Bengaluru: ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು!; ಭುಗಿಲೆದ್ದ ಆಕ್ರೋಶ

ರಕ್ತದ ಮಡುವಿನಲ್ಲಿದ್ದ ಗೋವುಗಳಿಗೆ ಚಿಕಿತ್ಸೆ, ಪೊಲೀಸರ ವರದಿ ಬಂದ ಬಳಿಕ ಕ್ರಮವೆಂದ ಗೃಹ ಸಚಿವ ಪರಮೇಶ್ವರ್‌

Team Udayavani, Jan 12, 2025, 6:17 PM IST

Chamarajpete–cow

ಬೆಂಗಳೂರು: ಮನುಷ್ಯರಿಗೆ ಹಾಲು ನೀಡುವ ಕಾಮಧೇನು ಗೋವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದಿದೆ.

ಕರ್ಣ ಎಂಬುವವರಿಗೆ ಸೇರಿದ ಮೂರು ಹಸುಗಳ ಕೆಚ್ಚಲು ಕೊಯ್ದ ಕಿರಾತಕರು ರಕ್ತದ ಕೋಡಿಯನ್ನೇ ಹರಿಸಿ ಪರಾರಿಯಾಗಿದ್ದು, ರವಿವಾರ ಮುಂಜಾನೆ (ಜ.12) ಘಟನೆ ಬೆಳಕಿಗೆ ಬಂದಿದೆ. ಸದ್ಯ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಒಟ್ಟು 8 ಹಸುಗಳ ಸಾಕಿರುವ ಕರ್ಣ ಈ ಪೈಕಿ ಮೂರರಿಂದ ನಾಲ್ಕು ಹಸುಗಳು ಮನೆಯಿಂದ ಕೆಲವೇ ದೂರದಲ್ಲಿರುವ ರಸ್ತೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ತಡರಾತ್ರಿ ಕಿಡಿಗೇಡಿಗಳು ಕೊಯ್ದಿದ್ದಾರೆ.

ಈ ಬಗ್ಗೆ  ಕಾಟನ್ ಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದಿರುವ ಪೊಲೀಸರು, ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸಿದ್ದಾರೆ.

ಭುಗಿಲೆದ್ದ ಆಕ್ರೋಶ, ಸ್ಥಳದಲ್ಲಿ ಬಿಗುವಿನ ವಾತಾವರಣ
ಮೂಕ ಪ್ರಾಣಿಗಳ ಕೆಚ್ಚಲು ಕೊಯ್ದ ಘಟನೆ ವಿರುದ್ಧ ಸ್ಥಳೀಯರು ಆಕ್ರೋಶಗೊಂಡಿದ್ದು, ಸ್ಥಳಕ್ಕೆ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್​ ಭೇಟಿ ನೀಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ 20ಕ್ಕೂ ಹೆಚ್ಚು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ರಮೇಶ್ ದೌಡಾಯಿಸಿದ್ದಾರೆ.

ಕಿಡಿಗೇಡಿಗಳ ಬಂಧಿಸುವರೆಗೆ ಹೋರಾಟ ನಿಲ್ಲಲ್ಲ:
ಘಟನಾ ಸ್ಥಳಕ್ಕೆ ಸಂಸದ ಪಿ.ಸಿ. ಮೋಹನ್  ಭೇಟಿ ನೀಡಿ ಮಾಹಿತಿ ಪಡೆದು ಮಾತುಕತೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಇದೊಂದು ಅಮಾನವೀಯ ಕೃತ್ಯ. ಗೋವುಗಳನ್ನು ದೇವರು ಎಂದು ಪೂಜೆ ಮಾಡುತ್ತೇವೆ. ಆದರೆ, ಕಿಡಿಗೇಡಿಗಳು ಗೋವುಗಳ ಕೆಚ್ಚಲು ಕೊಯ್ದು ದುಷ್ಕೃತ್ಯ ಎಸಗಿದ್ದಾರೆ. ಕೂಡಲೇ ಕಿಡಿಗೇಡಿಗಳ ಬಂಧನವಾಗಬೇಕು. ಈ ಸರ್ಕಾರ ಬಂದ ಮೇಲೆ ಇಂತಹ ಕೃತ್ಯಗಳು ಹೆಚ್ಚು ಆಗುತ್ತಿದೆ. ಕಿಡಿಗೇಡಿಗಳ ಬಂಧನವಾಗುವವರೆಗೆ ಹೋರಾಟ ನಿಲುವುದಿಲ್ಲ ಎಂದು ಹೇಳಿದ್ದಾರೆ.

