Naxal: 6 ಜನ ನಕ್ಸಲರ ಶರಣಾಗತಿಗೆ ದನಗಾಹಿ ಅಜ್ಜಿಯೇ ರೂವಾರಿ… ಇದರ ಹಿಂದಿದೆ ರೋಚಕ ಸ್ಟೋರಿ
ವಿಕ್ರಂಗೌಡ ಎನ್ ಕೌಂಟರ್ ಗೂ ಮುನ್ನವೇ ನಡೆದಿತ್ತು ಸಂಧಾನ ಯತ್ನ
Team Udayavani, Jan 13, 2025, 2:47 PM IST
ಚಿಕ್ಕಮಗಳೂರು: ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಆರು ಮಂದಿ ನಕ್ಸಲರು ಶರಣಾಗತಿಯಾಗಿರುವ ಹಿಂದೆ ಇದ್ದದ್ದು ದನಗಾಹಿ ಮಹಿಳೆ.
ಹೌದು ನಕ್ಸಲರ ಹಾಗೂ ಸಂಧಾನಕಾರರ ನಡುವೆ ಕೊಂಡಿಯಾಗಿ ಕೆಲಸ ಮಾಡಿದ್ದು ಬೇರೆ ಯಾರೂ ಅಲ್ಲ ಅವರು ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಕಿತ್ತಲೆಮನೆ ಗ್ರಾಮದ ಗೌರಮ್ಮ.
ನಕ್ಸಲರ ಶರಣಾಗತಿ ಪ್ರಕ್ರಿಯೆಗೆ ಹಿಂದೆ ಸುಮಾರು 72 ದಿನಗಳ ಸುದೀರ್ಘ ಪಯಣವಿದೆ, ಇದೆಲ್ಲದರ ಹಿಂದೆ ಇದ್ದದ್ದೇ ಕಿತ್ತಲೆಮನೆ ಗ್ರಾಮದ ಗೌರಮ್ಮ.
ದನಗಾಹಿ ಮಹಿಳೆಯಾಗಿದ್ದ ಗೌರಮ್ಮ ದನಗಳನ್ನು ಮೇಯಿಸುವ ಸಂದರ್ಭದಲ್ಲಿ ನಕ್ಸಲರು ಅಜ್ಜಿಯ ಸಂಪರ್ಕಕ್ಕೆ ಬಂದಿದ್ದರು ಎನ್ನಲಾಗಿದೆ ಅದಾದ ಬಳಿಕ ಅಜ್ಜಿಯ ಮೇಲೆ ಹೆಚ್ಚಿನ ವಿಶ್ವಾಸವನ್ನೂ ಇಟ್ಟಿದ್ದರು ಇದೇ ವಿಶ್ವಾಸ ಅವರ ಸಂಧಾನಕ್ಕೆ ನಾಂದಿಯಾಯಿತು ಎನ್ನಲಾಗಿದೆ. ನಕ್ಸಲರು ಮತ್ತು ಸಂಧಾನಕಾರರ ನಡುವೆ ಸಂಪರ್ಕ ಸೇತುವೆಯಾಗಿದ್ದ ಗೌರಮ್ಮ, ನಕ್ಸಲರ ಪತ್ರ, ಸಂಧಾನ ಸಮಿತಿಯ ಪತ್ರವನ್ನು ಪರಸ್ಪರ ವಿನಿಮಯ ಮಾಡುವಲ್ಲಿ ಗೌರಮ್ಮ ಪ್ರಮುಖ ಪಾತ್ರ ವಹಿಸಿದ್ದರು ಜೊತೆಗೆ ಸಂಧಾನ ಪ್ರಕ್ರಿಯೆಯ ಭಾಗವಾಗಿ 20 ರಿಂದ 30 ಕಿಲೋಮೀಟರ್ ನಡೆದುಕೊಂಡೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರಂತೆ.
ವಿಕ್ರಂಗೌಡ ಎನ್ ಕೌಂಟರ್ ಗೂ ಮುನ್ನವೇ ನಡೆದಿತ್ತು ಸಂಧಾನ ಯತ್ನ:
ಇತ್ತೀಚಿಗೆ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ ನಕ್ಸಲ್ ನಾಯಕ ವಿಕ್ರಂಗೌಡನನ್ನು ಎನ್ ಕೌಂಟರ್ ನಡೆಸಲಾಗಿತ್ತು ಆದರೆ ಮಾಹಿತಿಯ ಪ್ರಕಾರ ವಿಕ್ರಂ ಗೌಡ ಎನ್ ಕೌಂಟರ್ ನಡೆಯುವ ಮೊದಲೇ ಸಂಧಾನ ಮಾತುಕತೆ ನಡೆದಿತ್ತು ಆದರೆ ಸಂಧಾನಕ್ಕೆ ಒಪ್ಪುತ್ತಿದ್ದರೆ ವಿಕ್ರಂ ಗೌಡ ಎನ್ ಕೌಂಟರ್ ಆಗುತ್ತಿರಲಿಲ್ಲ ಎಂದು ಹೇಳಲಾಗಿದೆ.
ಇದನ್ನೂ ಓದಿ: ಹತ್ಯೆಗೈಯಲು ಹೇಳಿದ್ದು ಪ್ರೇಯಸಿಯ ಪತಿಯನ್ನು, ಬಾಡಿಗೆ ಹಂತಕರು ಕೊಂದಿದ್ದು Taxi ಚಾಲಕನನ್ನು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಜಯಲಲಿತಾ ಸಂಬಂಧಿಗೆ ಚಿನ್ನ, ವಸ್ತು ಮರಳಿಸಲು ಹೈ ನಕಾರ
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ
Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್ ಹಾರನಹಳ್ಳಿ
Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್
MUST WATCH
ಹೊಸ ಸೇರ್ಪಡೆ
Sirsi: ಸಂಸದ ಕಾಗೇರಿ ಮನೆ ಅಂಗಳದಲ್ಲಿ ಚಿರತೆ ಓಡಾಟ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್
Padubidri: ಇಲ್ಲಿ ದೊಂದಿಯೇ ಬೆಳಕು, ಮರಳೇ ಪ್ರಸಾದ!
Kadaba ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಸೂಚನೆ
Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್ ಬಂಧನ? ಫೋಟೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.