Bengaluru: ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ
Team Udayavani, Jan 13, 2025, 10:28 AM IST
ಬೆಂಗಳೂರು: ಆನ್‌ಲೈನ್ ಗೇಮಿಂಗ್ ಗೀಳಿಗೆ ಬಿದ್ದು ಹಣ ಕಳೆದುಕೊಂಡಿರುವುದಕ್ಕೆ ನೊಂದು ಪ್ರತ್ಯೇಕ 2 ಪ್ರಕರಣದಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಲ್ಲಿಕಾರ್ಜುನ (25) ಹಾಗೂ ಮತ್ತೂಂದೆಡೆ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ (28) ಆತ್ಮಹತ್ಯೆಗೆ ಶರಣಾದವರು.
ವಿಜಯನಗರ ಮೂಲದ ಮಲ್ಲಿ ಕಾರ್ಜುನ ಖಾಸಗಿ ಆಸ್ಪತ್ರೆಯೊಂದಲ್ಲಿ ವೈದ್ಯಕೀಯ ಸಹಾಯಕನಾಗಿ ಕೆಲಸ ಮಾಡಿಕೊಂಡಿದ್ದ. 4 ವರ್ಷಗಳಿಂದ ಆನ್‌ಲೈನ್ ಗೇಮ್‌ನಲ್ಲಿ ಹಣ ಹೂಡಿಕೆ ಮಾಡಿ ಕಳೆ ದು ಕೊಂಡಿದ್ದ. ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಶನಿವಾರ ತಾನಿದ್ದ ಪಿಜಿ ಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದ.
ಆಟೋ ಚಾಲಕ ಆತ್ಮಹತ್ಯೆ: ಮತ್ತೊಂದು ಪ್ರಕರಣದಲ್ಲಿ ಬಳ್ಳಾರಿ ಮೂಲದ ಕುಮಾರಸ್ವಾಮಿ ಪತ್ನಿ ಹಾಗೂ ಮಕ್ಕಳ ಜತೆಗೆ ಬೆಳ್ಳಂದೂರಿನ ಬಳಿ ಬಾಡಿಗೆ ಮನೆಯಲ್ಲಿ ವಾಸಿ ಸು ತ್ತಿದ್ದ. ಆಟೋ ಚಾಲಕನಾಗಿದ್ದ ಈತನೂ ಸಹ ಆನ್‌ಲೈನ್ ಗೇಮ್ ಆ್ಯಪ್‌ನಲ್ಲಿ ಹಣ ಹೂಡಿಕೆ ಮಾಡಿ ಕಳೆದುಕೊಂಡಿದ್ದ. ಇದರಿಂದ ನೊಂದು ಆತ್ಮಹತ್ಯೆ ಮಾಡಲು ನಿರ್ಧರಿಸಿದ್ದ ಎಂದು ತಿಳಿದು ಬಂದಿದೆ.
ಶನಿವಾರ ಕುಟುಂಬಸ್ಥರು ಮನೆ ಯಲ್ಲಿ ಇಲ್ಲದೇ ಇದ್ದಾಗ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಪತ್ನಿ ಮನೆಗೆ ವಾಪಸ್ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬೆಳ್ಳಂದೂರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿ ಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿ ದ್ದಾರೆ.
ಎರಡೂ ಪ್ರಕರಣಗಳಲ್ಲಿ ಆತ್ಮಹತ್ಯೆ ಮಾಡಿಕೊಂಡವರು ಎಷ್ಟು ಹಣ ಕಳೆದುಕೊಂಡಿದ್ದರು ಎಂಬಿತ್ಯಾದಿ ಮಾಹಿತಿ ಗಳನ್ನು ಆಯಾ ಠಾಣೆಯ ಪೊಲೀಸರು ಕಲೆ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.