ಪ್ರತಿಭಟನೆಗೆ ಹಸು ಬಳಸಿದ್ದೇ ಕಾರಣವೇ?

ಚಾಮರಾಜಪೇಟೆಯ ಪಶುವೈದ್ಯಕೀಯ ಆಸ್ಪತ್ರೆಯನ್ನು ವಕ್ಫ್ ಮಂಡಳಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಇತ್ತೀಚೆಗೆ ಪಶುವೈದ್ಯಕೀಯ ಆಸ್ಪತ್ರೆಯ ಉಳಿವಿಗಾಗಿ ಸ್ಥಳೀಯರು ಹೋರಾಟ ನಡೆಸಿದ್ದರು. ಈ ವೇಳೆ ಕರ್ಣ ಅವರ ಈ ಹಸುಗಳನ್ನೂ ಪ್ರತಿಭಟನೆಗೆ ಕರೆತರಲಾಗಿತ್ತು. ಇದಕ್ಕಾಗಿ ದುರುಳರು ಈ ಕೃತ್ಯ ಎಸಗಿರಬಹುದು ಎಂದು ಸಂಶಯ ವ್ಯಕ್ತವಾಗಿದೆ.

ನೋವು ತೋಡಿಕೊಂಡ ಹಸುಗಳ ಮಾಲೀಕ
ಘಟನೆ ಬಗ್ಗೆ ಹಸುಗಳ ಮಾಲೀಕ ಕರ್ಣ ಪ್ರತಿಕ್ರಿಯಿಸಿ, ನಮ್ಮಲ್ಲಿ 8 ಹಸುಗಳಿವೆ. ರಸ್ತೆಯಲ್ಲೇ ಅವುಗಳನ್ನು ಕಟ್ಟುತ್ತಿದ್ದೆವು. ರಾತ್ರಿ ಏನಾಗಿದೆಯೋ ಗೊತ್ತಿಲ್ಲ. ಬೆಳಗ್ಗೆ ಹಾಲು ಕರೆಯಲು ಬಂದಾಗ ರಕ್ತ ನೋಡಿ ಹೆದರಿದೆ. ಹತ್ತಿರ ಹೋಗಿ ನೋಡಿದರೆ, ಅಲ್ಲೊಂದು ತುಂಡು ಕೆಚ್ಚಲು ಬಿದ್ದಿತ್ತು. ಕತ್ತರಿಸಿದ ಇನ್ನೆರಡು ತುಂಡುಗಳು ಅಲ್ಲಿರಲಿಲ್ಲ. ಬಹುಶಃ ನಾಯಿ ಕಚ್ಚಿಕೊಂಡು ಹೋಗಿರಬಹುದು ಎಂದುಕೊಂಡೆ. ಇನ್ನೊಂದು ಹಸುವಿನ ಕೆಚ್ಚಲು ಅರ್ಧ ಕತ್ತರಿಸಲ್ಪಟ್ಟು ನೇತಾಡುತ್ತಿತ್ತು. ಯಾಕಾಗಿದೆ, ಏನಾಗಿದೆ ಎಂಬುದು ಒಂದೂ ಗೊತ್ತಿಲ್ಲ. ಕೆಚ್ಚಲು ಕತ್ತರಿಸಿದಾಗ ಹಸುಗಳು ಕೂಗಿದ್ದು ಗೊತ್ತಾಗಿಲ್ಲ. ಆಸ್ಪತ್ರೆಯಲ್ಲಿ ಸದ್ಯಕ್ಕೆ ಚಿಕಿತ್ಸೆ ಕೊಟ್ಟಿದ್ದಾರೆ. ಕೂಡಲೇ ಕಿಡಿಗೇಡಿಗಳ ಬಂಧಿಸಿಬೇಕು. ಇಲ್ಲ ನಮ್ಮ ಕೈಯಲ್ಲಿ ಕೊಡಿ ನಾವು ಬುದ್ದಿ ಕಲಿಸುತ್ತೇವೆ. ಹಸುವಿನ ಕಾಲಿಗೆ ಮಚ್ಚಿನಲ್ಲಿ ಹೊಡೆದಿದ್ದಾರೆ ಎಂದು ಹಸುವಿನ ಮಾಲಕ ಕರ್ಣ ಅಳಲು ತೋಡಿಕೊಂಡಿದ್ದಾರೆ.

