C.T.Ravi Case: ಕಾನೂನು ಚೌಕಟ್ಟಿನಲ್ಲೇ ನಮ್ಮ ತನಿಖೆ: ಜಿ.ಪರಮೇಶ್ವರ್
ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಪ್ರಕರಣ: ಸಭಾಪತಿ ಪತ್ರಕ್ಕೆ ಗೃಹ ಸಚಿವರ ಪ್ರತಿಕ್ರಿಯೆ
Team Udayavani, Jan 13, 2025, 7:12 AM IST
ಬೆಂಗಳೂರು: “ಯಾರೂ ಕಾನೂನಿಗಿಂತ ಮಿಗಿಲಲ್ಲ. ಸಭಾಪತಿಗಳೂ ಅದೇ ಚೌಕಟ್ಟಿನಲ್ಲಿ ತೀರ್ಪು ಕೊಡುತ್ತಾರೆ; ನಾವೂ ಅದೇ ಚೌಕಟ್ಟಿನಲ್ಲಿ ತನಿಖೆ ಮಾಡುತ್ತೇವೆ’ ಎಂದು ಗೃಹ ಸಚಿವ ಡಾ.ಪರಮೇಶ್ವರ ತಿಳಿಸಿದರು.
ಸಿ.ಟಿ. ರವಿ ಪ್ರಕರಣಕ್ಕೆ ಸಂಬಂಧಿಸಿ ಸಭಾಪತಿ ಹೊರಟ್ಟಿ ಅವರ ಪತ್ರದಲ್ಲಿ ಏನಿದೆ ಎಂದು ನೋಡುತ್ತೇನೆ. ಅನಂತರ ಕಾನೂನು ಸಲಹೆ ಪಡೆದು ಮುಂದುವರಿಯುತ್ತೇವೆ. ಶಾಸಕಾಂಗದ ಸಾರ್ವಭೌಮತ್ವ ಉಲ್ಲಂಘನೆ ಆಗಿದೆಯೇ ಎಂಬ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ರವಿವಾರ ಸುದ್ದಿಗಾರರಿಗೆ ಅವರು ತಿಳಿಸಿದರು.
ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಅವರ ದೂರಿನ ಮೇರೆಗೆ ಪೊಲೀಸರು ಹೇಗೆ ನಡೆದುಕೊಂಡರು ಎಂಬುದರ ಸಹಿತ ಎಲ್ಲವನ್ನೂ ಪರಿಶೀಲಿಸಲಾಗುವುದು. ಕಾನೂನು ಚೌಕಟ್ಟಿನಲ್ಲಿ ಶಾಸಕಾಂಗದ ಸಾರ್ವಭೌಮತ್ವ ಉಲ್ಲಂಘನೆ ಆಗಿದೆಯೇ ಎಂದು ಪರಿಶೀಲಿಸುತ್ತೇವೆ. ಅನವಶ್ಯಕ ಗೊಂದಲ ಆಗುತ್ತಿರುವ ಹಿನ್ನೆಲೆಯಲ್ಲಿ ಸಿಒಡಿಗೆ ಪ್ರಕರಣ ಕೊಟ್ಟೆವು. ಸತ್ಯಾಸತ್ಯ ಪತ್ತೆ ಹಚ್ಚಲು ಸಿಒಡಿಗೆ ವಹಿಸಲಾಯಿತು ಎಂದು ಸ್ಪಷ್ಟಪಡಿಸಿದರು.
ಸಿ.ಟಿ. ರವಿಗೆ ಅನಾಮಿಕರಿಂದ ಬೆದರಿಕೆ ವಿಷಯಕ್ಕೆ ಪ್ರತಿಕ್ರಿಯಿಸಿ, ಬೆದರಿಕೆ ಪತ್ರದ ಬಗ್ಗೆ ಪರಿಶೀಲಿಸಲಾಗುವುದು. ಈಗಾಗಲೇ ಸಿಐಡಿಯವರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪತ್ರದ ವಿಷಯವೂ ಪರಿಶೀಲಿಸುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…
Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ
Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ
MUST WATCH
ಹೊಸ ಸೇರ್ಪಡೆ
Jammu Kashmir: ಸೋನ್ಮಾರ್ಗ್‌ನಲ್ಲಿ ಝಡ್-ಮೋರ್ಹ್ ಸುರಂಗವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ನಭದಲ್ಲಿ ಕಣ್ಣು-ನೆಲದಲ್ಲಿ ಕಾಲು: ಮೌನ ಕ್ರಾಂತಿ: ಭೂ ಸಾಮರ್ಥ್ಯ ವೃದ್ಧಿಸಿದ ಬಾಹ್ಯಾಕಾಶ ಶಕ್ತಿ
ಹತ್ಯೆಗೈಯಲು ಹೇಳಿದ್ದು ಪ್ರೇಯಸಿಯ ಪತಿಯನ್ನು, ಬಾಡಿಗೆ ಹಂತಕರು ಕೊಂದಿದ್ದು Taxi ಚಾಲಕನನ್ನು
Editorial: ಇಂಟರ್‌ನೆಟ್-ನೆಟ್‌ವರ್ಕ್ ಸುಧಾರಣೆಗೆ ಸರಕಾರ ಮುಂದಾಗಲಿ
Sanju Weds Geetha 2: ಜ.17ಕ್ಕೆ ಬರಲಿದೆ ಸಂಜು ವೆಡ್ಸ್ ಗೀತಾ-2
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.