Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್
Team Udayavani, Jan 13, 2025, 3:23 AM IST
ರಾಮನಗರ: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂಬುದು ಸುಳ್ಳು, ಆ ರೀತಿಯ ಯಾವುದೇ ಚರ್ಚೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.
ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಂಪುಟ ವಿಸ್ತರಣೆ ಜವಾಬ್ದಾರಿ ಮುಖ್ಯಮಂತ್ರಿಗಳ ಮೇಲಿದ್ದು ಹೆಚ್ಚಿನ ಮಾಹಿತಿಯನ್ನು ಮುಖ್ಯಮಂತ್ರಿಗಳ ಬಳಿಯೇ ಕೇಳಿ ಎಂದರು. ಇನ್ನು ರಾಮನಗರ ಜಿಲ್ಲೆಯಲ್ಲೂ ಸಚಿವ ಸ್ಥಾನದ ಆಕಾಂಕ್ಷಿಗಳಿರುವ ಬಗ್ಗೆ ಪ್ರಸ್ತಾಪಿಸಿದಾಗ, ಸದ್ಯಕ್ಕೆ ನಾನೇ ಇದ್ದೇನಲ್ಲ ಎಂದರು.
ಕಾಂಗ್ರೆಸ್‌ನಲ್ಲಿ “ಡಿನ್ನರ್ ಪಾಲಿಟಿಕ್ಸ್’ ನಡೆಯುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಹೊಸ ವರ್ಷ ಎಂದು ಅವರು ಊಟಕ್ಕೆ ಸೇರಿದ್ದರು. ನಾನು ವಿದೇಶಕ್ಕೆ ಹೋಗಿದ್ದೆ. ನೀವು ಇದನ್ನು ವೈಭವೀಕರಣ ಮಾಡಿದ್ದೀರಾ ಅಷ್ಟೇ ಎಂದರು.
ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಸಂಬಂಧ ಎಲ್ಲ ಪ್ರಕ್ರಿಯೆಗಳು ಅಂತಿಮ ಹಂತಕ್ಕೆ ಬಂದಿವೆ. ನಮ್ಮ ಜಿಲ್ಲೆಯ ಹೆಸರನ್ನು ನಾವು ಬದಲಾವಣೆ ಮಾಡುವುದಕ್ಕೆ ಯಾವ ಮಾನದಂಡಗಳೂ ಬೇಕಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…
Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ
Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ
MUST WATCH
ಹೊಸ ಸೇರ್ಪಡೆ
Bengaluru: ಟ್ರಕ್ ಡಿಕ್ಕಿ; ಜನ್ಮದಿನದಂದೇ ಬಾಲಕ ಸಾವು
Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು
Bengaluru: ರಸ್ತೆ ಬದಿ ಮಲಗುವ ವಿಷಯಕ್ಕೆ ಜಗಳ; ಕಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಕೊಲೆ
Bengaluru: ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ
10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.