Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
Team Udayavani, Jan 12, 2025, 7:04 PM IST
ಕಾರ್ಕಳ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವನ್ಯಜೀವಿ ಭೇಟೆಗೆ ಮುಂದಾಗಿದ್ದ ಆರೋಪಿಗಳನ್ನು ತಡೆಯುವಲ್ಲಿ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಕಾರ್ಕಳ ತಾಲೂಕಿನ ಕುದುರೆಮುಖ ವನ್ಯಜೀವಿ ವಿಭಾಗದ ಮಾಳ ಗ್ರಾಮದ ಮುಳ್ಳೂರು ಅರಣ್ಯ ತನಿಖಾ ಠಾಣೆ ವ್ಯಾಪ್ತಿಯಲ್ಲಿ ಜ.9 ರಂದು ಘಟನೆ ಸಂಭವಿಸಿದ್ದು, ಅಂದು ರಾತ್ರಿ ಐದಾರು ಮಂದಿ ಕಾರಿನಲ್ಲಿ ಬಂದೂಕು ಮತ್ತು ಕೊಟ್ರೇಟ್ಟ್ನೊಂದಿಗೆ ಬೇಟೆಗೆ ಹೊಂಚು ಹಾಕುತ್ತಿದ್ದು, ಈ ವೇಳೆ ಕಾರ್ಕಳ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ. ಮಂಗಳೂರು ಕಾಟಿಪಳ್ಳ ನಿವಾಸಿ ಪಾಸ್ವಿಮ್ ಆಲಿ (35) ಎಂಬಾತನನ್ನು ಬಂಧಿಸಲಾಗಿದ್ದು, ಉಳಿದವರು ಕಾರು ಮತ್ತು ಬಂದೂಕಿನೊಂದಿಗೆ ಪರಾರಿಯಾಗಿದ್ದಾರೆ. ಕುದುರೆಮುಖ ವನ್ಯಜೀವಿ ವಿಭಾಗದ ಡಿಎಫ್ಒ ಶಿವರಾಮ ಬಾಬು ನಿರ್ದೇಶನದಂತೆ, ಎಸಿಎಫ್ ಸತೀಶ್ ಎನ್. ಅವರ ಮಾರ್ಗದರ್ಶನದಲ್ಲಿ ಕಾರ್ಕಳ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಶಶಿಧರ ಗೌಡ ಪಾಟೀಲ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಉಪ ವಲಯ ಅರಣ್ಯಾಧಿಕಾರಿ ರಾಜು ಎಲ್. ಜೆ, ಅಭಿಲಾಷ್ ಎಸ್. ಬಿ., ಗಸ್ತು ಅರಣ್ಯಪಾಲಕರಾದ ಪಕೀರಪ್ಪ ಗೋರನಗೌಡ್ರು, ಯಮನೂರ ಅರಣ್ಯ ವೀಕ್ಷಕರಾದ ನಿತಿನ್, ಉದಯ್ ,ಅಜಿತ್ ,ಸುಜಿತ್, ನಿತಿನ್ ಹೆಗ್ಡೆ ಕಾರ್ಯಾಚರಣೆಯಲ್ಲಿದ್ದರು.
ಕಾಡುಕೋಣ ಕೊಂದಿದ್ದ ಆರೋಪಿ
ಬಂಧಿತ ಪಾಸ್ವಿಮ್ ಆಲಿ ಶಂಕರನಾರಾಯಣ ವಲಯ ವ್ಯಾಪ್ತಿಯಲ್ಲಿ ಎರಡು ಕಾಡುಕೋಣಗಳ ಬೇಟೆಯಾಡಿದ ಪ್ರಕರಣದ ಆರೋಪಿಯಾಗಿದ್ದಾನೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದು, ವನ್ಯಜೀವಿ ಹತ್ಯೆಗೆ ಯತ್ನ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲಿಸಿ ಆರೋಪಿಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಿ, ಹಿರಿಯಡಕ ಜೈಲಿನಲ್ಲಿ ಬಂಧನದಲ್ಲಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ, ಮಂದಿರಗಳಲ್ಲಿ ಪ್ರಾರ್ಥಿಸಲು ಪೇಜಾವರ ಶ್ರೀ ಕರೆ
Manipal: ಮಣ್ಣಪಳ್ಳ ಸ್ವಚ್ಛತೆಗಿಳಿದ ಸಾರ್ವಜನಿಕರು!
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ
Malpe: ಕುಸಿದು ಬಿದ್ದು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.