Congress: ಇದೇ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ
ಕೆಲವರು ಮಾತನಾಡುತ್ತಾರೆ. ಡಿ.ಕೆ. ಶಿವಕುಮಾರ್ ಅವರು ಕೆಲಸ ಮಾಡುತ್ತಾರೆ,,
Team Udayavani, Jan 12, 2025, 3:04 PM IST
ದಾವಣಗೆರೆ: ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಇದೇ ಅವಧಿಯಲ್ಲಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಚನ್ನಗಿರಿ ಶಾಸಕ ಬಸವರಾಜ್ ವಿ. ಶಿವಗಂಗಾ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರು ಬಹಳ ಕಷ್ಟಪಟ್ಟಿದ್ದಾರೆ. ಅವರು ಪಟ್ಟಿರುವ ಕಷ್ಟಕ್ಕೆ ತಕ್ಕ ಪ್ರತಿಫಲ ಇದ್ದೇ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಧಿಕಾರ ಹಂಚಿಕೆ, ಪವರ್ ಶೇರಿಂಗ್ ಯಾವುದೂ ಇಲ್ಲ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಹಿಂದೆನೂ ಹೇಳಿದ್ದೇನೆ ಈಗಲೂ ಹೇಳುತ್ತೇನೆ, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ. ಅವರು ಐದು ವರ್ಷದ ಕಾಲಾವಧಿಗೆ ಮುಖ್ಯಮಂತ್ರಿ ಆಗಬೇಕಿತ್ತು. ಕೆಲ ಬೆಳವಣಿಗೆಯಿಂದ ಸಿದ್ದರಾಮಯ್ಯನವರು ಆಗಿದ್ದಾರೆ. ಒಳ್ಳೆಯ ಆಡಳಿತ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಕುರ್ಚಿ ಖಾಲಿಯಾದ ತಕ್ಷಣ ನಾವು ಕ್ಲೈಂ ಮಾಡುತ್ತೇವೆ ಎಂದು ಮಾರ್ಮಿಕವಾಗಿ ಹೇಳಿದರು.
ಡಿ.ಕೆ. ಶಿವಕುಮಾರ್ ಅವರು ಶೃಂಗೇರಿಯಲ್ಲಿ ಒಳ್ಳೆಯ ಅರ್ಥದಲ್ಲೇ ಮಾತನಾಡಿದ್ದಾರೆ. ಅವರು ನೀಡಿರುವ ಹೇಳಿಕೆಯನ್ನು ನೋಡುವ ದೃಷ್ಟಿಕೋನದ ಮೇಲೆ ಹೋಗುತ್ತದೆ. ಕೆಟ್ಟದಾಗಿ ನೋಡಿದರೆ ಕೆಟ್ಟದ್ದಾಗಿ, ಒಳ್ಳೆಯ ರೀತಿಯಲ್ಲಿ ನೋಡಿದರೆ ಒಳ್ಳೆಯದಾಗಿ ಕಾಣುತ್ತದೆ ಎಂದು ತಿಳಿಸಿದರು.
ಡಿ.ಕೆ. ಶಿವಕುಮಾರ್ ಶಾಸಕರ ಗೆಲ್ಲಿಸುವಲ್ಲಿ ಸಾಕಷ್ಟು ಕಷ್ಟಪಟ್ಟಿದ್ದಾರೆ. ಅವರು ಶಾಸಕರನ್ನು ಅರ್ಡರ್ ಮಾಡಿ ಕೇಳಬೇಕು. ಅವರು ಹೇಳಿರುವುದು ಸರಿ ಇದೆ ಎಂದರು.
ನಾವೆಲ್ಲ ಒಗ್ಗಟ್ಟಾಗಿಯೇ ಇದ್ದೇವೆ. ಏನಾದರೂ ತೀರ್ಮಾನ ತೆಗೆದು ಕೊಳ್ಳಬೇಕಾದರೆ ಅದು ಹೈಕಮಾಂಡ್ ಇದೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ ಎಂದು ತಿಳಿಸಿದರು.
ಜೆಡಿಎಸ್ ಶಾಸಕರು ಅವರಾಗಿಯೇ ಬರುತ್ತಾರೆ. ಎಂದರೆ ಸೇರಿಸಿಕೊಳ್ಳದೆ ಇರಲು ಆಗುತ್ತದೆಯೇ? ಒಟ್ಟು ಹನ್ನೊಂದು ಜನ ಜೆಡಿಎಸ್ ಶಾಸಕರು ಕಾಂಗ್ರೆಸ್ ಗೆ ಬರುವವರಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಪಕ್ಷ ಸಂಘಟನೆಗೆ ಎಲ್ಲರನ್ನೂ ಒಟ್ಟುಗೂಡಿಸುತ್ತಿದ್ದಾರೆ. ಉಳಿದವರು ಯಾರನ್ನು ಕೂಡ ಕರೆತರಲು ಸಾಧ್ಯ ಆಗುವುದಿಲ್ಲ ಎಂದರು.
ಕೆಲವರಿಗೆ ಅಧಿಕಾರ ಬೇಕು ಅಷ್ಟೇ. ಈ ರೀತಿ ಅಪರೇಷನ್ ಮಾಡಿ ಕರೆತರಲಿ ನೋಡೋಣ ಎಂದರು.
ಕೆಲವರು ಮಾತನಾಡುತ್ತಾರೆ. ಡಿ.ಕೆ. ಶಿವಕುಮಾರ್ ಅವರು ಕೆಲಸ ಮಾಡುತ್ತಾರೆ. ಅವರು ಮಾಡಿಟ್ಟ ಊಟವನ್ನು ಮಾಡಲು ಮಾತ್ರ ಬರುತ್ತಾರೆ ಎಂದರು.
ಉಪ ಚುನಾವಣೆಯಲ್ಲಿ ಕೂಡ ಮೂರಕ್ಕೆ ಮೂರು ಗೆಲ್ಲಿಸಿಕೊಂಡ ಬಂದಿದ್ದಾರೆ. ಎಲ್ಲವನ್ನೂ ಹೈಕಮಾಂಡ್ ಗಮನಿಸುತ್ತಿದೆ. ಕಷ್ಟಪಟ್ಟವರಿಗೆ ಒಳ್ಳೆಯ ದಿನ ಇದ್ದೇ ಇರುತ್ತೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Mudhol: ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ ಸೆರೆ
Kottigehara: ಸಂಸ್ಕಾರದಿಂದ ಉತ್ತಮ ಶಿಕ್ಷಣ : ಶ್ರೀ ಗುಣನಾಥ ಸ್ವಾಮೀಜಿ ಹೇಳಿಕೆ
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Mukund MGM Realty: ಶೀಘ್ರದಲ್ಲೇ ಮತ್ತೆರಡು ಬ್ಯುಸಿನೆಸ್ ಸೆಂಟರ್‌ಗಳು ಪ್ರಾರಂಭ
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Tulu Film: ರೂಪೇಶ್ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್ ಸ್ಟಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.