Mass Marriage: ಹೆಚ್ಚು ಮಕ್ಕಳು ಬೇಡ, ಎರಡೇ ಸಾಕು: ಸಿಎಂ ಸಿದ್ದರಾಮಯ್ಯ ಸಲಹೆ
ಈಗಾಗಲೇ ದೇಶದ ಜನಸಂಖ್ಯೆ 140 ಕೋಟಿ ದಾಟಿದೆ, ಸರ್ವ ಧರ್ಮಗಳ ಸಾಮೂಹಿಕ ವಿವಾಹದಲ್ಲಿ ಮುಖ್ಯಮಂತ್ರಿ ಭಾಗಿ
Team Udayavani, Jan 13, 2025, 7:25 AM IST
ಹೊಸಪೇಟೆ: ಜನಸಂಖ್ಯೆಯಲ್ಲಿ ಭಾರತ ಚೀನಾ ದೇಶವನ್ನು ಹಿಂದಿಕ್ಕಿದ್ದು, ದೇಶದ ಜನಸಂಖ್ಯೆ 140 ಕೋಟಿ ತಲುಪಿದೆ. ಹೀಗಾಗಿ ಆರತಿಗೊಂದು, ಕೀರ್ತಿಗೊಂದು ಎರಡು ಮಕ್ಕಳಿಗೆ ಜನ್ಮ ನೀಡಿ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಭಾನುವಾರ ಮಾಜಿ ಶಾಸಕ ಸಿರಾಜ್ ಶೇಖ್ ಅವರ ಪುತ್ರನ ಆರತಕ್ಷತೆ ಸಮಾರಂಭದಲ್ಲಿ ಆಯೋಜಿಸಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಸ್ವಾಮೀಜಿಯೊಬ್ಬರು ಹೆಚ್ಚು ಹೆಚ್ಚು ಮಕ್ಕಳಿಗೆ ಜನ್ಮ ನೀಡಬೇಕೆಂದು ಸಲಹೆ ನೀಡಿದ್ದಾರೆ. ಈಗಾಗಲೇ ದೇಶದ ಜನಸಂಖ್ಯೆ ನಾಗಾಲೋಟದಲ್ಲಿ ಏರಿಕೆ ಆಗುತ್ತಿದೆ. ಸುಖ ಸಂಸಾರಕ್ಕೆ ಮಕ್ಕಳು ಇಬ್ಬರೇ ಇದ್ದರೆ ಸಾಕು. ಇದನ್ನೇ ಅನುಸರಿಸಿ ಎಂದು ನವ ವಧು-ವರರಿಗೆ ಸಲಹೆ ನೀಡಿದರು.
ಬಡ ಕುಟುಂಬಗಳು ಮದುವೆ ಮಾಡುವುದು ಅಷ್ಟು ಸುಲಭದ ಮಾತಲ್ಲ. ಮದುವೆ ಖರ್ಚಿಗಾಗಿ ಸಾಲ ಮಾಡಬೇಕಾಗುತ್ತದೆ. ಸಾಮೂಹಿಕ ವಿವಾಹಗಳು ಬಡ-ಮಧ್ಯಮದವರ ಪಾಲಿಗೆ ವರದಾನವಾಗಿದೆ. ಬಡವರು ಸರಳ ವಿವಾಹಕ್ಕೆ ಆದ್ಯತೆ ನೀಡಬೇಕು. ಹೆಣ್ಣುಮಕ್ಕಳಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದರು.
ಅಂತರ್ಜಾತಿ ವಿವಾಹಗಳಿಂದ ಸಮಾಜದಲ್ಲಿ ಜಾತಿ ವ್ಯವಸ್ಥೆ ಅಳಿದು, ಸಮ ಸಮಾಜ ನಿರ್ಮಾಣವಾಗಲಿದೆ. ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ತೊಲಗಿ ಸಮ ಸಮಾಜ ನಿರ್ಮಾಣವಾಗಲಿದೆ. ನಾನು ನಮ್ಮ ಜಾತಿಯಲ್ಲೇ ಮದುವೆ ಆಗಿದ್ದೇನೆ. ಆದರೆ, ನನ್ನ ಹಿರಿಯ ಮಗ ಅಂತರ್ಜಾತಿ ವಿವಾಹವಾಗಿದ್ದ. ಈಗ ಅವನು ಇಲ್ಲ, ಎರಡನೇ ಮಗ ಮದುವೆ ಆಗಿಲ್ಲ. ಅಂತರ್ಜಾತಿ ವಿವಾಹವನ್ನು ನಾನೂ ಸಹ ಬೆಂಬಲಿಸುತ್ತೇನೆ ಎಂದರು.
ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತವಾಗಿತ್ತು. ಇತರ ಧರ್ಮಗಳನ್ನೂ ಗೌರವಿಸುವ ವ್ಯವಸ್ಥೆ ಸಮಾಜದಲ್ಲಿರಬೇಕು. ಚಲನೆ ರಹಿತವಾದ ಜಾತಿ ವ್ಯವಸ್ಥೆಯಲ್ಲಿ ನಾವಿದ್ದೇವೆ. ಆರ್ಥಿಕ ಹಾಗೂ ಸಾಮಾಜಿಕ ಸ್ವಾವಲಂಬನೆಯಿಂದ ಚಲನೆಯಿಲ್ಲದ ಸಮಾಜಕ್ಕೆ ಜೀವ ಬರುತ್ತದೆ ಎಂದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಂಸದ ಈ.ತುಕಾರಾಂ, ಶಾಸಕರಾದ ಬಿ.ಎನ್. ನಾಗರಾಜ, ಎಚ್.ಆರ್.ಗವಿಯಪ್ಪ, ಡಾ|ಎನ್.ಟಿ.ಶ್ರೀನಿವಾಸ, ಎಂ.ಪಿ.ಲತಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…
Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ
Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ
MUST WATCH
ಹೊಸ ಸೇರ್ಪಡೆ
Trinadha Rao Nakkina: ನಟಿಯ ʼಸೈಜ್ʼ ಬಗ್ಗೆ ಮಾತನಾಡಿ ವಿವಾದಕ್ಕೆ ಸಿಲುಕಿದ ನಿರ್ದೇಶಕ
Bantwal: ಜಕ್ರಿಬೆಟ್ಟು ಬ್ಯಾರೇಜ್‌ಗೆ ಶೀಘ್ರ ಗೇಟ್!
Champions Trophy: ಅಚ್ಚರಿಯ ಆಯ್ಕೆಯೊಂದಿಗೆ ಆಸ್ಟ್ರೇಲಿಯಾ ತಂಡ ಪ್ರಕಟ
Editorial: ಪಂಚಾಯತ್ ತೆರಿಗೆ ಸಂಗ್ರಹಕ್ಕೆ ಕಾನೂನು ರೂಪುಗೊಳ್ಳಲಿ
Ramanagar; ಎಲ್&ಟಿ ಮುಖ್ಯಸ್ಥ ಸುಬ್ರಮಣಿಯನ್ ಹೇಳಿಕೆ ವಿರುದ್ದ ವಾಟಾಳ್ ನಾಗರಾಜ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.