Tulu Film: ರೂಪೇಶ್ ಶೆಟ್ರ ‘ಜೈ’ ಸಿನಿಮಾಗೆ ಬಂದ್ರು ಬಾಲಿವುಡ್ ಸೂಪರ್ ಸ್ಟಾರ್
Team Udayavani, Jan 12, 2025, 6:16 PM IST
ಮಂಗಳೂರು: ತುಳು ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟು ಹಾಕಿರುವ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ (Roopesh Shetty) ನಿರ್ದೇಶನದ ʼಜೈʼ ಚಿತ್ರ (Jai Film) ಇದೀಗ ಮತ್ತೆ ಸುದ್ದಿಯಲ್ಲಿದೆ. ಎರಡು ಹಂತದ ಚಿತ್ರೀಕರಣ ಮುಗಿಸಿರುವ ಜೈ ಚಿತ್ರಕ್ಕೆ ಇದೀಗ ಸೂಪರ್ ಸ್ಟಾರ್ ನಟರೊಬ್ಬರ ಎಂಟ್ರಿಯಾಗಿದೆ.
ಹೌದು, ಬಾಲಿವುಡ್ ಸ್ಟಾರ್ ನಟ, ದಕ್ಷಿಣ ಕನ್ನಡದ ಮೂಲದವರೇ ಆದ ಸುನೀಲ್ ಶೆಟ್ಟಿ (Suniel Shetty) ಅವರು ಮೊದಲ ಬಾರಿಗೆ ತುಳು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಸುನೀಲ್ ಶೆಟ್ಟಿ ʼಜೈʼ ಚಿತ್ರದ ಮೂಲಕ ತುಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.
ಹಲವು ಕಾಲದಿಂದ ನನಗೆ ತುಳುನಾಡಿನ ಜನರಿಗಾಗಿ ತುಳು ಸಿನಿಮಾದಲ್ಲಿ ನಟಿಸಬೇಕೆಂದು ಆಸೆಯಿತ್ತು. ಕೊನೆಗೂ ಆ ಕಾಲ ಬಂದಿದೆ. ರೂಪೇಶ್ ನಿರ್ದೇಶನದ ಜೈ ಸಿನಿಮಾದಲ್ಲಿ ನಟಿಸುತ್ತಿದ್ದೇನೆ ಎಂದು ಸುನೀಲ್ ಶೆಟ್ಟಿ ಹೇಳಿದ್ದಾರೆ.
View this post on Instagram
ʼಗಿರ್ಗಿಟ್ʼ ಮತ್ತು ʼಸರ್ಕಸ್ʼ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ʼಜೈʼ ಚಿತ್ರದ ಮೂಲಕ ತುಳು ಸಿನಿಮಾ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಆರ್‌ಎಸ್ ಸಿನಿಮಾಸ್, ಶೂಲಿನ್ ಫಿಲ್ಮ್ಸ್ ಮತ್ತು ಮುಗ್ರೋಡಿ ಪ್ರೊಡಕ್ಷನ್ಸ್ ಬ್ಯಾನರ್ ನಡಿಯಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ ಅವರು ನಿರ್ಮಾಣ ಮಾಡುತ್ತಿದ್ದು, ದೀಕ್ಷಿತ್ ಆಳ್ವ ಸಹ ನಿರ್ಮಾಪಕರಾಗಿದ್ದಾರೆ.
“ಜೈʼ ಸಿನಿಮಾದಲ್ಲಿ ರೂಪೇಶ್ ಶೆಟ್ಟಿ ಅವರೊಂದಿಗೆ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಮೊದಲಾದವರು ಅಭಿನಯಿಸುತ್ತಿದ್ದಾರೆ.
ʼಗಿರ್ಗಿಟ್ʼ, ʼಸರ್ಕಸ್ʼ ಮತ್ತು ʼಗಮ್ಜಲ್ʼನಂತಹ ಜನಪ್ರಿಯ ತುಳು ಚಲನಚಿತ್ರಗಳನ್ನು ರಚಿಸಿದ ಅದೇ ತಂಡ ಇದೀಗ ಜೈ ಚಿತ್ರದಲ್ಲಿ ತೊಡಗಿದೆ. ರೂಪೇಶ್ ಶೆಟ್ಟಿ ನಿರ್ದೇಶಕರಾಗಿದ್ದು, ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಲಾಯ್ ವ್ಯಾಲೆಂಟೈನ್ ಸಲ್ಡಾನಾ ಸಂಗೀತವಿದ್ದು, ವಿನುತ್ ಕೆ ಕ್ಯಾಮರಾ ಕೈಚಳಕವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tulu Film: ʼಮಿಡಲ್ ಕ್ಲಾಸ್ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್’
MUST WATCH
ಹೊಸ ಸೇರ್ಪಡೆ
Bengaluru: ಏಳನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‌ಗೆ ಚಾಲನೆ
Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು
Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ
ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.