BJP ಗೆದ್ದರೆ ದೆಹಲಿಯ ಕೊಳೆಗೇರಿಗಳು ನೆಲಸಮ: ಅಮಿತ್ ಶಾ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ
Team Udayavani, Jan 12, 2025, 4:14 PM IST
ನವದೆಹಲಿ: ಫೆಬ್ರವರಿ 5 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ನಗರದಲ್ಲಿನ ಕೊಳೆಗೇರಿಗಳನ್ನು ನೆಲಸಮ ಮಾಡಲಿದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರವಿವಾರ(ಜ12)ಆರೋಪಿಸಿದ್ದಾರೆ.
‘ಶೀಷ್ ಮಹಲ್'(ದೆಹಲಿ ಮುಖ್ಯಮಂತ್ರಿ ನಿವಾಸ) ದುಬಾರಿ ಶೌಚಾಲಯಗಳನ್ನು ನಿರ್ಮಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರುಆರೋಪಿಸಿದ ಒಂದು ದಿನದ ನಂತರ ಕೇಜ್ರಿವಾಲ್ ತಿರುಗೇಟು ನೀಡಿದರು.
ಶಾಕುರ್ ಬಸ್ತಿ ಕೊಳಗೇರಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್ ‘ಬಿಜೆಪಿ ಐದು ವರ್ಷಗಳ ಕಾಲ ಸ್ಲಂ ನಿವಾಸಿಗಳನ್ನು ಕಡೆಗಣಿಸಿ ಚುನಾವಣೆ ಸಮಯದಲ್ಲಿ ಮಾತ್ರ ಮತಕ್ಕಾಗಿ ಅವರನ್ನು ತಲುಪುತ್ತಿದೆ’ ಎಂದು ಕಿಡಿ ಕಾರಿದರು.
ಸ್ಲಂ ನಿವಾಸಿಗಳೊಂದಿಗಿನ ಸಭೆಯಲ್ಲಿ ಅಮಿತ್ ಶಾ ತನ್ನನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ ಕೇಜ್ರಿವಾಲ್, “ಯಾವುದೇ ನಾಗರಿಕರು ಇದನ್ನು ಕೇಳಲು ನಾಚಿಕೆಪಡುತ್ತಾರೆ” ಎಂದರು.
ಅಮಿತ್ ಶಾ ಶನಿವಾರ ‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಹೇಳಿದ್ದೆವು, ಶೌಚಾಲಯ ನಿರ್ಮಿಸಬೇಕು ಎಂದು ಕೇಜ್ರಿವಾಲ್ ಹೇಳುತ್ತಿದ್ದರು. 500 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದ್ದೇವೆ’ ಎಂದು ಹೇಳಿಕೆ ನೀಡಿದ್ದರು.
‘ಮೋದಿಯವರು ದೇಶದ 3.58 ಕೋಟಿಗೂ ಹೆಚ್ಚು ಬಡವರಿಗೆ ಮನೆಗಳನ್ನು ನೀಡಿದ್ದಾರೆ ಮತ್ತು ಸ್ಲಮ್ನಲ್ಲಿ ವಾಸಿಸುವ ಪ್ರತಿಯೊಬ್ಬರಿಗೂ ಅವರ ಶಾಶ್ವತ ಮನೆ ನೀಡಲಾಗುವುದು. ಅರವಿಂದ್ ಕೇಜ್ರಿವಾಲ್ ‘ಶೀಷ್ ಮಹಲ್’ ನಲ್ಲಿರುವ ಶೌಚಾಲಯವು ಕೊಳೆಗೇರಿಗಳಿಗಿಂತ ಹೆಚ್ಚು ದುಬಾರಿಯಾಗಿದೆ’ ಎಂದು ಶಾ ವಾಗ್ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾರತ ಪ್ರತಿನಿಧಿಸಲಿರುವ ಜೈಶಂಕರ್
Elephant: ಆಹಾರ ಅರಸುತ್ತಾ ಹೊರಟ ಹೆಣ್ಣಾನೆ 70 ಅಡಿ ಆಳದ ಕಮರಿಗೆ ಬಿದ್ದು ಸಾ*ವು
Chhattisgarh: ಮೂವರು ನಕ್ಸಲರ ಎನ್ಕೌಂಟರ್… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್
Police Exam: ಕಿವಿಯಲ್ಲಿ ಬ್ಲೂ ಟೂತ್ ಸಾಧನ ಇಟ್ಟು ಪರೀಕ್ಷೆ ಬರೆದು ಸಿಕ್ಕಿ ಬಿದ್ದ ಅಭ್ಯರ್ಥಿ
Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಲಾಠಿ ರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ
MUST WATCH
ಹೊಸ ಸೇರ್ಪಡೆ
Mukund MGM Realty: ಶೀಘ್ರದಲ್ಲೇ ಮತ್ತೆರಡು ಬ್ಯುಸಿನೆಸ್ ಸೆಂಟರ್ಗಳು ಪ್ರಾರಂಭ
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ
Tulu Film: ರೂಪೇಶ್ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್ ಸ್ಟಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.