ಹಸುವಿನ ಕೆಚ್ಚಲು ಕೊಯ್ದು ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ: ಆರ್.ಅಶೋಕ್
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗೋ ಸುರಕ್ಷತೆ ಬಗ್ಗೆ ತಾತ್ಸಾರ ಧೋರಣೆ: ಬಿ.ವೈ.ವಿಜಯೇಂದ್ರ
Team Udayavani, Jan 12, 2025, 8:49 PM IST
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆಗೆ ಸಂಬಂಧಿಸಿ ವಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ ಘಟನೆ ಅತ್ಯಂತ ಖಂಡನೀಯವಾಗಿದ್ದು, ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ರಾಜ್ಯ ಸರಕಾರ ಈ ಕೂಡಲೇ ಬಂಧಿಸಬೇಕು. ಗೋವು ಭಾರತೀಯರಿಗೆ ತಾಯಿ ಸಮಾನ. ಅದರಲ್ಲೂ ಸಂಕ್ರಾಂತಿ ಹಬ್ಬದಲ್ಲಿ ಗೋವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುವಿನ ಕೆಚ್ಚಲು ಕೊಯ್ದು ಹಾಕುವ ಮೂಲಕ ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಮ್ಮ ರಾಜ್ಯ ಈವರೆಗೂ ಕಂಡಿರರಿಲ್ಲ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.
ಹಸುಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕೆ ಈ ಕೃತ್ಯ:
ಚಾಮರಾಜಪೇಟೆಯ ಸ್ಥಳೀಯ ಪಶು ಆಸ್ಪತ್ರೆಯ ಉಳಿವಿಗಾಗಿ ಆ ಜಾಗ ವಕ್ಫ್‌ಗೆ ಸೇರಿಸಲು ಹೊರಟಿದ್ದರ ವಿರುದ್ಧ ಹಸುವಿನ ಮಾಲೀಕರು ಹಾಗೂ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹಸುಗಳನ್ನೇ ಗುರಿ ಮಾಡಿ ಈ ಕೃತ್ಯ ಎಸಗಿದ್ದಾರೆ ಎಂದರೆ ಇದು ಯಾರ ಕೃತ್ಯ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು ಎಂಬುದಕ್ಕೆ ಕಾಲು ಕಟ್ ಮಾಡಿದ್ದಾರೆ. ಕೆಚ್ಚಲಿಗೆ ಹಾನಿ ಮಾಡಿದ್ದಾರೆ. ಕಾಂಗ್ರೆಸ್ ಮಾತೆತ್ತಿದರೆ ದೇವಸ್ಥಾನ, ಹೋಮ ಮಾಡುತ್ತಾರೆ. ಇದು ವೋಟ್‌ಗಾಗಿ ಮಾಡುತ್ತಿರುವುದು ಎಂದು ಕಿಡಿಕಾರಿದರು.
ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ. ಚಾಮರಾಜಪೇಟೆಯಲ್ಲಿ ನಡೆದಿರುವ ಈ ಅಮಾನುಷ ಘಟನೆಯನ್ನ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ತುಷ್ಟೀಕರಣ ರಾಜಕಾರಣಕ್ಕಾಗಿ ಸಮಾಜದ ಶಾಂತಿ, ಸುವ್ಯವಸ್ಥೆಯನ್ನು ಬಲಿ ಕೊಡದೆ ಮತಾಂಧ ಶಕ್ತಿಗಳ ಹೆಡೆಮುರಿ ಕಟ್ಟುವ ಕೆಲಸ ಮಾಡಬೇಕು ಎಂದು ಹೇಳಿದರು.
ಜಿಹಾದಿ ಮನಸ್ಥಿತಿಯ ದುರುಳರು ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ, ನಾವೆಂದೂ ಕಂಡು ಕೇಳರಿಯದ ಘಟನೆ ಇದಾಗಿದೆ. ಮಚ್ಚುಗಳನ್ನು ಉಪಯೋಗಿಸಿ ಹಸುಗಳ ಕೆಚ್ಚಲು ಕತ್ತರಿಸಿದ್ದಾರೆ.