ವರದಿ ಬಳಿಕ ಕ್ರಮ: ಗೃಹ ಸಚಿವ 
ಈ ನಡುವೆ ಘಟನೆಯ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಗೃಹ ಸಚಿವ ಜಿ.ಪರಮೇಶ್ವರ್  ಪ್ರತಿಕ್ರಿಯೆ ನೀಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಪೊಲೀಸರಿಂದ ವರದಿ ಕೇಳಲಾಗಿದ್ದು ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

BJP-Cow-Assult

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

SABARIMALE

ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ

Udupi: ದಿಲ್ಲಿಯ ಗಣರಾಜ್ಯೋತ್ಸವಕ್ಕೆ 80 ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷರು

Udupi: ದಿಲ್ಲಿಯ ಗಣರಾಜ್ಯೋತ್ಸವಕ್ಕೆ 80 ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷರು

Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ

Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ

Manipal: ಧೂಮಪಾನ, ಮದ್ಯಪಾನ ಸ್ವಾಸ್ಥ್ಯದ ಶತ್ರುಗಳು: ಡಾ| ಮೋಹನ ರಾವ್‌

Manipal: ಧೂಮಪಾನ, ಮದ್ಯಪಾನ ಸ್ವಾಸ್ಥ್ಯದ ಶತ್ರುಗಳು: ಡಾ| ಮೋಹನ ರಾವ್‌

ಬೆಳ್ಳಾರೆ: ಯುವಕನ ಮೇಲೆ ಹಲ್ಲೆ; ಆರೋಪ

Sullia ಬೆಳ್ಳಾರೆ: ಯುವಕನ ಮೇಲೆ ಹಲ್ಲೆ; ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-Cow-Assult

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು

Cha-CM-zameer

Chamarajapete: ಹಸುಗಳ ಕೆಚ್ಚಲು ಕೊಯ್ದವರ ವಿರುದ್ಧ ಕಠಿನ ಕ್ರಮ: ಸಿಎಂ ಸಿದ್ದರಾಮಯ್ಯ

SS-Mallikarjun1

CM Post: ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌

Ashok-Vijayendra

ಹಸುವಿನ ಕೆಚ್ಚಲು ಕೊಯ್ದು ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ: ಆರ್‌.ಅಶೋಕ್‌

CT-Ravi

ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

BJP-Cow-Assult

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

SABARIMALE

ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ

Udupi: ದಿಲ್ಲಿಯ ಗಣರಾಜ್ಯೋತ್ಸವಕ್ಕೆ 80 ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷರು

Udupi: ದಿಲ್ಲಿಯ ಗಣರಾಜ್ಯೋತ್ಸವಕ್ಕೆ 80 ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷರು

Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ

Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.