ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು
ಕೆಚ್ಚಲು ಕೊಯ್ದ ನೀಚರ ಒದ್ದು ಒಳಗಡೆ ಹಾಕದಿದ್ದರೇ ಶ್ರೀರಾಮ ಸೇನೆಯಿಂದ ರಾಜ್ಯಾದ್ಯಂತ ಹೋರಾಟ: ಪ್ರಮೋದ್ ಮುತಾಲಿಕ್ ಎಚ್ಚರಿಕೆ
Team Udayavani, Jan 13, 2025, 2:09 AM IST
ಬೆಂಗಳೂರು: ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಹಿಂದೂ ಸಂಘಟನೆಗಳು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ವಿಪಕ್ಷ ನಾಯಕರು, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸರಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಹಸುಗಳ ಕೆಚ್ಚಲು ಕೊಯ್ದ ಜೆಹಾದಿಗಳ ವಿರುದ್ಧ ಸರಕಾರ ಕಠಿನ ಕ್ರಮ ವಹಿಸದಿದ್ದರೆ ರಾಜ್ಯಾದ್ಯಂತ “ಕರಾಳ ಸಂಕ್ರಾಂತಿ’ ಆಚರಿಸುವ ಎಚ್ಚರಿಕೆಯನ್ನೂ ಬಿಜೆಪಿ ನೀಡಿದೆ.
ರಾಕ್ಷಸಿ ಕೃತ್ಯ: ಕೇಂದ್ರ ಸಚಿವ ಕುಮಾರಸ್ವಾಮಿ
ಹಸುಗಳ ಕೆಚ್ಚಲು ಕೊಯ್ದ ಘಟನೆ ಕುರಿತು ವರದಿ ನೋಡಿ ತೀವ್ರ ಆಘಾತವಾಗಿದೆ. ಇದು ರಾಕ್ಷಸಿ ಕೃತ್ಯ. ಕಾಂಗ್ರೆಸ್ ಆಡಳಿತ ಇವತ್ತು ಎಲ್ಲಿಗೆ ಬಂದಿದೆ? ಎಂಬುದಕ್ಕೆ ಇದುವೇ ಸಾಕ್ಷಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಇಲ್ಲಿಯವರೆಗೆ ಮನುಷ್ಯರನ್ನು ಕೊಲ್ಲುವುದನ್ನು ನೋಡಿದ್ದೇವೆ. ಹಸುವನ್ನು ನಾವು ಕಾಮಧೇನು, ಮಹಾಲಕ್ಷ್ಮೀ ಎಂದು ಪೂಜಿಸುತ್ತಿದ್ದೇವೆ. ಅಂಥ ಕಾಮಧೇನುವಿನ ಕೆಚ್ಚಲು ಕೊಯ್ಯುವ ಹೇಯ ಕೃತ್ಯ ಮಾಡಿರುವ ಕೆಟ್ಟ ಮನಃಸ್ಥಿತಿಗೆ ಏನೆನ್ನಬೇಕು?. ಗೃಹ ಸಚಿವ ಪರಮೇಶ್ವರ್ ಅವರು ಈ ನಿಟ್ಟಿನಲ್ಲಿ ಕಠಿನ ಕ್ರಮ ವಹಿಸಬೇಕು ಎಂದರು.
ಕಾನೂನು ಸುವ್ಯವಸ್ಥೆಗೆ ಕನ್ನಡಿ: ಬಿಎಸ್‌ವೈ
ಈ ಅನಾಗರಿಕ ಕೃತ್ಯ ಖಂಡನೀಯ ಮಾತ್ರವಲ್ಲ, ನೀಚತನದ ಪರಮಾವಧಿ. ಗೋಮಾತೆಯನ್ನು ಪೂಜಿಸುವ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆಯುಂಟಾಗುವುದೆಂದು ಗೊತ್ತಿದ್ದರೂ ದುರುಳರು ಇಂತಹ ದುಷ್ಕೃತ್ಯ ನಡೆಸುತ್ತಾರೆ ಎಂದರೆ ಅದು ರಾಜ್ಯದ ಕಾನೂನು ಸುವ್ಯವಸ್ಥೆಗೆ ಕನ್ನಡಿ ಹಿಡಿದಿದೆ ಎಂದೇ ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟೀಕಿಸಿದರು.
