Viral Video: ವೇದಿಕೆಯಲ್ಲಿ ಕುಳಿತಿದ್ದ ಡಿಸಿಯನ್ನೇ ಗದರಿಸಿ ಕಳುಹಿಸಿದ ಸಿಎಂ ಸಿದ್ದರಾಮಯ್ಯ!

ಡಿಸಿನಾ ನೀನು..ನೀನ್ಯಾಕೆ ಇಲ್ಲಿ ಕೂತಿದ್ದೀಯಾ ಎಂದು ಪ್ರಶ್ನೆ, ಹೀರೋ ಆಗಲು ಹೋದ ಭ್ರಷ್ಟ ಸಿಎಂ: ಬಿಜೆಪಿ ಟೀಕೆ- ವಿಡಿಯೋ ನೋಡಿ

Team Udayavani, Jan 13, 2025, 5:46 PM IST

Vijyanagara-DC

ಹೊಸಪೇಟೆ: ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವೇದಿಕೆಯಲ್ಲಿ ಭಾಷಣ ಆರಂಭಿಸುವ ಮೊದಲು ಗಣ್ಯರ ಪರಿಚಯಿಸುವ ವೇಳೆ ಮೊದಲ ಸಾಲಿನಲ್ಲಿ ಕುಳಿತಿದ್ದ ಜಿಲ್ಲಾಧಿಕಾರಿಯವರ (ಐಎಎಸ್‌ ಅಧಿಕಾರಿ) “ನೀನ್ಯಾಕೆ ಇಲ್ಲಿ ಕೂತಿದ್ದೀಯಾ” ಎಂದು ಸಿಎಂ ಸಿದ್ದರಾಮಯ್ಯ ಗದರಿಸಿ ಎಬ್ಬಿಸಿ ಕಳುಹಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಮಾಜಿ ಶಾಸಕ ಸಿರಾಜ್‌ ಶೇಖ್‌ ಅವರ ಪುತ್ರನ ಆರತಕ್ಷತೆ ಸಮಾರಂಭದಲ್ಲಿ ಆಯೋಜಿಸಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗಿಯಾಗಿ ನವ ವಿವಾಹಿತರಿಗೆ ಶುಭ ಕೋರಿದರು. ಸಮಾರಂಭದ ವೇದಿಕೆಯಲ್ಲಿ ಸಿದ್ದರಾಮಯ್ಯ ಭಾಷಣದ ವೇಳೆ ಮೊದಲ ಸಾಲಿನ ಕುರ್ಚಿಯಲ್ಲಿ ಕುಳಿತಿದ್ದ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್‌.ದಿವಾಕರ್‌ರನ್ನು ಸಿದ್ದರಾಮಯ್ಯ ಯಾರು ನೀವು…ಎಂದು ಕೇಳಿ ಡಿಸಿನಾ ನೀನು ಡಿಸಿ.. ನೀನ್ಯಾಕೆ ಇಲ್ಲಿ ಕುಳಿತಿದ್ದೀಯಾ.. ಸ್ವಾಮೀಜಿ ಪಕ್ಕದಲ್ಲೇ ಕುಳಿತಿದ್ದೀಯಾ.. ಅಲ್ಲಿ ಹೋಗು ಎಂದು ಗದರಿಸಿ ಕಳುಹಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಎರಡೇ ಮಕ್ಕಳು ಸಾಕು ಎಂದ ಸಿಎಂ
ಇದೇ ಕಾರ್ಯಕ್ರಮದಲ್ಲಿ ಮಾತನಾಡಿ  ಜನಸಂಖ್ಯೆಯಲ್ಲಿ ಭಾರತ ಚೀನಾ ದೇಶವನ್ನು ಹಿಂದಿಕ್ಕಿದ್ದು, ದೇಶದ ಜನಸಂಖ್ಯೆ 140 ಕೋಟಿ ತಲುಪಿದೆ. ಹೀಗಾಗಿ ಆರತಿಗೊಂದು, ಕೀರ್ತಿಗೊಂದು ಎರಡು ಮಕ್ಕಳಿಗೆ ಜನ್ಮ ನೀಡಿ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಲ ದಿನಗಳ ಹಿಂದೆ ಸ್ವಾಮೀಜಿಯೊಬ್ಬರು ಹೆಚ್ಚು ಹೆಚ್ಚು ಮಕ್ಕಳಿಗೆ ಜನ್ಮ ನೀಡಬೇಕೆಂದು ಸಲಹೆ ನೀಡಿದ್ದಾರೆ. ಈಗಾಗಲೇ ದೇಶದ ಜನಸಂಖ್ಯೆ ನಾಗಾಲೋಟದಲ್ಲಿ ಏರಿಕೆ ಆಗುತ್ತಿದೆ. ಸುಖ ಸಂಸಾರಕ್ಕೆ ಮಕ್ಕಳು ಇಬ್ಬರೇ ಇದ್ದರೆ ಸಾಕು. ಇದನ್ನೇ ಅನುಸರಿಸಿ ಎಂದು ನವ ವಧು-ವರರಿಗೆ ಸಲಹೆ ನೀಡಿದರು.

