Panambur: ಲೈಟರ್ ವಿಚಾರಕ್ಕೆ ಘರ್ಷಣೆ… ಬಿಯರ್ ಬಾಟಲಿಯಿಂದ ಹಲ್ಲೆ, ಪ್ರಕರಣ ದಾಖಲು
Team Udayavani, Jan 13, 2025, 11:01 AM IST
ಪಣಂಬೂರು: ಲೈಟರ್ ವಿಚಾರಕ್ಕೆ ಇತ್ತಂಡಗಳ ನಡುವೆ ವಾಗ್ವಾದ ನಡೆದು ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶ ಕಟ್ಟೆ, ತಣ್ಣಿರುಬಾವಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಘಟನೆಗೆ ಸಂಬಂಧಿಸಿ ಪಣಂಬೂರು ಠಾಣೆಯಲ್ಲಿ 2 ಪ್ರತ್ಯೆಕ ಪ್ರಕರಣಗಳು ದಾಖಲಾಗಿದೆ.
ಏನಿದು ಪ್ರಕರಣ:
ಭಾನುವಾರ(ಜ.12) ತಡರಾತ್ರಿ 11:45ರ ವೇಳೆಗೆ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶ ಕಟ್ಟೆ, ತಣ್ಣಿರುಬಾವಿ ಎಂಬಲ್ಲಿ ವೆಂಕಟೇಶ, ಕಾರ್ತಿಕ್, ಸಂತೋಷ್, ಸೈಫ್, ಧನುಷ್, ಪ್ರಜ್ವಲ್ ಎಂಬವರು ಮದ್ಯಪಾನ ಮಾಡಿಕೊಂಡು ಸಿಗರೇಟ್ ಸೇದುತ್ತಿರುವ ಸಂದರ್ಭ ಸ್ಥಳಕ್ಕೆ ಬಂದ ಪ್ರೀತಂ ಮತ್ತು ಸನ್ವೀತ್ ಹಾಗೂ ಇತರರು ಸಿಗಾರ್ ಲೈಟರ್ ಕೇಳಿದ್ದಾರೆ. ಈ ವೇಳೆ ಪ್ರಜ್ವಲ್ ಲೈಟರ್ ಅನ್ನು ಪ್ರೀತಂ ತಂಡಕ್ಕೆ ನೀಡಿದ್ದು ಅವರು ಲೈಟರ್ ವಾಪಾಸು ಕೊಡದೇ ಇದ್ದಾಗ ‘ಲೈಟರ್ ಕೊಡಿ’ ಎಂದು ಪ್ರಜ್ವಲ್ ಕೇಳಿದ್ದಾನೆ. ಈ ವೇಳೆ ಸಿಟ್ಟಿಗೆದ್ದ ಇನ್ನೊಂದು ಗುಂಪು ನೀವು ಯಾಕೆ ಧಮ್ಕಿ ಹಾಕುತ್ತಿರೀ ಎಂದು ಹೇಳಿ ಪ್ರಜ್ವಲ್ ಜತೆಗಿದ್ದ ಕಾರ್ತಿಕ್ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದಿದ್ದಾನೆ ಜೊತೆಗೆ ಅವರೊಂದಿಗಿದ್ದ 5 ಜನರು ಅಲ್ಲೇ ಇದ್ದ ಮರದ ಕೋಲುಗಳಿಂದ ಪ್ರಜ್ವಲ್, ಕಾರ್ತಿಕ್, ಸಂತೋಷ್, ಸೈಫ್, ಧನುಷ್, ಎಂಬವವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಎರಡು ತಂಡಗಳ ನಡುವೆ ಗಲಾಟೆ ನಡೆದಿದೆ.
ಈ ಘಟನೆಗೆ ಸಂಬಂಧಿಸಿ ಪಣಂಬೂರು ಠಾಣೆಯಲ್ಲಿ 2 ಪ್ರತ್ಯೆಕ ಪ್ರಕರಣಗಳು ದಾಖಲಾಗಿದೆ.