ಗೋವುಗಳಿಗೂ ಕೂಡ ಸುರಕ್ಷತೆ ಇಲ್ಲ: ಯತ್ನಾಳ್
ಮತಾಂಧರು ಹಸುವಿನ ಕೆಚ್ಚಲನ್ನು ಕೊಯ್ಯುವ ಕೆಲಸ ಮಾಡಿದ್ದಾರೆ. ಅವರಲ್ಲಿ ಎಷ್ಟು ಅಸಹಿಷ್ಣುತೆ ಇದೆ ಎಂದು ಗೊತ್ತಾಗುತ್ತದೆ. ಗೋವಿನ ಮೇಲೆ ಸಿಟ್ಟು ತೀರಿಸಿಕೊಳ್ಳುವ ಮಟ್ಟಿಗೆ ಹೋಗಿದ್ದಾರೆ. ಮೊದಲೇ ಹಿಂದೂಗಳಿಗೆ ಸುರಕ್ಷತೆ ಇಲ್ಲ. ಈಗ ಗೋವುಗಳಿಗೂ ಕೂಡ ಸುರಕ್ಷತೆ ಇಲ್ಲದಂತಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ನಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಬೇಕು: ಶಾಸಕ ಸುನಿಲ್
ಈ ಅನಾಗರಿಕ ಕ್ರೌರ್ಯ ಮೆರೆದಿರುವ ಘಟನೆ ತೀವ್ರ ವೇದನೆ ಸೃಷ್ಟಿಸಿದೆ. ಗಾವೋ ವಿಶ್ವಸ್ಯ ಮಾತರಃ ಎಂದು ನಂಬಿದ ನಾಡು ನಮ್ಮದು. ಅಂಥ ತಾಯಿಯ ಕೆಚ್ಚಲನ್ನೇ ಕತ್ತರಿಸುವಂಥ ವಿಕೃತ ಸ್ಥಿತಿಗೆ ಸಮಾಜ ಜಾರಿದೆ ಎಂದರೆ ಎಲ್ಲರೂ ನಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಬೇಕು. ಆರೋಪಿಗಳು ಯಾರ ಬಾಂಧವರೇ ಆದರೂ ಕ್ರಮ ಕೈಗೊಳ್ಳಬೇಕು ಎಂದು ಕಾರ್ಕಳ ಕ್ಷೇತ್ರ ಶಾಸಕ ವಿ. ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.
ಸಚಿವ ಜಮೀರ್ಗೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವುದು ಅತ್ಯಂತ ನೀಚ ಕೃತ್ಯ. ಇದು ಇಸ್ಲಾಮಿಕ್ ಶಕ್ತಿ ಹಾಗೂ ರಾಕ್ಷಸಿ ಮಾನಸಿಕತೆಯ ಪ್ರದರ್ಶನ. ಜಮೀರ್ ಅಹ್ಮದ್ ಇದು ನಿಮ್ಮ ಕ್ಷೇತ್ರದಲ್ಲಿ ಆಗಿದೆ. ಇದನ್ನು ತಾವು ಗಂಭೀರವಾಗಿ ತೆಗೆದುಕೊಳ್ಳಬೇಕು. ಕೆಚ್ಚಲು ಕೊಯ್ದ ನೀಚರ ಒದ್ದು ಒಳಗಡೆ ಹಾಕದಿದ್ದರೇ ಶ್ರೀರಾಮ ಸೇನೆಯಿಂದ ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೀಡಿದ್ದಾರೆ.
ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಹಸು ಹಿಂದೂಗಳಿಗೆ ಅತ್ಯಂತ ಪೂಜ್ಯ ಪ್ರಾಣಿ. ಅದು ಬರೀ ಪ್ರಾಣಿ ಅಲ್ಲಾ, ಅದು ನಮಗೆ ಅನ್ನ ಹಾಕುತ್ತೆ, ಗೊಬ್ಬರ ಕೊಡುತ್ತೆ, ಔಷಧಿ ಕೊಡುತ್ತದೆ. ರೈತರ ಬೆನ್ನೆಲುಬು ಅದು. ಅದರ ಕೆಚ್ಚಲು ಕೊಯ್ದ ನೀಚರನ್ನು ಒದ್ದು ಒಳಗಡೆ ಹಾಕದಿದ್ದರೇ ಶ್ರೀರಾಮ ಸೇನೆಯಿಂದ ಜಮೀರ್ ವಿರುದ್ಧ ರಾಜ್ಯದಲ್ಲಿ ಹೋರಾಟ ಮಾಡುತ್ತೇವೆ, ಇದು ಎಚ್ಚರಿಕೆ ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…
Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ
Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ
MUST WATCH
ಹೊಸ ಸೇರ್ಪಡೆ
Bengaluru: ಟ್ರಕ್ ಡಿಕ್ಕಿ; ಜನ್ಮದಿನದಂದೇ ಬಾಲಕ ಸಾವು
Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು
Bengaluru: ರಸ್ತೆ ಬದಿ ಮಲಗುವ ವಿಷಯಕ್ಕೆ ಜಗಳ; ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಕೊಲೆ
Bengaluru: ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ
10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.