Eddelu Manjunatha 2: ತೆರೆಯತ್ತ ʼಮಠʼ ಗುರುಪ್ರಸಾದ್ ಕೊನೆಯ ಕನಸು
Team Udayavani, Jan 13, 2025, 2:50 PM IST
ನಿರ್ದೇಶಕ “ಮಠ’ ಗುರುಪ್ರಸಾದ್ ಅವರ ಕೊನೆಯ ಕನಸು “ಎದ್ದೇಳು ಮಂಜುನಾಥ-2′ ಚಿತ್ರ ಬಿಡುಗಡೆ ಸಿದ್ಧವಾಗಿದೆ. ಚಿತ್ರ ಫೆ.21ರಂದು ತೆರೆಕಾಣುತ್ತಿದೆ.
ಎದ್ದೇಳು ಮಂಜುನಾಥ-2ಗೆ ಗುರುಪ್ರಸಾದ್ ಅವರೇ ಕಥೆ ಬರೆದು ನಿರ್ದೇಶನದ ಜೊತೆ ನಾಯಕನಾಗಿಯೂ ನಟಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಕಿತ್ತೋದ ಪ್ರೇಮ ಹಾಡು ಬಿಡುಗಡೆಯಾಗಿದೆ.
ಈ ವೇಳೆ ಚಿತ್ರದಲ್ಲಿ ನಟಿಸಿರುವ ಶರತ್ ಲೋಹಿತಾಶ್ವ ಮಾತನಾಡಿ, ಪ್ರತಿಯೊಬ್ಬ ಕಲಾವಿದರಿಗೂ ಒಬ್ಬ ಒಳ್ಳೆ ನಿರ್ದೇಶಕರ ಜೊತೆ ಕೆಲಸ ಮಾಡಬೇಕು ಎಂಬ ಆಸೆ ಇರುತ್ತದೆ. ಆ ಆಸೆ ನನಗೂ ಇತ್ತು. ಆ ಆಸೆ ಗುರುಪ್ರಸಾದ್ ಅವರ ಕೊನೆಯ ಚಿತ್ರದಲ್ಲಿ ಈಡೇರಿದೆ ಎಂದರು.
ನಾಯಕಿ ರಚಿತಾ ಮಹಾಲಕ್ಷ್ಮೀ ಮಾತನಾಡಿ,ನಾನು ರಂಗನಾಯಕ ಸಿನಿಮಾಗೂ ಮೊದಲು ಸೈನ್ ಮಾಡಿದ್ದು ಎದ್ದೇಳು ಮಂಜುನಾಥ-2 ಸಿನಿಮಾಗೆ. 2020ನಲ್ಲಿ ಈ ಸಿನಿಮಾದ ಚಿತ್ರೀಕರಣ ಮಾಡಿದ್ದು, ಈ ದಾರಿ ಬಹಳ ಸುಲಭವಾಗಿ ಇರಲಿಲ್ಲ. ಗುರುಪ್ರಸಾದ್ ಅವರ ನಿರ್ದೇಶನದಲ್ಲಿ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ ಎಂದರು.
ನಿರ್ಮಾಪಕರಾದ ಮೈಸೂರು ರಮೇಶ್ ಮಾತನಾಡಿ, ಎದ್ದೇಳು ಮಂಜುನಾಥ್-2 ಸಿನಿಮಾದಿಂದ ಬರುವ ಲಾಭದ 50ರಷ್ಟು ಭಾಗವನ್ನು ಗುರುಪ್ರಸಾದ್ ಅವರ ಮಗಳಾದ ನಗು ಶರ್ಮಾ ಭವಿಷ್ಯಕ್ಕೆ ಮೀಸಲಿಡುವುದಾಗಿ ಹೇಳಿದರು. ಕಿತ್ತೋದ ಪ್ರೇಮ ಎಂಬ ಹಾಡಿಗೆ ಗುರುಪ್ರಸಾದ್ ಸಾಹಿತ್ಯ ಬರೆದಿದ್ದು, ನವೀನ್ ಸಜ್ಜು ಧ್ವನಿಯಾಗಿದ್ದಾರೆ. ಅನೂಪ್ ಸೀಳಿನ್ ಹಾಡಿಗೆ ಟ್ಯೂನ್ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raju James Bond: ಕಣ್ಮಣಿ ಮೆಚ್ಚಿದ ರಾಜು; ಫೆ. 14ಕ್ಕೆ ‘ರಾಜು ಜೇಮ್ಸ್ ಬಾಂಡ್’ ರಿಲೀಸ್
Kiccha Sudeep: ಒಬ್ಬ ನಾಯಕ ನಟನ ಪಾತ್ರದಿಂದ ದೂರ ಆಗಬಲ್ಲೆ.. ನಿವೃತ್ತಿ ಬಗ್ಗೆ ಕಿಚ್ಚನ ಮಾತು
ಕೆಎ-11-1977: ಇದು ವಾಹನ ಸಂಖ್ಯೆಯಲ್ಲ, ಸಿನಿಮಾ ಟೈಟಲ್
Rudra Garuda Purana: ಖುಷಿಯ ನಶೆಯಲ್ಲಿ ರುದ್ರ
Sanju Weds Geetha 2: ಜ.17ಕ್ಕೆ ಬರಲಿದೆ ಸಂಜು ವೆಡ್ಸ್ ಗೀತಾ-2
MUST WATCH
ಹೊಸ ಸೇರ್ಪಡೆ
ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್
Padubidri: ಇಲ್ಲಿ ದೊಂದಿಯೇ ಬೆಳಕು, ಮರಳೇ ಪ್ರಸಾದ!
Kadaba ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಸೂಚನೆ
Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್ ಬಂಧನ? ಫೋಟೋ ವೈರಲ್
Bantwala: ಡೀಸೆಲ್ ಲೋಡ್ ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.