ಈ ಮೂಲಕ ಸಂಕ್ರಾಂತಿ ಹಬ್ಬದ ವೇಳೆ ಕಾಂಗ್ರೆಸ್ ಸರ್ಕಾರ ಹಿಂದೂಗಳಿಗೆ ಯಾವ ಸಂದೇಶ ರವಾನಿಸುತ್ತಿದೆ? ಹಿಂದುಗಳನ್ನು ಎರಡನೇ ದರ್ಜೆ ನಾಗರಿಕರನ್ನಾಗಿ… pic.twitter.com/1EjlRsmywK
— BJP Karnataka (@BJP4Karnataka) January 12, 2025
ಕಾಂಗ್ರೆಸ್ ಸರಕಾರದಿಂದ ಗೋ ಸುರಕ್ಷತೆಯ ಬಗ್ಗೆ ತಾತ್ಸಾರ ಧೋರಣೆ: ವಿಜಯೇಂದ್ರ
ಚಾಮರಾಜಪೇಟೆಯಲ್ಲಿ ರಾಕ್ಷಸಿ ಮನಸ್ಥಿತಿಯ ಪಾಪಿಗಳು ನಿರ್ದಯವಾಗಿ ಹಸುಗಳ ಕೆಚ್ಚಲನ್ನು ಭೀಕರವಾಗಿ ಕತ್ತರಿಸಿರುವುದು ಅತ್ಯಂತ ಹೇಯ, ಅಮಾನುಷ ಹಾಗೂ ಕ್ರೂರ ಕೃತ್ಯವಾಗಿದ್ದು, ಇದನ್ನು ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಮಾಧ್ಯಮ ಪ್ರಕಟಣೆ ನೀಡಿ ಗೋವು’ ಎಂದರೆ ಸಕಲ ಜೀವರಾಶಿಗಳಿಗೂ ಮಾತೆ. ಹೀಗಾಗಿ ಹಿಂದೂಗಳು ಗೋವನ್ನು ಮಾತೃದೇವತೆಯ ಸ್ಥಾನ ನೀಡಿ ಕಾಮಧೇನು ಎಂದು ಪೂಜಿಸುತ್ತಾರೆ. ಕರ್ನಾಟಕದ ಸಂಸ್ಕೃತಿಯಲ್ಲಿ ಪುಣ್ಯಕೋಟಿಯ ಕಥೆಯ ಹಾಡು ಜಗತ್ತಿನ ಮೂಲೆ ಮೂಲೆಗೂ ಪಸರಿಸಿದೆ. ನಾಡಿದ್ದು ಮಕರ ಸಂಕ್ರಾಂತಿಯಂದು ಗೋ ಮಾತೆಗೆ ಪೂಜೆ ಸಲ್ಲಿಸುವ ಪಾವಿತ್ರ್ಯತೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗೋ ಸುರಕ್ಷತೆಯ ಬಗ್ಗೆ ತಾತ್ಸಾರ ಧೋರಣೆ ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಾತೃ ಕೊರತೆ ನೀಗಿಸಲು ಕ್ಷೀರಧಾರೆ ಹರಿಸುವ ಕೆಚ್ಚಲನ್ನೇ ಕತ್ತರಿಸುವಷ್ಟು ಪರಮ ನೀಚ ಕೃತ್ಯಕ್ಕೆ ಇಳಿದಿರುವ ಘಟನೆ ಕರ್ನಾಟಕದ ರಾಜಧಾನಿಯಲ್ಲೇ ನಡೆಯುತ್ತಿದೆ ಎಂದರೆ ಇದರ ಹಿಂದಿರುವ ಕುಮ್ಮಕ್ಕಿನ ಶಕ್ತಿ ಯಾವುದು ಎನ್ನುವುದು ಊಹಿಸಿಕೊಳ್ಳದಷ್ಟು ಕರುನಾಡಿನ ಜನತೆ ಮುಗ್ಧರಲ್ಲ, ಕೃತ್ಯ ನಡೆದಿರುವ ಕ್ಷೇತ್ರ ಯಾರ ಮುಷ್ಠಿಯಲ್ಲಿದೆ, ಈ ರಾಜ್ಯ ಆಳುತ್ತಿರುವವರ ಮನಸ್ಥಿತಿ ಯಾರ ಪರವಿದೆ ಎನ್ನುವುದು ಎಲ್ಲರಿಗೂ ತಿಳಿದ ವಿಚಾರವೇ. ಜನರ ತಾಳ್ಮೆಯ ಕಟ್ಟೆ ಒಡೆಯುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಎಚ್ಚೆತ್ತುಕೊಂಡು ಇಂತಹ ಕೃತ್ಯಗಳ ಹಿಂದಿರುವ ಶಕ್ತಿಯನ್ನು ಬಗ್ಗು ಬಡಿಯದಿದ್ದರೆ ಇದಕ್ಕೆ ಕುಮ್ಮಕ್ಕು ನೀಡುತ್ತಿರುವವರು ಸರ್ಕಾರದೊಳಗಿನ ಶಕ್ತಿಗಳು ಎಂಬ ತೀರ್ಮಾನಕ್ಕೆ ಜನ ಬರಬೇಕಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು
Chamarajapete: ಹಸುಗಳ ಕೆಚ್ಚಲು ಕೊಯ್ದವರ ವಿರುದ್ಧ ಕಠಿನ ಕ್ರಮ: ಸಿಎಂ ಸಿದ್ದರಾಮಯ್ಯ
CM Post: ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
MUST WATCH
ಹೊಸ ಸೇರ್ಪಡೆ
Bengaluru: ಏಳನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್‌ಗೆ ಚಾಲನೆ
Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್
ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು
Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ
ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.