ಜನರ ಮುಂದೆ ಹೀರೋ ಆಗಲು ಹೋದ ಭ್ರಷ್ಟ ಸಿಎಂ: ವಿಪಕ್ಷ ಬಿಜೆಪಿ ಟೀಕೆ 
ಜಿಲ್ಲಾಧಿಕಾರಿಯವರ ವೇದಿಕೆಯಿಂದ ಎಬ್ಬಿಸಿ ಕಳುಹಿಸಿದ ಘಟನೆಗೆ ಸಂಬಂಧಿಸಿ ವಿಪಕ್ಷ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಟುವಾಗಿ ಟೀಕಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ “ಅಧಿಕಾರದ ಅಮಲು ನೆತ್ತಿಗೆ ಏರಿದಾಗ ಈ ರೀತಿಯ ದುರಹಂಕಾರದ ಮಾತುಗಳು ಬರುತ್ತೆ. ವೇದಿಕೆ ಮೇಲೆ ಜನರ ಮುಂದೆ ಹೀರೋ ಆಗಲು ಹೋದ ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗೆ ಏಕವಚನದಲ್ಲಿ ಕರೆದು ದುರಹಂಕಾರ ತೋರಿಸಿದ್ದಾರೆ.

ಹಣ ಹಂಚಿ ರಾಜಕೀಯ ಪ್ರಭಾವ ಬಳಸಿ ಚುನಾವಣೆ ಗೆಲ್ಲುವ ಸಿದ್ದರಾಮಯ್ಯನವರೇ, ಅವರು ನಿಮ್ಮಂತೆ ದಲಿತರನ್ನು ತುಳಿದು ದಲಿತರ ಅಧಿಕಾರ ಆಸ್ತಿ ಕಿತ್ತುಕೊಂಡು ಅಧಿಕಾರಿ ಆಗಿಲ್ಲ. ಕಷ್ಟಪಟ್ಟು ಹಗಲುರಾತ್ರಿ ಎನ್ನದೇ ಓದಿ ದೇಶದ ಅತ್ಯುನ್ನತ ಅಧಿಕಾರವನ್ನು ಗಿಟ್ಟಿಸಿಕೊಂಡಿದ್ದಾರೆ. ಗೌರವ ಕೊಟ್ಟು ಗೌರವ ಪಡೆಯುವ ವಿವೇಕ ರಾಜ್ಯದ ಮುಖ್ಯಮಂತ್ರಿಗೆ ಇಲ್ಲ ಎಂದರೆ ಹೇಗೆ? ಎಂದು ಬಿಜೆಪಿ ಪ್ರಶ್ನಿಸಿದೆ.

ಟಾಪ್ ನ್ಯೂಸ್

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

4-mnglr

Kadaba ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಸೂಚನೆ

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

3-bantwala

Bantwala: ಡೀಸೆಲ್‌ ಲೋಡ್ ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್‌ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ

2-yadagiri-3

Yadagiri: ಮೈಲಾಪುರ ಜಾತ್ರೆಯಲ್ಲಿ ಕುರಿ ಮರಿ ಎಸೆತ.!

Kiccha Sudeep: ಒಬ್ಬ ನಾಯಕ ನಟನ ಪಾತ್ರದಿಂದ ದೂರ ಆಗಬಲ್ಲೆ.. ನಿವೃತ್ತಿ ಬಗ್ಗೆ ಕಿಚ್ಚನ ಮಾತು

Kiccha Sudeep: ಒಬ್ಬ ನಾಯಕ ನಟನ ಪಾತ್ರದಿಂದ ದೂರ ಆಗಬಲ್ಲೆ.. ನಿವೃತ್ತಿ ಬಗ್ಗೆ ಕಿಚ್ಚನ ಮಾತು

Makar Sankranti: ರೇಷ್ಮೆ ಜರಿಯ ಸಂಕ್ರಮಣ ಸಂಭ್ರಮ: ಮಗಳು ನೆನಪಿಸಿದ ಅಮ್ಮನ ಬಾಲ್ಯದ ನೆನಪು

Makar Sankranti: ರೇಷ್ಮೆ ಜರಿಯ ಸಂಕ್ರಮಣ ಸಂಭ್ರಮ: ಮಗಳು ನೆನಪಿಸಿದ ಅಮ್ಮನ ಬಾಲ್ಯದ ನೆನಪು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hosapete-CM

Mass Marriage: ಹೆಚ್ಚು ಮಕ್ಕಳು ಬೇಡ, ಎರಡೇ ಸಾಕು: ಸಿಎಂ ಸಿದ್ದರಾಮಯ್ಯ ಸಲಹೆ

8-hampi

Hampi: ಹಂಪಿ ಉತ್ಸವಕ್ಕೆ ಮಹೂರ್ತ ಫಿಕ್ಸ್! ಫೆ.28 ರಿಂದ 3 ದಿನ ಉತ್ಸವ ಆಚರಣೆ 

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

5-sirsi

Sirsi: ಸಂಸದ ಕಾಗೇರಿ ಮನೆ ಅಂಗಳದಲ್ಲಿ ಚಿರತೆ ಓಡಾಟ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

6

Padubidri: ಇಲ್ಲಿ ದೊಂದಿಯೇ ಬೆಳಕು, ಮರಳೇ ಪ್ರಸಾದ!

4-mnglr

Kadaba ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಸೂಚನೆ

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

Neha Kakkar: ಟ್ರೇಡಿಂಗ್ ಹಗರಣದಲ್ಲಿ ಖ್ಯಾತ ಗಾಯಕಿ ನೇಹಾ ಕಕ್ಕರ್‌ ಬಂಧನ? ಫೋಟೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.