Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ
ರಸ್ತೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ತಡರಾತ್ರಿ ಕಿಡಿಗೇಡಿಗಳು ಕೊಯ್ದಿದ್ದರು.
Team Udayavani, Jan 13, 2025, 10:02 AM IST
ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ 3 ಹಸುಗಳ ಕೆಚ್ಚಲು ಕೊಯ್ದು ಪ್ರಕರಣಕ್ಕೆ ಓರ್ವ ಆರೋಪಿಯನ್ನು ಪೊಲೀಸರು ಭಾನುವಾರ ತಡರಾತ್ರಿ (ಜ.12) ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಭಾನುವಾರ ರಾತ್ರಿ ಕಾಟನ್ ಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಿಹಾರ ರಾಜ್ಯದ ಚಂಪಾರನ್ ಜಿಲ್ಲೆ ಮೂಲದವನಾಗಿರುವ ಸೈಯದ್ ನಸ್ರು (30) ಬಂಧಿತ ಆರೋಪಿ. ಘಟನೆ ನಡೆದ ಸ್ಥಳದಿಂದ 50 ಮೀಟರ್ ದೂರದಲ್ಲಿರುವ ಪ್ಲಾಸ್ಟಿಕ್ ಹಾಗೂ ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಶೇಕ್ ನಸ್ರು ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಆರೋಪಿಯನ್ನು ಬಂಧಿಸಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಏನಿದು ಘಟನೆ?:
ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದಿತ್ತು.ಭಾನುವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿತ್ತು.
ಕರ್ಣ ಎಂಬುವವರಿಗೆ ಸೇರಿದ ಮೂರು ಹಸುಗಳ ಕೆಚ್ಚಲು ಕೊಯ್ದು, ಕಿಡಿಗೇಡಿಗಳು ಪರಾರಿ ಆಗಿದ್ದರು. ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 8 ಹಸುಗಳ ಸಾಕಿರುವ ಕರ್ಣ ಈ ಪೈಕಿ ಮೂರರಿಂದ ನಾಲ್ಕು ಹಸುಗಳು ಮನೆಯಿಂದ ಕೆಲವೇ ದೂರದಲ್ಲಿರುವ ರಸ್ತೆಯಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ತಡರಾತ್ರಿ ಕಿಡಿಗೇಡಿಗಳು ಕೊಯ್ದಿದ್ದರು.
ಈ ಸಂಬಂಧ ಮಾಲೀಕ ಕರ್ಣ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರು ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಖಂಡಿಸಿ ಹಿಂದೂ ಸಂಘಟನೆ ಕಾರ್ಯಕರ್ತರು, ಬಿಜೆಪಿ ಮುಖಂಡರು ಕ್ರಮಕ್ಕೆ ಆಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ನಾಲ್ಕು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ತಾಯಿ; ಮಹಿಳೆ ಬಚಾವ್, 2 ಮಕ್ಕಳು ಸಾವು
Naxal: 6 ಜನ ನಕ್ಸಲರ ಶರಣಾಗತಿಗೆ ದನಗಾಹಿ ಅಜ್ಜಿಯೇ ರೂವಾರಿ… ಇದರ ಹಿಂದಿದೆ ರೋಚಕ ಸ್ಟೋರಿ
ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನಕ್ಕೆ ಪ್ರಣವಾನಂದ ಸ್ವಾಮೀಜಿ ಆಗ್ರಹ
Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…
Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.