Team India: ಬಿಸಿಸಿಐ ಬಳಿ ಕೆಲವು ತಿಂಗಳ ಅವಕಾಶ ಕೇಳಿದ ರೋಹಿತ್: ಸಭೆಯಲ್ಲಿ ಏನಾಯ್ತು?
Team Udayavani, Jan 12, 2025, 5:53 PM IST
ಮುಂಬೈ: ಆಸ್ಟ್ರೇಲಿಯಾ ಪ್ರವಾಸದಿಂದ ಹಿಂದೆ ಬಂದಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ಗೌತಮ್ ಗಂಭೀರ್ ಅವರು ಬಿಸಿಸಿಐ ಸಭೆಯಲ್ಲಿ ಭಾಗಿಯಾಗಿದ್ದಾರೆ. ಶನಿವಾರ (ಜ.11) ನಡೆದ ಪರಿಶೀಲನಾ ಸಭೆಯಲ್ಲಿ ಬಿಸಿಸಿಐ ಅಧಿಕಾರಿಗಳು ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಜೊತೆ ರೋಹಿತ್ ಮತ್ತು ಗಂಭೀರ್ ಚರ್ಚೆ ಮಾಡಿದ್ದಾರೆ.
ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು ನಿರಾಶಾದಾಯಕ ಪ್ರದರ್ಶನ ನೀಡಿದೆ. ಸರಣಿಯನ್ನು 3-1 ಅಂತರದಿಂದ ಕಳೆದುಕೊಂಡಿದೆ. ಈ ಸೋಲಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪ್ರವೇಶಿಸುವ ಭಾರತದ ಕನಸು ಕೂಡಾ ಭಗ್ನವಾಗಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿಯ ಸಂದರ್ಭದಲ್ಲಿ ರೋಹಿತ್ ಅವರ ದೀರ್ಘಾವಧಿಯ ಟೆಸ್ಟ್ ಭವಿಷ್ಯದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಸಿಡ್ನಿಯಲ್ಲಿ ನಡೆದ ಅಂತಿಮ ಪಂದ್ಯಕ್ಕೆ ರೋಹಿತ್ ಸ್ವತಃ ಆಡದಿರಲು ನಿರ್ಧರಿಸಿದ್ದರು.
ಬಿಸಿಸಿಐ ಸಭೆಯಲ್ಲಿ, ರೋಹಿತ್ ಇನ್ನೂ ಕೆಲವು ‘ತಿಂಗಳು’ ತಂಡದ ನಾಯಕನಾಗಿ ಉಳಿಯುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಬಿಸಿಸಿಐ ಜೊತೆಗಿನ ಸಭೆಯಲ್ಲಿ ಅಗರ್ಕರ್ ಮತ್ತು ಗಂಭೀರ್ ಕೂಡ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ರೋಹಿತ್ ಅವರು ಇನ್ನೂ ಕೆಲವು ತಿಂಗಳು ತಂಡದ ನಾಯಕನಾಗಿ ಉಳಿಯಲು ಬಯಸುವುದಾಗಿ ಮಂಡಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಅದರ ಮಧ್ಯೆ, ಹೊಸ ನಾಯಕನ ಹುಡುಕಾಟವನ್ನು ಮುಂದುವರಿಸುವಂತೆ ರೋಹಿತ್ ಬಿಸಿಸಿಐಗೆ ಸೂಚಿಸಿದ್ದಾರೆ.
ದೈನಿಕ್ ಜಾಗರಣ್ ವರದಿಯ ಪ್ರಕಾರ, ರೋಹಿತ್ ಅವರ ದೀರ್ಘಾವಧಿಯ ಉತ್ತರಾಧಿಕಾರಿಯಾಗಿ ಬುಮ್ರಾ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಆದರೆ ಸಭೆಯಲ್ಲಿ ಅವರ ಬಗ್ಗೆ ಕೆಲವರು ಸಂಶಯ ವ್ಯಕ್ತಪಡಿಸಿದ್ದಾರೆ. ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ತಂಡವನ್ನು ಮುನ್ನಡೆಸುವ ಅವರ ಸಾಮರ್ಥ್ಯದ ಬಗ್ಗೆ ವಿಶೇಷವಾಗಿ ಸಂದೇಹವೆದ್ದಿದೆ ಎಂದು ವರದಿಯಾಗಿದೆ.
ಬುಮ್ರಾ ಆಸ್ಟ್ರೇಲಿಯಾ ಪ್ರವಾಸದ ಐದು ಟೆಸ್ಟ್ ಗಳಲ್ಲಿಯೂ ಆಡಿದ್ದರು. ಎರಡು ಟೆಸ್ಟ್‌ಗಳಲ್ಲಿ ತಂಡವನ್ನು ಮುನ್ನಡೆಸಿದರು. ಆದರೆ, ಸಿಡ್ನಿಯಲ್ಲಿ ನಡೆದ ಅಂತಿಮ ಟೆಸ್ಟ್‌ನಲ್ಲಿ ಅವರು ಬೆನ್ನುನೋವಿಗೆ ಒಳಗಾದರು. ಎರಡನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ಕೂಡ ಮಾಡಲಿಲ್ಲ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.