಗಿದೆ.
ಚಾಂಪಿಯನ್ಸ್ ಟ್ರೋಫಿ ತಂಡದಿಂದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಲಿಟ್ಟನ್ ದಾಸ್ ಅವರನ್ನು ಹೊರಗಿಡಲಾಗಿದೆ. ಏಕದಿನ ಪಂದ್ಯಗಳಲ್ಲಿ ಅವರ ಕಳಪೆ ಸ್ಕೋರ್‌ಗಳ ಸರಣಿಯ ನಂತರ ಕೈಬಿಡಲಾಗಿದೆ. ಅವರು ತಮ್ಮ ಕೊನೆಯ 13 ಇನ್ನಿಂಗ್ಸ್‌ಗಳಲ್ಲಿ ಅರ್ಧಶತಕವೂ ಗಳಿಸಿಲ್ಲ. ಅಲ್ಲದೆ ಅವರ ಕೊನೆಯ ಏಳು ಇನ್ನಿಂಗ್ಸ್‌ಗಳಲ್ಲಿ ಒಂದಂಕಿಯ ಸ್ಕೋರ್‌ಗಳಿಗೆ ಆರು ಬಾರಿ ಔಟಾಗಿದ್ದಾರೆ.
ಸ್ಟಾರ್ ಆಲ್ ರೌಂಡರ್ ಶಕೀಬ್ ಅಲ್ ಹಸನ್ ಕೂಡ ಆಯ್ಕೆಯಿಂದ ಹೊರಗುಳಿದಿದ್ದಾರೆ. ಶಕೀಬ್ ಅಕ್ರಮ ಬೌಲಿಂಗ್ ಶೈಲಿಯಿಂದಾಗಿ ಉನ್ನತ ಮಟ್ಟದ ಕ್ರಿಕೆಟ್‌ನಲ್ಲಿ ಬೌಲಿಂಗ್ ಮಾಡುವುದನ್ನು ಅಮಾನತುಗೊಳಿಸಲಾಗಿದೆ. ಅವರು ಇತ್ತೀಚೆಗೆ ತಮ್ಮ ಬೌಲಿಂಗ್ ಶೈಲಿಯ ಎರಡನೇ ಸ್ವತಂತ್ರ ಮೌಲ್ಯಮಾಪನದಲ್ಲಿ ವಿಫಲರಾಗಿದ್ದಾರೆ. ಚಾಂಪಿಯನ್ಸ್ ಟ್ರೋಫಿ ತಂಡದಿಂದ ಶಕೀಬ್ ಅವರನ್ನು ಹೊರಗಿಡುವುದು ಅವರ ಏಕದಿನ ವೃತ್ತಿಜೀವನದ ಅಂತ್ಯವನ್ನು ಸೂಚಿಸುತ್ತದೆ.
ಮುಶ್ಫಿಕರ್ ರಹೀಮ್, ತೌಹಿದ್ ಹೃದಯ್ ಮತ್ತು ಮುಸ್ತಾಫಿಜುರ್ ರೆಹಮಾನ್ ಅವರೊಂದಿಗೆ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಕೂಡ ತಂಡಕ್ಕೆ ಮರಳಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಮಂಡಿರಜ್ಜು ಗಾಯದಿಂದಾಗಿ ಶಾಂಟೊ ವೆಸ್ಟ್ ಇಂಡೀಸ್ ಪ್ರವಾಸವನ್ನು ತಪ್ಪಿಸಿಕೊಂಡಿದ್ದರು.
ಬಾಂಗ್ಲಾದೇಶ ತಂಡ
ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ಮುಶ್ಫಿಕರ್ ರಹೀಮ್ (ವಿ.ಕೀ), ತೌಹಿದ್ ಹೃದಯ್, ಸೌಮ್ಯ ಸರ್ಕಾರ್, ತಂಝಿದ್ ಹಸನ್, ಮಹ್ಮುದುಲ್ಲಾ, ಜೇಕರ್ ಅಲಿ, ಮೆಹಿದಿ ಹಸನ್ ಮಿರಾಜ್, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್, ಪರ್ವೇಜ್ ಹೊಸೈನ್, ನಸುಮ್ ಅಹ್ಮದ್, ತಂಜಿಮ್ ಹಸನ್, ನಹಿದ್ ರಾಣಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India: ಬಿಸಿಸಿಐ ಬಳಿ ಕೆಲವು ತಿಂಗಳ ಅವಕಾಶ ಕೇಳಿದ ರೋಹಿತ್: ಸಭೆಯಲ್ಲಿ ಏನಾಯ್ತು?
IPL 2025 ಮಾರ್ಚ್ 23 ರಿಂದ ಆರಂಭ: ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ
INDWvsIREW: ಜೆಮಿಮಾ ಚೊಚ್ಚಲ ಶತಕ: ದಾಖಲೆಯ ರನ್ ಪೇರಿಸಿದ ಭಾರತ ವನಿತೆಯರು
Saikia: ಬಿಸಿಸಿಐ ಕಾರ್ಯದರ್ಶಿಯಾಗಿ ಮಾಜಿ ಅಸ್ಸಾಂ ಕ್ರಿಕೆಟರ್ ದೇವಜಿತ್ ಸೈಕಿಯಾ ನೇಮಕ
Champions Trophy: ಟೀಂ ಇಂಡಿಯಾಗೆ ಗಾಯದ ಸಂಕಷ್ಟ; ಪ್ರಮುಖ ಬೌಲರ್ ಕೂಟದಿಂದ ಔಟ್!
MUST WATCH
ಹೊಸ ಸೇರ್ಪಡೆ
Mukund MGM Realty: ಶೀಘ್ರದಲ್ಲೇ ಮತ್ತೆರಡು ಬ್ಯುಸಿನೆಸ್ ಸೆಂಟರ್‌ಗಳು ಪ್ರಾರಂಭ
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Tulu Film: ರೂಪೇಶ್ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್ ಸ್ಟಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.