ಪ್ರೀತಂ ಎಂಬವರು ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 03/2025 ಕಲಂ: 118(1), 126(2), 189(2), 189(4), 190, 191(2), 191(3),352) ಬಿ.ಎನ್.ಎಸ್ ನಂತೆ ದಾಖಲಾಗಿದ್ದು ಈ ಪ್ರಕರಣದಲ್ಲಿ ವೆಂಕಟೇಶ್, ಕಾರ್ತಿಕ್, ಸಂತೋಷ್, ಸೈಪ್, ಧನುಷ್, ಪ್ರಜ್ವಲ್ ಎಂಬವರು ಆರೋಪಿಗಳಾಗಿದ್ದು ಅವರಲ್ಲಿ, ಕಾರ್ತಿಕ್, ಸಂತೋಷ್, ಧನುಷ್, ಪ್ರಜ್ವಲ್ ಎಂಬವರನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಅದರಂತೆ ಪ್ರಜ್ವಲ್ ಎಂಬಾತ ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 04/2025 ಕಲಂ: 189(2), 189(4) , 191(2), 191(3), 118(1), 190 ಬಿ. ಎನ್.ಎಸ್ ನಂತೆ ದಾಖಲಾಗಿದ್ದು ಈ ಪ್ರಕರಣದಲ್ಲಿ ಪ್ರೀತಂ ಮತ್ತು ಸನ್ವೀತ್ ಹಾಗೂ ಇತರರು ಆರೋಪಿಗಳಾಗಿರುತ್ತಾರೆ.
ಘಟನೆಗೆ ಸಂಬಂಧಿಸಿದಂತೆ ಡಿ.ಸಿ.ಪಿ ಸಿದ್ದಾರ್ಥ್ ಘೋಯಲ್ ಮಂಗಳೂರು ನಗರ ಹಾಗೂ ಎಸಿಪಿ, ಸಿಸಿಬಿ, ಎಸಿಪಿ ಉತ್ತರ ಉಪ ವಿಭಾಗ, ಪೊಲೀಸ್ ನಿರೀಕ್ಷಕರು ಪಣಂಬೂರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ವಾಟ್ಸಾಪ್ ನಲ್ಲಿ ಸುಳ್ಳು ಸುದ್ದಿ ಪ್ರಸಾರ:
ಘಟನೆಗೆ ಸಂಬಂಧಿಸಿದಂತೆ ವಾಟ್ಸಪ್ ನಲ್ಲಿ ಬೆಂಗ್ರೆ ಪರಿಸರದಲ್ಲಿ “ಹಿಂದೂಗಳ ಮನೆಯನ್ನು ಗುರಿಯಾಗಿಸಿಕೊಂಡು ಮುಸ್ಲಿಂ ಯುವಕರ ತಂಡ ತಲವಾರು ಸಹಿತ ಪರಿಶಿಷ್ಟ ಸಮುದಾಯದ ಯುವಕನ ಮೇಲೆ ದಾಳಿ ನಡೆಸಿ ಪರಾರಿ ಆಗುವ ಸಂದರ್ಭದಲ್ಲಿ ಹಿಂದೂಗಳ ಗುಂಪು ಓರ್ವನನ್ನು ಸೆರೆ ಹಿಡಿದಿದ್ದಾರೆ, ಇದಾದ ಬಳಿಕ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ಜಮಾಯಿಸಿದ್ದು ಉಳಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಹಾಗೂ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಆಗಮಿಸುವಂತೆ ಹಿಂದೂ ಸಮುದಾಯ ಬಿಗಿಪಟ್ಟು ಹಿಡಿದಿದೆ ಎಂದು ವಾಟ್ಸ್ ಆಪ್ ನಲ್ಲಿ ಹರಿದಾಡುತ್ತಿತ್ತು ಆದರೆ ಇದಕ್ಕೆ ಸ್ಪಷ್ಟನೆ ನೀಡಿದ ಪೊಲೀಸ್ ಆಯುಕ್ತರು ವಾಟ್ಸ್ ಆಪ್ ನಲ್ಲಿ ಹರಿಯುತ್ತಿರುವ ಸುದ್ದಿ ಸುಳ್ಳು ಎಂದು ಹೇಳಿದ್ದಾರೆ.
ಇದನ್ನೂ ಓದಿ: 10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
mangaluru: ಕಬಡ್ಡಿ, ಬ್ಯಾಡ್ಮಿಂಟನ್‌ಗೆ ಸ್ಮಾರ್ಟ್ ಕಾಂಪ್ಲೆಕ್ಸ್
Kambala: ದಾಖಲೆ ಜೋಡಿ ಕೋಣಗಳಿಗೆ ಸಾಕ್ಷಿಯಾದ ನರಿಂಗಾನ ಕಂಬಳ: ಇಲ್ಲಿದೆ ಫಲಿತಾಂಶ ಪಟ್ಟಿ
Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ
Mangaluru ಮರವೂರು: ಆಕಸ್ಮಿಕವಾಗಿ ನದಿಗೆ ಬಿದ್ದು ಮಹಿಳೆ ಮೃತ್ಯು: ಪ್ರಕರಣ ದಾಖಲು
Mukund MGM Realty: ಶೀಘ್ರದಲ್ಲೇ ಮತ್ತೆರಡು ಬ್ಯುಸಿನೆಸ್ ಸೆಂಟರ್‌ಗಳು ಪ್ರಾರಂಭ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.